ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಸಂಘ-ಸಂಸ್ಥೆ ಖಾಸಗಿ ಗ್ರಂಥಾಲಯ ಸ್ಥಾಪಿಸಿದರೆ ಬಿಬಿಎಂಪಿಯಿಂದ ಉಚಿತ ಪುಸ್ತಕ

|
Google Oneindia Kannada News

ಬೆಂಗಳೂರು, ನವೆಂಬರ್ 10: ಬೆಂಗಳೂರು ನಗರದ ವ್ಯಾಪ್ತಿಯಲ್ಲಿ ಸಂಘ ಸಂಸ್ಥೆಗಳು ಖಾಸಗಿ ಗ್ರಂಥಾಲಯ ತೆರೆಯಲು ಮುಂದೆ ಬಂದಲ್ಲಿ ಅವರಿಗೆ ಸಹಕರಿಸಲಾಗುವುದು ಎಂದು ಬಿಬಿಎಂಪಿ ಆಡಳಿತಗಾರ ರಾಕೇಶ್ ಸಿಂಗ್ ತಿಳಿಸಿದರು.

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯ 5 ವಲಯಗಳ ನಗರ ಕೇಂದ್ರ ಗ್ರಂಥಾಲಯ ಪ್ರಾಧಿಕಾರದ ಜೊತೆ ಗುರುವಾರ ಸಭೆ ನಡೆಯಿತು. ಸಭೆಯಲ್ಲಿ ಮಾತನಾಡಿದ ರಾಕೇಶ್ ಸಿಂಗ್, ಸಂಘ ಸಂಸ್ಥೆಗಳು ಖಾಸಗಿ ಗ್ರಂಥಾಲಯ ತೆರೆಯಲು ಮುಂದೆ ಬಂದರೆ ಅವರೊಂದಿಗೆ ಒಪ್ಪಂದ ಮಾಡಿಕೊಂಡು ಉಚಿತವಾಗಿ ಪುಸ್ತಕ ನೀಡಲಾಗುವುದು ಎಂದರು.

ನಗರದಲ್ಲಿ ಹೆಚ್ಚೆಚ್ಚು ಗ್ರಂಥಾಲಯಗಳನ್ನು ತೆರೆಯುವುದರಿಂದ ಸಾರ್ವಜನಿಕರಿಗೆ ಓದುವ ಹವ್ಯಾಸ ಬೆಳೆಸಲು ಸಹಕಾರಿಯಾಗುತ್ತದೆ. ನಗರ ವ್ಯಾಪ್ತಿಯಲ್ಲಿನ ಪಾಲಿಕೆ ಮತ್ತು ಸರ್ಕಾರದ ಶಾಲಾ/ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಉಪಯುಕ್ತವಾಗುವ ಪುಸ್ತಕಗಳನ್ನು ಉಚಿತವಾಗಿ ನೀಡಲಾಗುವುದು. ಅದಕ್ಕಾಗಿ ಪ್ರಾಂಶುಪಾಲರಿಂದ ಪುಸ್ತಕಗಳ ಪಟ್ಟಿಯನ್ನು ಪಡೆಯುವಂತೆ ಸೂಚಿಸಿದರು.

BBMP to provide free books of associations and organizations to set up private libraries

ಬಿಬಿಎಂಪಿ ವ್ಯಾಪ್ತಿಯ 243 ವಾರ್ಡ್‌ಗಳಲ್ಲಿ ಗ್ರಂಥಾಲಯ ತೆರೆಯಲು ಬಿಬಿಎಂಪಿ ಕಟ್ಟಡಗಳನ್ನು ಗುರುತಿಸಿ ಗ್ರಂಥಾಲಯ ಸ್ಥಾಪಿಸುವ ಬಗ್ಗೆ ಕ್ರಿಯಾಯೋಜನೆ ರೂಪಿಸುವಂತೆ ಉಪನಿರ್ದೇಶಕರುಗಳಿಗೆ ಅವರು ಸೂಚಿದರು. ಹೊಸದಾಗಿ ಗ್ರಂಥಾಲಯ ಕಟ್ಟಡ ನಿರ್ಮಿಸುವ ಸಂದರ್ಭದಲ್ಲಿ ಗ್ರಂಥಾಲಯ ಅಧಿಕಾರಿ, ಸಿಬ್ಬಂದಿ ಹೆಚ್ಚಿನ ಕಾರ್ಯಕ್ಷಮತೆಗೆ ಅನುಕೂಲವಾಗುವಂತೆ ಗ್ರಂಥಾಲಯ ಪಕ್ಕದಲ್ಲಿ ವಸತಿ ಗೃಹ ನಿರ್ಮಿಸಲು ಯೋಜನೆ ರೂಪಿಸಬೇಕು ಎಂದರು.

ಬಿಬಿಎಂಪಿ ವ್ಯಾಪ್ತಿಯ ಗ್ರಂಥಾಲಯಗಳ ಸ್ಥಾಪನೆಗೆ ಕರ ಬಳಕೆ

ಬಿಬಿಎಂಪಿ ವತಿಯಿಂದ ನೀಡುವ ಗ್ರಂಥಾಲಯ ಕರವನ್ನು ಬಿಬಿಎಂಪಿ ವ್ಯಾಪ್ತಿಯಲ್ಲಿಯೇ ಗ್ರಂಥಾಲಯಗಳ ಸ್ಥಾಪನೆಗೆ ಉಪಯೋಗಿಸಬೇಕು. ಈ ನಿಟ್ಟಿನಲ್ಲಿ ಬಿಬಿಎಂಪಿ ಮತ್ತು ಶಿಕ್ಷಣ ಇಲಾಖೆಯ ಉನ್ನತ ಅಧಿಕಾರಿಗಳೊಂದಿಗೆ ಚರ್ಚಿಸಿ ಅನುದಾನ ಹಂಚಿಕೆ ಬಿಡುಗಡೆ ಮಾಡಲು ತೀರ್ಮಾನಿಸಲಾಯಿತು ಎಂದು ಅವರು ತಿಳಿಸಿದರು.

ಸಭೆಯಲ್ಲಿ 5 ವಲಯಗಳ ಗ್ರಂಥಾಲಯಗಳ ಉಪ ನಿರ್ದೇಶಕರು ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.

English summary
Bruhat Bengaluru Mahanagara Palike (BBMP) will provide free books of associations and organizations set up private libraries in Bengaluru city.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X