• search
 • Live TV
ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬಿಬಿಎಂಪಿ ವಾರ್ಡ್ ಪುನರ್ ವಿಂಗಡಣೆ: ಮಧ್ಯಂತರ ಆದೇಶಕ್ಕೆ ಹೈಕೋರ್ಟ್ ನಕಾರ

By ಎಸ್ ಎಸ್ ಎಸ್
|
Google Oneindia Kannada News

ಬೆಂಗಳೂರು, ಆ.16. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ವಾರ್ಡ್‌ಗಳ ಪುನರ್‌ ವಿಂಗಡಣೆ ಕುರಿತಂತೆ ಮಧ್ಯಂತರ ಆದೇಶ ನೀಡಲು ಹೈಕೋರ್ಟ್ ನಿರಾಕರಿಸಿದೆ.

ಅಲ್ಲದೆ, ವಾರ್ಡ್ ವಿಂಗಡಣೆಯನ್ನು ವಿರೋಧಿಸಿ ಸಲ್ಲಿಸಿರುವ ಅರ್ಜಿಗಳ ಬಗ್ಗೆ ಬಲವಾದ ಆಕ್ಷೇಪ ವ್ಯಕ್ತಪಡಿಸಿರುವ ರಾಜ್ಯ ಸರ್ಕಾರ ಹಾಗೂ ರಾಜ್ಯ ಚುನಾವಣಾ ಆಯೋಗ ಅರ್ಜಿದಾರರ ಯಾವುದೇ ಮನವಿ ಪರಿಗಣಿಸಬಾರದೆಂದು ನ್ಯಾಯಾಲಯಕ್ಕೆ ಮನವಿ ಮಾಡಿವೆ.

ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ ಕಾಯ್ದೆ-2020'ರಂತೆ ಬಿಬಿಎಂಪಿ ವಾರ್ಡ್‌ಗಳ ಪುನರ್‌ ವಿಂಗಡಣೆ ಮಾಡಿರುವ ಸರ್ಕಾರದ ಕ್ರಮ ಪ್ರಶ್ನಿಸಿ ವಕೀಲ ಎಸ್‌. ಇಸ್ಮಾಯಿಲ್‌ ಜಬಿವುಲ್ಲಾ, ಶಾಂತಿನಗರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ, ಮಾಜಿ ಕಾಪೋರೇಟರ್‌ಗಳಾದ ಬಿ.ಎನ್‌. ಮಂಜುನಾಥ್‌ ರೆಡ್ಡಿ, ಎನ್‌. ನಾಗರಾಜ್‌ ಹಾಗೂ ಇತರರು ಸೇರಿ ಸಲ್ಲಿಸಿರುವ ಒಟ್ಟು ಆರು ಅರ್ಜಿಗಳನ್ನು ನ್ಯಾಯಮೂರ್ತಿ ಹೇಮಂತ್‌ ಚಂದನ್‌ ಗೌಡರ್‌ ಅವರಿದ್ದ ಏಕಸದಸ್ಯಪೀಠ ವಿಚಾರಣೆ ನಡೆಸಿತು.

ಅರ್ಜಿಗಳಿಗೆ ಸಂಬಂಧಿಸಿದಂತೆ ಯಾವುದೇ ಮಧ್ಯಂತರ ಆದೇಶ ಅಥವಾ ಮೌಖಿಕ ಸೂಚನೆ ನೀಡಲು ಸಹ ಹೈಕೋರ್ಟ್‌ ನಿರಾಕರಿಸಿ ವಿಚಾರಣೆಯನ್ನು ಬುಧವಾರ ಮಧ್ಯಾಹ್ನ 2.30ಕ್ಕೆ ಮುಂದೂಡಿತು.

ಆಯೋಗಕ್ಕೆ ಅನಿವಾರ್ಯ ಪರಿಸ್ಥಿತಿ:

ರಾಜ್ಯ ಚುನಾವಣಾ ಆಯೋಗದ ಪರ ವಾದ ಮಂಡಿಸಿದ ಹಿರಿಯ ನ್ಯಾಯವಾದಿ ಕೆ.ಎನ್‌. ಫಣೀಂದ್ರ, 2020ರ ಸೆ.14ರಂದು ಅಧಿಕಾರಾವಧಿ ಮುಗಿದಿರುವುದರಿಂದ ತುರ್ತಾಗಿ ಬಿಬಿಎಂಪಿಗೆ ಚುನಾವಣೆ ನಡೆಸಬೇಕು, ಸುಪ್ರೀಂಕೋರ್ಟ್‌ ಆದೇಶ ಪಾಲನೆಗೆ ಕಾಲಮಿತಿ ಕಡಿಮೆ ಇರುವುದರಿಂದ ಆಯೋಗಕ್ಕೆ ಅನಿವಾರ್ಯ ಸ್ಥಿತಿ ಎದುರಾಗಿದ್ದು, ಮತದಾರರ ಪಟ್ಟಿ ಸಿದ್ದಪಡಿಸಲಾಗುತ್ತಿದೆ ಎಂದರು.

