ಬಿಬಿಎಂಪಿಯಿಂದ 50-60 ಬೆಡ್ ಕೋವಿಡ್ ಕೇರ್ ಸೆಂಟರ್ ಸ್ಥಾಪನೆ
ಬೆಂಗಳೂರು, ಏಪ್ರಿಲ್ 07; ಬೆಂಗಳೂರು ನಗರದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಜನರು ಗುಂಪು ಸೇರುವುದನ್ನು ತಡೆಯಲು ಬುಧವಾರದಿಂದ ಸೆಕ್ಷನ್ 144 ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ಮಂಗಳವಾರ ಬೆಂಗಳೂರು ನಗರ ಜಿಲ್ಲೆಯಲ್ಲಿ 4,266 ಹೊಸ ಕೋವಿಡ್ ಪ್ರಕರಣ ದಾಖಲಾಗಿದೆ. ಹೊಸ ಪ್ರಕರಣಗಳ ಸಂಖ್ಯೆ ಹೆಚ್ಚಾದಂತೆ ಕೋವಿಡ್ ಕೇರ್ ಸೆಂಟರ್‌ಗಳ ಸ್ಥಾಪನೆ ಕುರಿತು ಚರ್ಚೆ ಆರಂಭವಾಗಿದೆ.
ರಾಜ್ಯಕ್ಕೆ 15 ಲಕ್ಷಕ್ಕೂ ಹೆಚ್ಚು ಕೋವಿಡ್ ಡೋಸ್: ಡಾ.ಕೆ.ಸುಧಾಕರ್
ಬಿಬಿಎಂಪಿ ಆಯುಕ್ತರು ವಲಯ ಮಟ್ಟದ ಅಧಿಕಾರಿಗಳಿಗೆ ಚಿಕ್ಕ-ಚಿಕ್ಕ ಕೋವಿಡ್ ಕೇರ್ ಸೆಂಟರ್‌ಗಳನ್ನು ಸ್ಥಾಪನೆ ಮಾಡಲು ಜಾಗ ಗುರುತಿಸಬೇಕು ಎಂದು ಸೂಚನೆ ನೀಡಿದ್ದಾರೆ. 50-60 ಹಾಸಿಗೆಗಳ ಕೇರ್ ಸೆಂಟರ್ ಸ್ಥಾಪನೆಯಾಗಲಿದೆ.
ದೇಶದಲ್ಲಿ ಕೋವಿಡ್ ಲಸಿಕೆಗೆ ಕೊರತೆ ಉಂಟಾಗಿಲ್ಲ: ಕೇಂದ್ರ ಸರ್ಕಾರ
ಬೆಂಗಳೂರು ನಗರದಲ್ಲಿ 32605 ಸಕ್ರಿಯ ಪ್ರಕರಣಗಳಿವೆ. ಸೋಂಕಿನ ಲಕ್ಷಣಗಳು ಇಲ್ಲದವರಿಗೆ ಚಿಕಿತ್ಸೆ ನೀಡಲು ಚಿಕ್ಕ ಕೋವಿಡ್ ಕೇರ್ ಸೆಂಟರ್ ಸಿದ್ಧಪಡಿಸಲಾಗುತ್ತದೆ. ಬಿಬಿಎಂಪಿ ಪ್ರತಿ ವಲಯದಲ್ಲಿ ಈ ಮಾದರಿಯ 2 ಅಥವ 3 ಕೇರ್ ಸೆಂಟರ್ ಆರಂಭವಾಗಲಿದೆ.
ಲಸಿಕೆ ಪಡೆದಿದ್ದ ಚಾಮರಾಜನಗರ ಡಿಸಿಗೆ ಕೋವಿಡ್
ರೋಗ ಲಕ್ಷಣಗಳು ಇಲ್ಲದ ಜನರು ಹೋಂ ಐಸೋಲೇಷನ್‌ನಲ್ಲಿ ಇರಲು ಇಷ್ಟ ಪಡುತ್ತಾರೆ. ಆದರೆ ಕೆಲವು ಮನೆಯಲ್ಲಿ ಪ್ರತ್ಯೇಕ ಶೌಚಾಲಯ ಸೇರಿದಂತೆ ಅಗತ್ಯ ವ್ಯವಸ್ಥೆಗಳು ಇಲ್ಲ. ಅವರನ್ನು ಈ ಕೇರ್ ಸೆಂಟರ್‌ಗೆ ದಾಖಲು ಮಾಡಲಾಗುತ್ತದೆ.
2020ರಲ್ಲಿ ಬಿಬಿಎಂಪಿ ಬಿಐಇಸಿಯಲ್ಲಿ ದೇಶದಲ್ಲಿಯೇ ದೊಡ್ಡ ಕೋವಿಡ್ ಕೇರ್ ಸೆಂಟರ್ ಆರಂಭಿಸಿತ್ತು. ಈಗ ಬಿಬಿಎಂಪಿ ವಯಲಗಳ ಹೋಟೆಲ್, ಮಾರಾಟವಾಗದ ಅಪಾರ್ಟ್‌ಮೆಂಟ್‌ಗಳಲ್ಲಿ ಚಿಕ್ಕ-ಚಿಕ್ಕ ಕೇರ್ ಸೆಂಟರ್ ಆರಂಭಿಸಲಿದೆ.