ಬಿಬಿಎಂಪಿ ಎಲ್ಐಸಿಗೆ 35 ಕೋಟಿ ಕಟ್ಟಬೇಕು
ಬೆಂಗಳೂರು, ನ.12 : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ನೌಕರರ ಸಂಬಳದಿಂದ ಕಡಿತ ಮಾಡಿದ ವಿಮಾ ಕಂತಿನ ಹಣವನ್ನು ಆರು ತಿಂಗಳಿನಿಂದ ಭಾರತೀಯ ಜೀವವಿಮಾ ನಿಗಮಕ್ಕೆ ಪಾವತಿ ಮಾಡಿಲ್ಲ. ಸುಮಾರು 35 ಕೋಟಿಯಷ್ಟು ಹಣವನ್ನು ಕಟ್ಟಿ ಎಂದು ಎಲ್ಐಸಿ ಬಿಬಿಎಂಪಿ ಆಯುಕ್ತರಿಗೆ ಪತ್ರ ಬರೆದಿದೆ.
ನಾಲ್ಕು ದಿನಗಳ ಹಿಂದೆ ಎಲ್ಐಸಿ ಬಾಕಿ ಉಳಿಸಿಕೊಂಡ ಕಂತಿನ ಮೊತ್ತವನ್ನು ಬಡ್ಡಿಸಹಿತ ಪಾವತಿ ಮಾಡಬೇಕು ಎಂದು ಆಯುಕ್ತರಿಗೆ ಪತ್ರ ಬರೆದಿದ್ದು, ತಡವಾಗಿ ಹಣ ಪಾವತಿ ಮಾಡಿದರೆ ದಂಡವನ್ನು ಕಟ್ಟಬೇಕಾಗುತ್ತದೆ ಎಂದು ಪತ್ರದಲ್ಲಿ ತಿಳಿಸಿದೆ. ಆರು ತಿಂಗಳಿನಿಂದ ನೌಕರರ ವಿಮಾ ಹಣವನ್ನು ಸಂಬಳದಲ್ಲಿ ಕಡಿತ ಮಾಡಿದ್ದರೂ ಅದನ್ನು ಎಲ್ಐಸಿಗೆ ಪಾವತಿ ಮಾಡಿಲ್ಲ. [ಜನಧನ ಯೋಜನೆಯಡಿ ಜೀವ ವಿಮಾ ಸೌಲಭ್ಯ]

ಕಾಚರಕನಹಳ್ಳಿ ವಾರ್ಡ್ನ ಸದಸ್ಯರಾದ ಪದ್ಮನಾಭ ರೆಡ್ಡಿ ಅವರು ಎಲ್ಐಸಿ ಅಧಿಕಾರಿಗಳು ಬರೆದ ಪತ್ರವನ್ನು ಮಾಧ್ಯಮಗಳಿಗೆ ಬಿಡುಗಡೆ ಮಾಡಿದ್ದು, ಸಂಬಳದಿಂದ ಕಡಿತ ಮಾಡಲಾದ ವಿಮಾ ಕಂತಿನ ಮೊತ್ತವೂ ನೌಕರರಿಗೆ ಸೇರಿದ್ದು. ಅದನ್ನು ತನ್ನ ಬಳಿ ಇಟ್ಟುಕೊಳ್ಳಲು ಬಿಬಿಎಂಪಿಗೆ ಯಾವುದೇ ಅಧಿಕಾರ ಇಲ್ಲ. ಆಯಾ ತಿಂಗಳಿನಲ್ಲಿ ಪಾವತಿ ಮಾಡಲು ಹಣಕಾಸು ಅಧಿಕಾರಿಗಳು ಲೋಪ ಎಸಗಿದ್ದಾರೆ ಎಂದು ರೆಡ್ಡಿ ದೂರಿದರು.
ಬಿಬಿಎಂಪಿಯಲ್ಲಿ 9,500 ನೌಕರರಿದ್ದು, ಅವರ 6 ತಿಂಗಳ ವಿಮಾ ಕಂತು ಸುಮಾರು 35 ಕೋಟಿಗೂ ಹೆಚ್ಚಾಗುತ್ತದೆ. ಇಷ್ಟು ಹಣವನ್ನು ಎಲ್ಐಸಿಗೆ ಪಾವತಿ ಮಾಡಬೇಕಾಗಿದೆ. ಈ ವಿಷಯವನ್ನು ಈಗಾಗಲೇ ಆಯುಕ್ತರ ಗಮನಕ್ಕೂ ತರಲಾಗಿದೆ ಎಂದು ತಿಳಿಸಿದರು. [ಸರ್ಕಾರದಿಂದ ಬಿಬಿಎಂಪಿಗೆ ಅನುದಾನ ಬೇಕು]
ಮೂರು ದಿನದಲ್ಲಿ ಪಾವತಿ ಮಾಡುತ್ತೇವೆ : ಎಲ್ಐಸಿಗೆ ವಿಮಾ ಕಂತು ಪಾವತಿ ಮಾಡಬೇಕಾಗಿರುವುದು ನಿಜ, ಮೂರು ದಿನದಲ್ಲಿ ಈ ಹಣವನ್ನು ಪಾವತಿ ಮಾಡಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಪಾವತಿ ಮಾಡದಿರುವುದಕ್ಕೆ ಕಾರಣ ತಿಳಿಸುವಂತೆಯೂ ನಿರ್ದೇಶನ ನೀಡಿದ್ದೇನೆ ಎಂದು ಬಿಬಿಎಂಪಿ ಆಯುಕ್ತ ಎಂ.ಲಕ್ಷ್ಮೀನಾರಾಯಣ ಅವರು ಮಾಧ್ಯಮಗಳಿಗೆ ಹೇಳಿದ್ದಾರೆ.
-
AI ಎಫೆಕ್ಟ್: 2026ರಲ್ಲೂ ಮುಂದುವರಿದ ಉದ್ಯೋಗ ಕಡಿತ; ಯಾವ್ಯಾವ ಕಂಪನಿಗಳಿಂದ ಎಷ್ಟು ವಜಾ? ಪಟ್ಟಿ ಇಲ್ಲಿದೆ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್












Click it and Unblock the Notifications