ಕ್ಷೇತ್ರ ಪುನರ್‌ವಿಂಗಡಣೆ ಸಮರ್ಪಕವಾಗಿ ಮಾಡಲಾಗಿದೆ. ವಾರ್ಡ್‌ಗಳ ಪುನರ್‌ವಿಂಗಡಣೆಯಲ್ಲಿಕಾಯ್ದೆಯ ಸೆಕ್ಷನ್‌ 7 (1)(ಎ) ಮತ್ತು (ಬಿ) ಕಟ್ಟುನಿಟ್ಟಾಗಿ ಪಾಲಿಸಲಾಗಿದೆ. ಒಂದು ವಾರ್ಡ್‌ ಎರಡು ವಿಧಾನಸಭಾ ಕ್ಷೇತ್ರಗಳಲ್ಲಿಹರಡಿಕೊಂಡಂತೆ ಮಾಡಿಲ್ಲ. ಪ್ರತಿ ವಿಧಾನಸಭಾ ಕ್ಷೇತ್ರಗಳ ವಾರ್ಡ್‌ಗಳಲ್ಲಿಜನಸಂಖ್ಯೆಯ ಸರಾಸರಿ 35 ಸಾವಿರ ಇರುವಂತೆ ಸರ್ಕಾರ ನೋಡಿಕೊಂಡಿದೆ. ಈ ಹಂತದಲ್ಲಿನ್ಯಾಯಾಲಯ ಯಾವುದೇ ಆದೇಶ ನೀಡಿದರೂ ಚುನಾವಣೆಗೆ ಅಡ್ಡಿಯಾಗಲಿದೆ ಮತ್ತು ಆಯೋಗದ ಸಿದ್ಧತೆಗಳನ್ನು ನಿಷ್ೊ್ರಯೋಜಕಗೊಳಿಸಲಿದೆ. ಅಲ್ಲದೇ ಮೀಸಲಾತಿ ಅಧಿಸೂಚನೆ ಮೇಲೆ ಮಧ್ಯಂತರ ಆದೇಶ ನೀಡಿದರೆ, ಸುಪ್ರೀಂಕೋರ್ಟ್‌ನ ಜುಲೈ 28ರ ಆದೇಶದ ಉಲ್ಲಂಘನೆ ಆಗಲಿದೆ. ಮುಖ್ಯವಾಗಿ ಕೆಲವು ಅರ್ಜಿಗಳು ವಿಚಾರಣಾ ಮಾನ್ಯತೆ ಮತ್ತು ಅರ್ಹತೆ ಹೊಂದಿಲ್ಲಎಂದು ನ್ಯಾಯಪೀಠಕ್ಕೆ ತಿಳಿಸಿದರು.

ವಜಾಕ್ಕೆ ಆಗ್ರಹ:

ಸರ್ಕಾರ ಸಲ್ಲಿಸಿರುವ ಲಿಖಿತ ಆಕ್ಷೇಪಣೆಯಲ್ಲಿ, ಅತ್ಯಂತ ವೈಜ್ಞಾನಿಕವಾಗಿ ಕ್ಷೇತ್ರಗಳ ಪುನರ್‌ ವಿಂಗಡಣೆ ಮಾಡಲಾಗಿದೆ. 2011ರ ಜನಗಣತಿ ಆಧರಿಸಿ ವಾರ್ಡ್‌ ಜನಸಂಖ್ಯೆಯನ್ನು ನಿಗದಿಪಡಿಸಲಾಗಿದೆ. ಕ್ಷೇತ್ರಗಳ ಪುನರ್‌ ವಿಂಗಡಣೆಯಲ್ಲಿಬಿಬಿಎಂಪಿ ಕಾಯ್ದೆಯ ಸೆಕ್ಷನ್‌ 7 ಉಲ್ಲಂಘನೆ ಆಗಿಲ್ಲ. ವಾರ್ಡ್‌ಗಳ ಭೌಗೋಳಿಕ ಪ್ರದೇಶಗಳ ಬಗ್ಗೆ ವೈಜ್ಞಾನಿಕ ಮತ್ತು ತರ್ಕಬದ್ಧ ಸಮೀಕ್ಷೆ ನಡೆಸಲಾಗಿದೆ. ವಾರ್ಡ್‌ ಕಚೇರಿ ಮತ್ತಿತರ ಸಂಪರ್ಕಗಳಿಗೆ ಜನರಿಗೆ ಅನುಕೂಲವಾಗುವ ರೀತಿಯಲ್ಲಿ ವಾರ್ಡ್‌ಗಳನ್ನು ರಚಿಸಲಾಗಿದೆ ಎಂದು ಹೇಳಲಾಗಿದೆ.

ಅರ್ಜಿದಾರರ ಆಕ್ಷೇಪ, ವಿರೋಧಗಳೆಲ್ಲವೂ ಆಧಾರರಹಿತವಾಗಿವೆ. ಅರ್ಜಿದಾರರು ಸಲ್ಲಿಸಿರುವ ದಾಖಲೆ-ಪುರಾವೆಗಳು ಕಾನೂನು ಮಾನ್ಯತೆ ಹೊಂದಿಲ್ಲ. ಆದ್ದರಿಂದ ಅರ್ಜಿಗಳನ್ನು ಸಾರಾಸಗಟಾಗಿ ತಿರಸ್ಕರಿಸಬೇಕು ಎಂದು ಮನವಿ ಮಾಡಲಾಗಿದೆ.

Recommended Video

   ಟೀಂ ಇಂಡಿಯಾ ಆಟಗಾರರು ಸ್ನಾನ ಮಾಡೋಕೂ ಕಂಡಿಷನ್ ಹಾಕಿದ BCCI | *Cricket | Oneindia Kannada
   English summary
   The High Court refused to grant an interim order on the re-allocation of wards of the Bruhat Bangalore Mahanagara Palike.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X