ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬಿಬಿಎಂಪಿ ಕರಡು ಮತದಾರರ ಪಟ್ಟಿ: ಆಕ್ಷೇಪಣೆ ಸಲ್ಲಿಕೆ ದಿನಾಂಕ ವಿಸ್ತರಣೆ

|
Google Oneindia Kannada News

ಬೆಂಗಳೂರು, ಸೆಪ್ಟಂಬರ್ 02: ಬಿಬಿಎಂಪಿ ಚುನಾವಣೆಗೆ ಸಂಬಂಧಿಸಿದ ಮತದಾರರ ಪಟ್ಟಿ ಕುರಿತಂತೆ ಹಕ್ಕು ಮತ್ತು ಆಕ್ಷೇಪಣೆಗಳನ್ನು ಸಲ್ಲಿಸುವ ಅವಧಿಯನ್ನು ಏಳು ದಿನ ಅಂದರೆ ಸೆಪ್ಟಂಬರ್ 9ರವರೆಗೆ ವಿಸ್ತರಿಸಿ ಬಿಬಿಎಂಪಿ ಆದೇಶ ಹೊರಡಿಸಿದೆ.

ಆಗಸ್ಟ ಕೊನೆಯವಾರ ಕರ್ನಾಟಕ ರಾಜ್ಯ ಚುನಾವಣಾ ಆಯೋಗ ಹಾಗೂ ಬಿಬಿಎಂಪಿ ನಡೆಸಿದ್ದ ಜಂಟಿ ಸುದ್ದಿಗೋಷ್ಠಿಯಲ್ಲಿ ಮುಂಬರುವ ಚುನಾವಣೆ ಸಂಬಂಧ ಬಿಬಿಎಂಪಿ ವ್ಯಾಪ್ತಿಯ 243ವಾರ್ಡ್‌ವಾರು ಕರಡು ಮತದಾರರ ಪಟ್ಟಿ ಪ್ರಕಟಿಸಿತ್ತು. ನಂತರ ಆ ಕರಡು ಮತದಾರರ ಪಟ್ಟಿ ಕುರಿತಂತೆ ಹಕ್ಕು ಹಾಗೂ ಆಕ್ಷೇಪಣೆ ಸಲ್ಲಿಕೆಗೆ ಸೆಪ್ಟಂಬರ್ 2ರವರೆಗೆ ಅವಕಾಶ ನೀಡಲಾಗಿತ್ತು.

ಇದೀಗ ಆ ಅವಕಾಶವನ್ನು ಹೆಚ್ಚುವರಿಯಾಗಿ ಒಂದು ವಾರ ವಿಸ್ತರಿಸಿ ಬಿಬಿಎಂಪಿ ಶುಕ್ರವಾರ ಆದೇಶ ಹೊರಡಿಸಿದೆ. ಈಗಾಗಲೇ ಹೊರಡಿಸಲಾದ ವಾರ್ಡ್‌ವಾರು ಕರಡು ಮತದಾರರ ಪಟ್ಟಿಯನ್ನು ಬಿಬಿಎಂಪಿ ಅಧಿಕೃತ ವೆಬ್‌ಸೈಟ್ bbmp.gov.in ನಲ್ಲಿ ಅಪ್ಲೋಡ್ ಮಾಡಲಾಗಿದೆ. ಅಲ್ಲದೇ ಮತದಾರರ ನೋಂದಣಾಧಿಕಾರಿ/ಸಹಾಯಕ ಮತದಾರರ ನೋಂದಣಾಧಿಕಾರಿಗಳ ಕಛೇರಿಗಳಲ್ಲೂ ಪಟ್ಟಿಯ ಮಾಹಿತಿ ಸಾರ್ವಜನಿಕ ವೀಕ್ಷಣೆಗೆ ಲಭ್ಯವಿದೆ.

BBMP Ward Wise Draft Voter List Extension Date of Objection Submission

ಎಲ್ಲಿ ಆಕ್ಷೇಪಣೆಗಳನ್ನು ಸಲ್ಲಿಸಬೇಕು?

ಕರಡು ಮತದಾನದ ಪಟ್ಟಿ ನೋಡಿಕೊಂಡು ಸೆಪ್ಟಂಬರ್ 9ರವರೆಗೆ ವಾರ್ಡ್‌ ನಿವಾಸಿಗಳು ಆಕ್ಷೇಪಣೆ ಸಲ್ಲಿಸಬಹುದು. ಪಟ್ಟಿಯಲ್ಲಿ ಹೆಸರೇನಾದರೂ ಬಿಟ್ಟಿದ್ದರು, ಹೊಸದಾಗಿ ಹೆಸರು ಸೇರ್ಪಡೆ ಇತ್ಯಾದಿ ಕುರಿತು ಅರ್ಜಿಗಳನ್ನು ಬಿಬಿಎಂಪಿಗೆ ಅಥವಾ ಹತ್ತಿರ ವಾರ್ಡ್ ಕಚೇರಿಗೆ ಸಲ್ಲಿಸುವಂತೆ ಅಧಿಕಾರಿಗಳು ಆದೇಶ ಮೂಲಕ ಕೋರಿದ್ದಾರೆ.

BBMP Ward Wise Draft Voter List Extension Date of Objection Submission

ಹೆಚ್ಚುವರಿಯಾಗಿ ನೀಡಿರುವ ಈ ಏಳು ದಿನ ಅವಕಾಶವನ್ನು ಸಾರ್ವಜನಿಕರು ಸದುಪಯೋಗ ಪಡೆಸಿಕೊಳ್ಳಬೇಕು. ತಮ್ಮ ಆಕ್ಷೇಪಣೆಗಳನ್ನು ಹತ್ತಿರದ ಮತದಾರರ ನೋಂದಣಾಧಿಕಾರಿ ಮತ್ತು ಸಹಾಯಕ ಮತದಾರರ ನೊಂದಣಾಧಿಕಾರಿಗಳ ಕಛೇರಿಗಳಿಗೆ ಸಲ್ಲಿಸಬಹುದಾಗಿದೆ ಎಂದು ಬಿಬಿಎಂಪಿ ಪ್ರಕಟಣೆಯಲ್ಲಿ ತಿಳಿಸಿದೆ.

English summary
BBMP Ward Wise Draft Voter List. Objection Submission date Extension till September 9th.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X