BBMP Ward Delimitation: ಮೇಲ್ಮನವಿ ಪುರಸ್ಕರಿಸಿದ ಹೈಕೋರ್ಟ್- ಸರ್ಕಾರ, ಬಿಬಿಎಂಪಿಗೆ ನೋಟಿಸ್
ಬೆಂಗಳೂರು, ನವೆಂಬರ್ 24: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವಾರ್ಡ್ ವಿಂಗಡನೆ ಅಧಿಸೂಚನೆ ಕುರಿತ ಅರ್ಜಿಗಳ ಸಂಬಂಧ ನ್ಯಾಯಾಲಯ ನೀಡಿದ್ದ ಆದೇಶ ಪ್ರಶ್ನಿಸಿ, ಶಾಸಕ ಎಂ.ಸತೀಶ್ ರೆಡ್ಡಿ ಹಾಗೂ ಇತರರು ಸಲ್ಲಿಸಿದ ಅರ್ಜಿಯನ್ನು ಹೈಕೋರ್ಟ್ ಅಂಗೀಕರಿಸಿದೆ. ರಾಜ್ಯ ಸರ್ಕಾರ, ಬಿಬಿಎಂಪಿ ಮತ್ತು ಚುನಾವಣೆ ಆಯೋಗಕ್ಕೆ ನೋಟಿಸ್ ನೀಡಿದೆ.
ಬುಧವಾರ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಪ್ರಸನ್ನ.ಬಿ.ವರಾಳೆ ನೇತೃತ್ವದ ವಿಭಾಗೀಯ ಪೀಠವು ರೀಟ್ ಅರ್ಜಿಗಳನ್ನು ಅಂಗೀಕರಿಸಿತು. ನಂತರ ರಾಜ್ಯ ಸರ್ಕಾರ, ಬಿಬಿಎಂಪಿ ಮತ್ತು ರಾಜ್ಯ ಚುನಾವಣಾ ಆಯೋಗಕ್ಕೆ (ಎಸ್‌ಇಸಿ) ಈ ಸಂಬಂಧ ನೋಟಿಸ್ ನೀಡಿದೆ.
2022ರ ಜುಲೈ 14 ರಂದು ವಾರ್ಡ್‌ಗಳ ವಿಂಗಡಣೆಗೆ ಸಂಬಂಧಿಸಿದಂತೆ ಹೊರಡಿಸಿದ್ದ ಅಧಿಸೂಚನೆಯನ್ನು ಪ್ರಶ್ನಿಸಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿತ್ತು. ಬಿಬಿಎಂಪಿ ಕಾಯ್ದೆ 2020ರ ಸೆಕ್ಷನ್ 7ರ ನಿಬಂಧನೆಗಳು ಒಂದು ವಾರ್ಡ್ ಅನ್ನು ಎರಡು ವಿಧಾನಸಭಾ ಕ್ಷೇತ್ರಗಳಾಗಿ ವಿಸ್ತರಿಸಬಾರದು ಎಂದು ಮೇಲ್ಮನವಿದಾರರು ಅರ್ಜಿಯಲ್ಲಿ ಉಲ್ಲೇಖಿಸಿದ್ದರು. ಆದರೆ ಅರ್ಜಿಗಳನ್ನು ಹೈಕೋರ್ಟ್ ಏಕಸದಸ್ಯ ನ್ಯಾಯಪೀಠವು ಅಂದು ವಜಾಗೊಳಿಸಿತ್ತು.

ವಾರ್ಡ್ ವಿಂಗಡನೆಯಲ್ಲಿ ಹುಳಿಮಾವು ವಾರ್ಡ್ (ಸಂಖ್ಯೆ 239) ಒಂದನ್ನು ಬೊಮ್ಮನಹಳ್ಳಿ ಮತ್ತು ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರಗಳಿಗೆ ಹಂಚಿಕೆ ಮಾಡಿರುವುದು ಸರಿಯಾದ ಕ್ರಮವಲ್ಲ. ವಿಂಗಡಣೆಯಲ್ಲಿ ಲೋಪದೋಷಗಳು ಇವೆ. ಈ ಅಂಶವನ್ನು ಬಿಬಿಎಂಪಿ ಅಧಿಕಾರಿಗಳು ಒಪ್ಪಿಕೊಂಡಿದ್ದರು. ಆದರೆ ಈ ಕುರಿತಾ ಅರ್ಜಿಗಳಲ್ಲು ನ್ಯಾಯಾಲಯದಲ್ಲಿ ವಜಾಗೊಂಡಿದ್ದವು.
ಕೇವಲ ಹೊರಮಾವು ಮಾತ್ರವಲ್ಲದೇ ಅಕ್ಷಯ ಗಾರ್ಡನ್ ಲೇಔಟ್, ಸತ್ಯ ಸಾಯಿ ಲೇಔಟ್, ಶಿರಡಿ ಸಾಯಿನಗರ, ವಿಐಪಿ ಬಡಾವಣೆ ಮತ್ತು ಇನ್ನಿತರ ಕೆಲವು ಸ್ಥಳಗಳು ಎರಡು ವಿಧಾನಸಭಾ ಕ್ಷೇತ್ರಗಳಲ್ಲಿ ಹರಡಿಕೊಂಡಿವೆ. ಇದು ಬಿಬಿಎಂಪಿ ಕಾಯ್ದೆಯ ಸೆಕ್ಷನ್ 7ರ ಉದ್ದೇಶಕ್ಕೆ ವಿರುದ್ಧವಾಗಿದೆ ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ.

ಮುಖ್ಯವಾಗಿ ಬಿಬಿಎಂಪಿ ವ್ಯಾಪ್ತಿಯ ವಾರ್ಡ್‌ಗಳ ವಿಂಗಡಣೆಯಲ್ಲಿ ಜನಸಂಖ್ಯೆಯ ಪ್ರಮಾಣ, ಅದರ ಅಂಕಿಅಂಶಗಳನ್ನು ಉಲ್ಲೇಖಿಸಲಾಗಿಲ್ಲ. ಇದ ಬಿಬಿಎಂಪಿ ಕಾಯ್ದೆಯ ಸೆಕ್ಷನ್ 7ರ ನಿಬಂಧನೆಗಳ ಸ್ಪಷ್ಟ ಉಲ್ಲಂಘನೆ ಆಗಿದೆ. ಈ ಹಿನ್ನೆಲೆ ಹೈಕೋರ್ಟ್ ಬೊಮ್ಮಾನಹಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕ ಎಂ.ಸತೀಶ್ ರೆಡ್ಡಿ ಹಾಗೂ ಇನ್ನಿತರರು ಮೇಲ್ಮನವಿ ಸಲ್ಲಿಸಿದ್ದಾರೆ. ಸದ್ಯ ಹೈಕೋರ್ಟ್ ಅವರ ಅರ್ಜಿಗಳನ್ನು ಅಂಗೀಕರಿಸಿದೆ.












Click it and Unblock the Notifications