ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ವಿಡಿಯೋ ಕಾನ್ಫರೆನ್ಸ್ ಮೂಲಕ ಬಿಬಿಎಂಪಿ ಬಜೆಟ್ ಮಂಡನೆ

|
Google Oneindia Kannada News

ಬೆಂಗಳೂರು, ಏಪ್ರಿಲ್ 14 : ಕೊರೊನಾ ಹರಡದಂತೆ ತಡೆಯಲು ಲಾಕ್ ಡೌನ್ ಘೋಷಣೆ ಮಾಡಲಾಗಿತ್ತು. ಪ್ರಸ್ತುತ ಲಾಕ್ ಡೌನ್‌ಅನ್ನು ಮೇ 3ರ ತನಕ ವಿಸ್ತರಣೆ ಮಾಡಲಾಗಿದೆ. ಇದರಿಂದಾಗಿ ಬಿಬಿಎಂಪಿ ಬಜೆಟ್ ಮಂಡನೆ ಮಾಡಲು ಹೊಸ ತಂತ್ರ ಅನುಸರಿಸಲಿದೆ.

ಪ್ರಧಾನಿ ನರೇಂದ್ರ ಮೋದಿ ವಿಡಿಯೋ ಕಾನ್ಫರೆನ್ಸ್ ಮೂಲಕ ಸಚಿವ ಸಂಪುಟ ಸಭೆ ನಡೆಸಿದ್ದರು. ಈಗ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವಿಡಿಯೋ ಕಾನ್ಫರೆನ್ಸ್‌ ಮೂಲಕ 2020ನೇ ಸಾಲಿನ ಬಜೆಟ್ ಮಂಡನೆ ಮಾಡಲಿದೆ.

ಲಾಕ್ ಡೌನ್ ; ವಲಸೆ ಕಾರ್ಮಿಕರ ನೆರವಿಗೆ ನಿಂತ ಬಿಬಿಎಂಪಿ ಲಾಕ್ ಡೌನ್ ; ವಲಸೆ ಕಾರ್ಮಿಕರ ನೆರವಿಗೆ ನಿಂತ ಬಿಬಿಎಂಪಿ

ಹೌದು, ಮಾರ್ಚ್ 30 ಅಥವ 31ರಂದು ಬಿಬಿಎಂಪಿಯ ಬಜೆಟ್ ಮಂಡನೆಯಾಗಬೇಕಿತ್ತು. ಆದರೆ, ಲಾಕ್ ಡೌನ್ ಹಿನ್ನಲೆಯಲ್ಲಿ ಅದು ಸಾಧ್ಯವಾಗಿಲ್ಲ. ಈಗ ಲಾಕ್ ಡೌನ್ ವಿಸ್ತರಣೆಗೊಂಡಿದೆ. ಬಜೆಟ್ ಮಂಡನೆ ಮಾಡದಿರಲು ಸಾಧ್ಯವಿಲ್ಲ.

ಜನರ ನೆರವಿಗೆ ಬಿಬಿಎಂಪಿಯಿಂದ 'ಸಹಾಯ ಸೇತುವೆ' ಅಪ್ಲಿಕೇಶನ್ ಜನರ ನೆರವಿಗೆ ಬಿಬಿಎಂಪಿಯಿಂದ 'ಸಹಾಯ ಸೇತುವೆ' ಅಪ್ಲಿಕೇಶನ್

BBMP To Present 2020 Budget Through Video Conference

ಬಿಬಿಎಂಪಿಯಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ತಂತ್ರಜ್ಞಾನದ ಸಹಾಯದಿಂದ ಬಜೆಟ್ ಮಂಡನೆ ಮಾಡಲಿದೆ. ಇದಕ್ಕಾಗಿ ಕರ್ನಾಟಕ ಸರ್ಕಾರದ ಒಪ್ಪಿಗೆಯನ್ನು ಸಹ ಪಡೆದಿದೆ. ಏಪ್ರಿಲ್ 15ರ ಬುಧವಾರ ಬಜೆಟ್ ಮಂಡನೆ ದಿನಾಂಕ ನಿಗದಿಯಾಗಲಿದೆ.

