ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬಿಬಿಎಂಪಿ ವಾರ್ಡ್ ಪುನರ್ ರಚನೆ, ಗಂಭೀರ ಲೋಪವಿದ್ದರೆ ಮಾತ್ರ ಮಧ್ಯಪ್ರವೇಶ: ಹೈಕೋರ್ಟ್

By ಎಸ್ ಎಸ್ ಎಸ್
|
Google Oneindia Kannada News

ಬೆಂಗಳೂರು, ಸೆ.14: ಬಿಬಿಎಂಪಿ ವಾರ್ಡ್ ಮರು ವಿಂಗಡಣೆಯಲ್ಲಿ ಸಣ್ಣಪುಟ್ಟ ಲೋಪವಿದ್ದರೆ ನ್ಯಾಯಾಲಯ ಮಧ್ಯಪ್ರೇಶಿಸುವುದಿಲ್ಲ. ಗಂಭೀರ ಲೋಪಗಳು ಕಂಡುಬಂದರೆ ಮಾತ್ರ ಮಧ್ಯಪ್ರವೇಶಿಸಲಾಗುವುದು ಎಂದು ಹೇಳಿರುವ ಹೈಕೋರ್ಟ್, ವಾರ್ಡ್ ಮರು ವಿಂಗಡಣೆ ಬಗ್ಗೆ ಸೆ.21ರಂದು ಆದೇಶ ಪ್ರಕಟಿಸುವುದಾಗಿ ತಿಳಿಸಿದೆ.

ಎಲ್ಲಾ ವಾರ್ಡ್‌ಗಳನ್ನು ಸಮಾನವಾಗಿ ವಿಂಗಡಿಸಲು ಕಷ್ಟಸಾಧ್ಯವಾಗುತ್ತದೆ. ಇಂತಹ ಪರಿಸ್ಥಿತಿಯಲ್ಲಿ ಸಣ್ಣಪುಟ್ಟ ಸಮಸ್ಯೆಗಳು ಉದ್ಭವಿಸುವುದು ಸಹಜ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ.

ವಾರ್ಡ್ ಪುನರ್ ವಿಂಗಡಣೆ ವೇಳೆ ಎಲ್ಲಾ ವಾರ್ಡ್‌ಗಳಲ್ಲಿ ಸಮಾನ ಜನಸಂಖ್ಯೆ ಇರಬೇಕು ಎಂಬುದನ್ನು ಪ್ರತಿಪಾದಿಸುವ ನಿರ್ದಿಷ್ಟ ತೀರ್ಪುಗಳಿದ್ದರೆ ಸಲ್ಲಿಸುವಂತೆ ಬಿಬಿಎಂಪಿ ವಾರ್ಡ್ ಮರು ವಿಂಗಡಣೆ ಪ್ರಶ್ನಿಸಿ ಸಲ್ಲಿಸಿರುವ ಅರ್ಜಿದಾರರಿಗೆ ಹೈಕೋರ್ಟ್ ಸೂಚಿಸಿದೆ.

ಬಿಬಿಎಂಪಿ ವಾರ್ಡ್ ಪುನರ್ ವಿಂಗಡಣೆ ಸರಿ ಇದೆ, ಸರ್ಕಾರದ ಸಮರ್ಥನೆಬಿಬಿಎಂಪಿ ವಾರ್ಡ್ ಪುನರ್ ವಿಂಗಡಣೆ ಸರಿ ಇದೆ, ಸರ್ಕಾರದ ಸಮರ್ಥನೆ

ವಾರ್ಡ್ ಮರು ವಿಂಗಡಣೆ ಮಾಡಿ ಸರ್ಕಾರ ಹೊರಡಿಸಿರುವ ಅಧಿಸೂಚನೆ ರದ್ದು ಕೋರಿ ಶಾಸಕರಾದ ಸೌಮ್ಯರೆಡ್ಡಿ, ಜಮೀರ್ ಅಹ್ಮದ್ ಖಾನ್, ಎಂ.ಸತೀಶ್ ರೆಡ್ಡಿ ಸೇರಿ ಸಲ್ಲಿಕೆಯಾಗಿರುವ 14ಕ್ಕೂ ಹೆಚ್ಚು ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಹೇಮಂತ ಚಂದನ ಗೌಡರ್ ಅವರ ಪೀಠವು ಅರ್ಜಿದಾರರಿಗೆ ಈ ಸೂಚನೆ ನೀಡಿ ವಿಚಾರಣೆಯನ್ನು ಸೆ.16ಕ್ಕೆ ಮುಂದೂಡಿದೆ.

