Breaking; ಕೋವಿಡ್ ನಿಯಂತ್ರಣ, ಬಿಬಿಎಂಪಿಯಿಂದ ಸಿಬ್ಬಂದಿ ನೇಮಕ

ಬೆಂಗಳೂರು, ಮೇ 02; ಬೆಂಗಳೂರು ನಗರದಲ್ಲಿ ಕೋವಿಡ್ ಪ್ರಕರಣಗಳ ನಿಯಂತ್ರಣಕ್ಕೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಕ್ರಮ ಕೈಗೊಂಡಿದೆ. ಕೋವಿಡ್ ಕರ್ತವ್ಯಕ್ಕಾಗಿಯೇ 500 ಸಿಬ್ಬಂದಿ ನೇಮಕ ಮಾಡಿಕೊಳ್ಳಲಿದೆ.

ಭಾನುವಾರ ಬೆಂಗಳೂರು ನಗರದಲ್ಲಿ 93 ಹೊಸ ಕೋವಿಡ್ ಪ್ರಕರಣ ದಾಖಲಾಗಿದೆ. ನಗರದ ಸಕ್ರಿಯ ಪ್ರಕರಣಗಳ ಸಂಖ್ಯೆ 1701 ಆಗಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ಕೋವಿಡ್ ಪರೀಕ್ಷೆ ಸಂಖ್ಯೆಯನ್ನು ಹೆಚ್ಚಿಸಲು ಕ್ರಮ ಕೈಗೊಳ್ಳಲಾಗಿದೆ.

ಈ ಹಿನ್ನಲೆಯಲ್ಲಿ ಬಿಬಿಎಂಪಿ 200 ಸ್ವ್ಯಾಬ್ ಸಂಗ್ರಹ ಮಾಡುವವರು, ಡೇಟಾ ಆಪರೇಟರ್, ವೈದ್ಯರನ್ನು ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲಿದೆ. ಈ ಹಿಂದೆ ಕೋವಿಡ್ ಮೊದಲ ಮತ್ತು 2ನೇ ಅಲೆ ಸಂದರ್ಭದಲ್ಲಿಯೂ ಹೀಗೆ ಸಿಬ್ಬಂದಿ ನೇಮಕ ಮಾಡಲಾಗಿತ್ತು.

BBMP To Recruit 500 People For Covid Duty

ಕಳೆದ ಬಾರಿ ಗುತ್ತಿಗೆ ಆಧಾರದ ಮೇಲೆ ನೇಮಕಗೊಂಡ ಸಿಬ್ಬಂದಿ ಅವಧಿ ಈ ವರ್ಷದ ಮಾರ್ಚ್‌ನಲ್ಲಿ ಅಂತ್ಯಗೊಂಡಿತ್ತು. ಕೋವಿಡ್ ಕರ್ತವ್ಯಕ್ಕೆ ನಿಯೋಜನೆಗೊಂಡ ಇತರ ಸಿಬ್ಬಂದಿಗಳನ್ನು ಲಸಿಕೆ ನೀಡುವ ಕಾರ್ಯಕ್ಕೆ ನಿಯೋಜನೆ ಮಾಡಲಾಗಿತ್ತು.

ರಾಜ್ಯದ ಕೋವಿಡ್ ಪರಿಸ್ಥಿತಿ ಬಗ್ಗೆ ತಜ್ಞರ ಸಮಿತಿ ಜೊತೆ ಸಭೆ ನಡೆಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರಾಜ್ಯದಲ್ಲಿ ಕೋವಿಡ್ ಪರೀಕ್ಷೆಗಳನ್ನು ಹೆಚ್ಚಿಸುವಂತೆ ಸೂಚನೆ ನೀಡಿದ್ದರು.

ರಾಜ್ಯದಲ್ಲಿ 25 ಸಾವಿರ ಪರೀಕ್ಷೆಗಳನ್ನು ಪ್ರತಿದಿನ ನಡೆಸಲು ಗುರಿ ನೀಡಲಾಗಿದೆ. ಇದರಲ್ಲಿ ಬೆಂಗಳೂರು ನಗರದಲ್ಲಿ 10 ಸಾವಿರ ಪರೀಕ್ಷೆಗಳನ್ನು ನಡೆಸಲು ತೀರ್ಮಾನಿಸಲಾಗಿದೆ. ಆದ್ದರಿಂದ ಹೆಚ್ಚಿನ ಸಿಬ್ಬಂದಿ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ.

ಭಾನುವಾರದ ಹೆಲ್ತ್ ಬುಲೆಟಿನ್ ಪ್ರಕಾರ ಕರ್ನಾಟಕದಲ್ಲಿ 104 ಹೊಸ ಕೋವಿಡ್ ಪ್ರಕರಣ ದಾಖಲಾಗಿದೆ. ರಾಜ್ಯದ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 1780.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+