ಬಜೆಟ್ 2020: ಪ್ರವಾಸೋದ್ಯಮ ಬೆಳವಣಿಗೆಗೆ ಯಡಿಯೂರಪ್ಪ ಮಾಸ್ಟರ್ ಪ್ಲಾನ್ಬಜೆಟ್ 2020: ಪ್ರವಾಸೋದ್ಯಮ ಬೆಳವಣಿಗೆಗೆ ಯಡಿಯೂರಪ್ಪ ಮಾಸ್ಟರ್ ಪ್ಲಾನ್

ಪಾಲಿಕೆಯಲ್ಲಿ 198 ವಾರ್ಡ್‌ಗಳಿವೆ. ಎಲ್ಲಾ ಪಾಲಿಕೆ ಸದಸ್ಯರು, ಅಧಿಕಾರಿಗಳ ಕೈಯಲ್ಲಿ ಸ್ಮಾರ್ಟ್ ಫೋನ್ ಇದೆ. ಆದ್ದರಿಂದ ವಿಡಿಯೋ ಕಾನ್ಫರೆನ್ಸ್ ಮೂಲಕ ಬಜೆಟ್ ಮಂಡನೆ ಮಾಡಲಾಗುತ್ತದೆ. ನಗರದ ಅಭಿವೃದ್ಧಿ ಜೊತೆಗೆ ಕೊರೊನಾ ತಡೆ ಬಗ್ಗೆಯೂ ಬಜೆಟ್‌ನಲ್ಲಿ ಗಮನಹರಿಸುವ ನಿರೀಕ್ಷೆ ಇದೆ.

ಬಿಬಿಎಂಪಿ ಮೇಯರ್ ಗೌತಮ್ ಕುಮಾರ್ ಜೈನ್ ಈ ಕುರಿತು ಮಾಹಿತಿ ನೀಡಿದ್ದಾರೆ. "ನಾವು ಈ ಕುರಿತು ಅಧಿಕಾರಿಗಳು, ಬಿಬಿಎಂಪಿ ಸದಸ್ಯರ ಜೊತೆ ಚರ್ಚೆ ನಡೆಸಲಿದ್ದೇವೆ" ಎಂದು ಹೇಳಿದ್ದಾರೆ.

ಬಿಬಿಎಂಪಿ ವಿರೋಧ ಪಕ್ಷದ ನಾಯಕ ಅಬ್ದುಲ್ ವಜೀದ್ ಈ ತೀರ್ಮಾನವನ್ನು ಬೆಂಬಲಿಸಿದ್ದಾರೆ. "ಬಜೆಟ್ ಮಂಡನೆ ಮಾಡದೇ ಯಾವುದೇ ಕಾಮಗಾರಿ ಕೈಗೊಳ್ಳುವುದು ಅಸಾಧ್ಯ. ಚರ್ಚೆ ಮತ್ತು ಸಲಹೆಗಳನ್ನು ನೀಡಲು ಸಾಕಷ್ಟು ಸಮಯವನ್ನು ನಿಗದಿ ಮಾಡಬೇಕು" ಎಂದು ಒತ್ತಾಯಿಸಿದ್ದಾರೆ.

ಬಿಬಿಎಂಪಿಯಲ್ಲಿ ಕಳೆದ ನಾಲ್ಕು ವರ್ಷದಿಂದ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಆಡಳಿತವಿತ್ತು. ಇದೇ ಮೊದಲ ಬಾರಿಗೆ ಬಿಜೆಪಿ ಅಧಿಕಾರಕ್ಕೆ ಬಂದಿದೆ. ಬಿಜೆಪಿ ಅಧಿಕಾರ ಪಡೆದ ಬಳಿಕ ಮಂಡನೆ ಮಾಡುತ್ತಿರುವ ಮೊದಲ ಬಜೆಟ್ ಇದಾಗಿದೆ.

English summary
Due to lockdown Bruhat Bengaluru Mahanagara Palike (BBMP) will present 2020 budget through video conference. Date of the budget will announced on April 15.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X