BBMP ward Delimitation: If any serious lapses then only court will intervene: HC told to petitioners

ಜನಸಂಖ್ಯೆಯಲ್ಲಿ ವ್ಯತ್ಯಾಸ: ಅರ್ಜಿದಾರರ ಪರ ವಕೀಲರು, ವಾರ್ಡ್ ಮರು ವಿಂಗಡಣೆಯಲ್ಲಿ ಎಲ್ಲಾ ವಾರ್ಡ್‌ಗಳಿಗೆ ಒಂದೇ ಸಮಾನವಾದ ಜನಸಂಖ್ಯ ಪರಿಗಣಿಸಬೇಕು. ಪ್ರತಿ ವಾರ್ಡ್‌ನಲ್ಲಿ ಸಮಾನ ಸಂಖ್ಯೆಯ ಮತದಾರರು ಇರಬೇಕು. ಆದರೆ, ಸರ್ಕಾರ ವಿವಿಧ ಅನುಪಾತದಲ್ಲಿ ಜನಸಂಖ್ಯೆ ಪರಿಗಣಿಸಿರುವ ಪರಿಣಾಮ ಪ್ರತಿಯೊಂದು ವಾರ್ಡ್‌ನಲ್ಲಿ ಜನಸಂಖ್ಯೆ ಪ್ರಮಾಣದಲ್ಲಿ ವ್ಯತ್ಯಾಸವಿದೆ ಎಂದರು.

ವಾರ್ಡ್ ಮರು ವಿಂಗಡಣೆಗಾಗಿ ರಚಿಸಲಾಗಿದ್ದ ಸಮಿತಿ ವರದಿ ನೀಡುವ ವೇಳೆ ಅದರ ಅವಧಿಯೇ ಮುಕ್ತಾಯಗೊಂಡಿತ್ತು. ಇದರಿಂದ ಸಮಿತಿಯ ವರದಿಯನ್ನು ಪರಿಗಣಿಸುವಂತೆಯೇ ಇಲ್ಲ. ಇನ್ನು ಆಡಳಿತ ಪಕ್ಷದ ಶಾಸಕರಿರುವ ವಿಧಾನಸಭಾ ಕ್ಷೇತ್ರದಲ್ಲಿ ತಮಗೆ ಅನುಕೂಲವಾಗುವಂತೆ ವಾರ್ಡ್‌ಗಳ ಪುನರ್ ರಚಿಸಲಾಗಿದೆ. ವಿರೋಧ ಪಕ್ಷದ ಶಾಸಕರ ಕ್ಷೇತ್ರದಲ್ಲಿ ಹೆಚ್ಚಿನ ಜನಸಂಖ್ಯೆ ಪರಿಗಣಿಸಲಾಗಿದೆ ಮತ್ತು ವಾರ್ಡ್‌ಗಳ ಸಂಖ್ಯೆಯನ್ನೂ ಕಡಿತಗೊಳಿಸಲಾಗಿದೆ ಎಂದು ತಿಳಿಸಿದರು.

