ಹೋಟೆಲ್, ಬೇಕರಿಗಳಿಗೆ ಎಚ್ಚರಿಕೆ ನೀಡಿದ ಬಿಬಿಎಂಪಿ

ಬೆಂಗಳೂರು, ಮೇ 19 : ಕರ್ನಾಟಕದಲ್ಲಿ ಲಾಕ್ ಡೌನ್ ನಿಯಮ ಸಡಿಲಗೊಳಿಸಲಾಗಿದೆ. ಕೆಲವು ಬಡಾವಣೆಗಳಲ್ಲಿ ಹೋಟೆಲ್, ಬೇಕರಿ ತೆರೆದಿದೆ. ನಿಯಮಗಳನ್ನು ಪಾಲನೆ ಮಾಡಬೇಕು ಎಂದು ಬಿಬಿಎಂಪಿ ಸೂಚನೆ ನೀಡಿದೆ.

ಮಂಗಳವಾರ ಶಾಂತಿನಗರ, ರೆಸಿಡೆನ್ಸಿ ರಸ್ತೆಯಲ್ಲಿ ಬಿಬಿಎಂಪಿಯ ಜಂಟಿ ಆಯುಕ್ತರು ಹೋಟೆಲ್, ಬೇಕರಿ, ಅಂಗಡಿಗಳ ತಪಾಸಣೆ ನಡೆಸಿದರು. ನಗರದ ಎಲ್ಲಾ ವಿಭಾಗದಲ್ಲಿ ಇಂತಹ ಪರಿಶೀಲನೆ ಕಾರ್ಯವನ್ನು ಬಿಬಿಎಂಪಿ ಕೈಗೊಂಡಿದೆ.

ಹೋಟೆಲ್, ಬೇಕರಿ, ಅಂಗಡಿಗಳಿಗೆ ನೀಡಿರುವ ನಿರ್ದೇಶನಗಳನ್ನು ಕಡ್ಡಾಯವಾಗಿ ಪಾಲನೆ ಮಾಡಬೇಕು ಎಂದು ಸೂಚನೆ ನೀಡಲಾಗಿದೆ. ಗ್ರಾಹಕರು ಸಹ ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕಿದೆ.

BBMP Warning To Hotel To Follow Guidelines

ಒಂದು ವೇಳೆ ಹೋಟೆಲ್‌ಗಳು ಬಿಬಿಎಂಪಿಯ ನಿರ್ದೇಶನಗಳನ್ನು ಪಾಲನೆ ಮಾಡದಿದ್ದರೆ ತಕ್ಷಣವೇ ಬಂದ್ ಮಾಡಿಸಲಾಗುತ್ತದೆ ಎಂದು ಬಿಬಿಎಂಪಿ ಎಚ್ಚರಿಕೆ ನೀಡಿದೆ. ಪ್ರಸ್ತುತ ಹೋಟೆಲ್‌ನಿಂದ ಪಾರ್ಸೆಲ್ ತೆಗೆದುಕೊಂಡು ಹೋಗಲು ಮಾತ್ರ ಅವಕಾಶ ನೀಡಲಾಗಿದೆ.

ಹೋಟೆಲ್‌ಗಳು ಸ್ವಚ್ಛತೆಯನ್ನು ಕಾಪಾಡಬೇಕು. ಪರಿಸರವನ್ನು ಸೋಂಕು ನಿವಾರಕಗಳಿಂದ ಪ್ರತಿದಿನ ಸ್ವಚ್ಛಗೊಳಿಸಬೇಕು. ಕೆಲಸ ಮಾಡುವ ಸಿಬ್ಬಂದಿಗೆ ಮಾಸ್ಕ್, ಗ್ಲೌಸ್, ಹ್ಯಾಂಡ್ ಸ್ಯಾನಿಟೈಸರ್‌ಗಳನ್ನು ಕಡ್ಡಾಯವಾಗಿ ನೀಡಬೇಕು ಎಂದು ಸೂಚನೆ ಕೊಡಲಾಗಿದೆ.

ಲಾಕ್ ಡೌನ್ ಘೋಷಣೆಯಾದ ಬಳಿಕ ಬೆಂಗಳೂರು ನಗರದಲ್ಲಿ ಹೋಟೆಲ್, ಬೇಕರಿ, ರೆಸ್ಟೋರೆಂಟ್, ಬಾರ್, ಪಬ್, ಮಾಲ್ ಬಂದ್ ಮಾಡಲಾಗಿದೆ. ಈಗ ಬೇಕರಿ, ಹೋಟೆಲ್ ತೆರೆಯಲು ಅನುಮತಿ ನೀಡಲಾಗಿದೆ. ಆದರೆ, ಹೋಟೆಲ್‌ನಿಂದ ಪಾರ್ಸೆಲ್ ತಗೆದುಕೊಂಡು ಹೋಗಲು ಮಾತ್ರ ಅವಕಾಶವಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+