ಬಿಬಿಎಂಪಿಗೆ ಎನ್‌ಜಿಟಿ ದಂಡ, ಸುಪ್ರೀಂ ಮೊರೆ ಹೋಗಲಿದೆ ಪಾಲಿಕೆ

ಬೆಂಗಳೂರು, ಡಿಸೆಂಬರ್ 14 : ರಾಷ್ಟ್ರೀಯ ಹಸಿರು ನ್ಯಾಯಮಂಡಳಿ ಬಿಬಿಎಂಪಿಗೆ 25 ಕೋಟಿ ದಂಡ ವಿಧಿಸಿದೆ. ಈ ತೀರ್ಪನ್ನು ಸುಪ್ರೀಂಕೋರ್ಟ್‌ನಲ್ಲಿ ಪ್ರಶ್ನೆ ಮಾಡಲು ಬಿಬಿಎಂಪಿ ನಿರ್ಧರಿಸಿದೆ.

ನಗರದ ಬೆಳ್ಳಂದೂರು, ವರ್ತೂರು ಮತ್ತು ಅಗರ ಕೆರೆಗಳ ಮಾಲಿನ್ಯಕ್ಕೆ ಸಂಬಂಧಿಸಿದ ಪ್ರಕರಣದ ವಿಚಾರಣೆಯನ್ನು ಪೂರ್ಣಗೊಳಿಸಿದ್ದ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ (ಎನ್‌ಜಿಟಿ) ರಾಜ್ಯ ಸರ್ಕಾರಕ್ಕೆ 50 ಕೋಟಿ, ಬಿಬಿಎಂಪಿಗೆ 25 ಕೋಟಿ ದಂಡ ವಿಧಿಸಿತ್ತು.

BBMP to move Supreme Court over NGT lake penalty

ಬೆಂಗಳೂರಿನ ಕೆರೆಗಳ ಪುನಶ್ಚೇತನ ಕಾರ್ಯಕ್ಕಾಗಿ ಸರ್ಕಾರ 500 ಕೋಟಿ ಮೀಸಲಿಡಬೇಕು. ದಂಡ ಮೊತ್ತವನ್ನು ಕೇಂದ್ರ ಮತ್ತು ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಗೆ ಪಾವತಿಸಬೇಕು ಎಂದು ನ್ಯಾಯಮೂರ್ತಿ ಆದರ್ಶ ಕುಮಾರ್ ಗೋಯೆಲ್ ನೇತೃತ್ವದ ಪೀಠ ಆದೇಶ ನೀಡಿತ್ತು.

ಉಪ ಮುಖ್ಯಮಂತ್ರಿ ಮತ್ತು ಬೆಂಗಳೂರು ನಗರಾಭಿವೃದ್ಧಿ ಸಚಿವ ಡಾ.ಜಿ.ಪರಮೇಶ್ವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಎನ್‌ಜಿಟಿ ಆದೇಶವನ್ನು ಪ್ರಶ್ನಿಸಲು ತೀರ್ಮಾನ ಕೈಗೊಳ್ಳಲಾಗಿದೆ. 'ತೀರ್ಪನ್ನು ಪ್ರಶ್ನೆ ಮಾಡುತ್ತೇವೆ. ಪರಿಸ್ಥಿತಿಗೆ ನಾವು ಮಾತ್ರ ಹೊಣೆಯಲ್ಲ' ಎಂದು ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್ ಹೇಳಿದ್ದಾರೆ.

'ಬೆಂಗಳೂರು ಜಲಮಂಡಳಿ, ಸಣ್ಣ ನೀರಾವರಿ ಇಲಾಖೆಗಳು ಸಹ ಈ ವಿಚಾರದಲ್ಲಿ ಜವಾಬ್ದಾರಿ ತೆಗೆದುಕೊಳ್ಳಬೇಕು. ಎನ್‌ಜಿಟಿ ಆದೇಶವನ್ನು ನಾವು ಸುಪ್ರೀಂಕೋರ್ಟ್‌ನಲ್ಲಿ ಪ್ರಶ್ನೆ ಮಾಡುತ್ತೇವೆ' ಎಂದು ಆಯುಕ್ತರು ತಿಳಿಸಿದ್ದಾರೆ.

ನಗರದ ಬೆಳ್ಳಂದೂರು, ವರ್ತೂರು ಮತ್ತು ಅಗರ ಕೆರೆಗಳ ಸಂರಕ್ಷಣೆಯನ್ನು ರಾಜ್ಯ ಸರ್ಕಾರ, ಬಿಬಿಎಂಪಿ ನಿರ್ಲಕ್ಷಿಸಿವೆ. ನೀರು ಹರಿದು ಬರುವ ರಾಜಾಕಾಲುವೆಗಳ ಅತಿಕ್ರಮಣ ತಡೆಯುವಲ್ಲಿ ವಿಫಲವಾಗಿವೆ. ಘನತ್ಯಾಜ್ಯ ನಿರ್ವಹಣೆ ಸ್ಥಳೀಯ ಆಡಳಿತದ ಕೆಸಲವಾದರೂ, ಕೆರೆಗಳಿಗೆ ತ್ಯಾಜ್ಯ ಹರಿಬಿಡುತ್ತಿರುವುದು ಗಂಭೀರ ಸ್ವರೂಪದ ಅಪರಾಧ ಎಂದು ನ್ಯಾಯಪೀಠ ಹೇಳಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+