ಸರ್ಕಾರದ ಪರ ಅಡ್ವೋಕೇಟ್ ಜನರಲ್ ಪ್ರಭುಲಿಂಗ ಕೆ.ನಾವದಗಿ, 2011ರ ಜನಗಣತಿ ಆಧರಿಸಿ ಪ್ರತಿ ವಾರ್ಡ್‌ಗೆ ಜನಸಂಖ್ಯೆ ನಿಗದಿಪಡಿಸಲಾಗಿದೆ. ವಿಧಾನಸಭಾ ಕ್ಷೇತ್ರದ ಭೌಗೋಳಿಕ ವಿಸ್ತೀರ್ಣ, ಕ್ಷೇತ್ರದ ಜನಸಂಖ್ಯೆ ಬೆಳವಣಿಗೆ ಆಧರಿಸಿ ವಾರ್ಡ್ ರಚಿಸಲಾಗಿದೆ. ಕೆಲವು ಕಡೆ ಭೌಗೋಳಿಕ ವಿಸ್ತೀರ್ಣ ಹೆಚ್ಚಿದ್ದು, ಜನಸಂಖ್ಯೆ ಕಡಿಮೆ ಇದೆ.

ಇನ್ನೂ ಕೆಲವಡೆ ಭೌಗೋಳಿಕ ವಿಸ್ತೀರ್ಣ ದೊಡ್ಡದಾಗಿದ್ದು, ಜನಸಂಖ್ಯೆ ಕಡಿಮೆ. ಪ್ರತಿಯೊಂದು ವಿಧಾನಸಭಾ ಕ್ಷೇತ್ರದ ವಾರ್ಡ್ ವಿಂಗಡಣೆಯಲ್ಲಿ ಶೇ.10ರಷ್ಟು ಜನಸಂಖ್ಯೆ ಏರಿಳಿತದ ಅನುಪಾತ ಅನುಸರಿಸಲಾಗಿದೆ. ಅದರಂತೆ, 34 ಸಾವಿರದಿಂದ 39ಸಾವಿರ ಜನಸಂಖ್ಯೆಯ ಆಧಾರದಲ್ಲಿ ವಾರ್ಡ್‌ಗಳನ್ನು ವಿಂಗಡಣೆ ಮಾಡಲಾಗಿದ್ದು, ಅರ್ಜಿಗಳನ್ನು ವಜಾಗೊಳಿಸಬೇಕು ಎಂದು ಕೋರಿದರು.

BBMP ward Delimitation

ಚುನಾವಣೆಗೆ ಅನುವು ನೀಡಿ: ರಾಜ್ಯ ಚುನಾವಣಾ ಆಯೋಗದ ಪರ ಹಿರಿಯ ವಕೀಲ ಕೆ.ಎನ್. ಫಣೀಂದ್ರ, 2001 ಜನಗಣತಿ ಆಧರಿಸಿಯೇ ವಾರ್ಡ್ ಪುನರ್ ರಚಿಸಲಾಗಿದೆ. 2021ರ ನಂತರ ಜಣಗಣತಿ ನಡೆದಿದೆಯಾದರೂ ಈವರೆಗೂ ವರದಿ ಬಿಡುಗಡೆ ಮಾಡಿಲ್ಲ.

ವಾರ್ಡ್‌ಗಳಲ್ಲಿ ಜನಸಂಖ್ಯೆಯ ವ್ಯತ್ಯಾಸಗಳಿರಬಹುದು ಎಂದು ಸ್ವತಃ ಸುಪ್ರೀಂ ಕೋರ್ಟ್ ಆದೇಶ ಮಾಡಿದೆ. ಇದನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ. ಹೀಗಾಗಿ, ಅರ್ಜಿದಾರರ ವಾದ ಪರಿಗಣಿಸದೆ, ಚುನಾವಣೆ ನಡೆಸಲು ಅನುವು ಮಾಡಿಕೊಡಬೇಕು ಎಂದು ಕೋರಿದರು.

ಬಿಬಿಎಂಪಿ ಚುನಾವಣೆ: ವೇಳಾಪಟ್ಟಿ ನಿಗದಿ ಯಾವಾಗ ಆಯೋಗಕ್ಕೆ ಹೈಕೋರ್ಟ್ ಪ್ರಶ್ನೆಬಿಬಿಎಂಪಿ ಚುನಾವಣೆ: ವೇಳಾಪಟ್ಟಿ ನಿಗದಿ ಯಾವಾಗ ಆಯೋಗಕ್ಕೆ ಹೈಕೋರ್ಟ್ ಪ್ರಶ್ನೆ

ಸಂಕೀರ್ಣ ಕೆಲಸ: ಅರ್ಜಿದಾರರು, ಸರ್ಕಾರ ಮತ್ತು ಚುನಾವಣಾ ಆಯೋಗದ ಪರ ವಕೀಲರ ವಾದ ಆಲಿಸಿದ ಬಳಿಕ ಪ್ರತಿಕ್ರಿಯಿಸಿದ ನ್ಯಾಯಪೀಠ, ವಾರ್ಡ್ ಪುನರ್ ವಿಂಗಡಣೆ ಸಂಕೀರ್ಣ ಕೆಲಸ. ಬಹು ವಿಸ್ತಾರವಾದ ಪ್ರದೇಶಗಳನ್ನು ಹಲವು ವಿಷಯ ಮುಂದಿಟ್ಟುಕೊಂಡು ವಿಂಗಡಣೆ ಮಾಡಬೇಕಾಗುತ್ತದೆ. ಅದಕ್ಕಾಗಿ ನಿರ್ದಿಷ್ಟ ಮಾರ್ಗಸೂಚಿ ಅನುಸರಿಸಲಾಗಿರುತ್ತದೆ ಎಂದು ನುಡಿಯಿತು.

ಬೆಂಗಳೂರಿನಲ್ಲಿ ಪ್ರವಾಹಕ್ಕೆ ರಾಜಕಾಲುವೆ ಒತ್ತುವರಿ ತೆರವು ಮಾಡದಿರುವುದೇ ಕಾರಣ- ಹೈಕೋರ್ಟ್ ತರಾಟೆಬೆಂಗಳೂರಿನಲ್ಲಿ ಪ್ರವಾಹಕ್ಕೆ ರಾಜಕಾಲುವೆ ಒತ್ತುವರಿ ತೆರವು ಮಾಡದಿರುವುದೇ ಕಾರಣ- ಹೈಕೋರ್ಟ್ ತರಾಟೆ

ಆಗ ಅರ್ಜಿದಾರರ ಪರ ವಕೀಲರು, ವಾರ್ಡ್ ಪುನರ್ ವಿಂಗಡಣೆ ವೇಳೆ ಎಲ್ಲಾ ವಾರ್ಡ್‌ಗಳಲ್ಲಿ ಸಮಾನ ಜನಸಂಖ್ಯೆ ಇರಬೇಕು ಎಂಬುದನ್ನು ಪ್ರತಿಪಾದಿಸುವ ನಿರ್ದಿಷ್ಟ ತೀರ್ಪುಗಳಿವೆ. ಅವುಗಳನ್ನು ಸಲ್ಲಿಸಿ ವಾದ ಮಂಡಿಸಲಾಗುವುದು. ಅದಕ್ಕಾಗಿ ಸ್ವಲ್ಪ ಕಾಲಾವಕಾಶ ನೀಡಬೇಕು ಎಂದು ಕೋರಿದರು.

ಆ ಮನವಿ ಒಪ್ಪಿದ ನ್ಯಾಯಪೀಠ, ವಾರ್ಡ್ ಪುನರ್ ವಿಂಗಡಣೆ ವೇಳೆ ಎಲ್ಲಾ ವಾರ್ಡ್‌ಗಳಲ್ಲಿ ಸಮಾನ ಜನಸಂಖ್ಯೆ ಇರಬೇಕು ಎಂಬುದನ್ನು ಪ್ರತಿಪಾದಿಸುವ ನಿರ್ದಿಷ್ಟ ತೀರ್ಪುಗಳಿದ್ದರೆ ಸಲ್ಲಿಸಬಹುದು ಎಂದು ತಿಳಿಸಿ ವಿಚಾರಣೆಯನ್ನು ಸೆ.16ಕ್ಕೆ ಮುಂದೂಡಿತು.

English summary
BBMP ward Delimitation: If any serious lapses then only court will intervene: Karnataka High Court told to petitioners.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X