ಬೆಂಗಳೂರಿಗರು ಮತದಾರರ ಪಟ್ಟಿಗೆ ಹೆಸರು ಸೇರಿಸಲು ಅವಕಾಶ

ಬೆಂಗಳೂರು, ಅಕ್ಟೋಬರ್ 24 : ಲೋಕಸಭಾ ಚುನಾವಣೆ ಎದುರಾಗುತ್ತಿರುವ ಹಿನ್ನಲೆಯಲ್ಲಿ ಬಿಬಿಎಂಪಿ ಬೆಂಗಳೂರು ನಗರದಲ್ಲಿ ಮತದಾರರ ಪಟ್ಟಿಯ ಪರಿಷ್ಕರಣೆ ನಡೆಸಲಿದೆ. ನವೆಂಬರ್ 30ರ ತನಕ ಮತದಾರರ ಪಟ್ಟಿಗೆ ಹೆಸರು ಸೇರಿಸಬಹುದಾಗಿದೆ.

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ 198 ವಾರ್ಡ್‌ಗಳಲ್ಲಿಯೂ ಮತದಾರರ ಪಟ್ಟಿ ಪರಿಷ್ಕರಣೆ ಮಾಡಲಿದೆ. ಪ್ರಾದೇಶಿಕ ಆಯುಕ್ತ ಶಿವಯೋಗಿ ಸಿ.ಕಳಸದ ಅವರು ಮೂರು ದಿನಗಳ ಕಾಲ ನಗರದಲ್ಲಿ ಬೂತ್ ಮಟ್ಟದಲ್ಲಿ ಪಟ್ಟಿ ಪರಿಷ್ಕರಣೆ ಮಾಡಲು ಸೂಚನೆ ನೀಡಿದ್ದಾರೆ.

ಅಕ್ಟೋಬರ್ 26 ರಿಂದ 29ರ ತನಕ 28 ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಬೂತ್ ಮಟ್ಟದ ಅಧಿಕಾರಿಗಳು ಪ್ರತಿ ಮನೆಗೂ ಭೇಟಿ ನೀಡಲಿದ್ದಾರೆ. ಮತದಾರರ ಪಟ್ಟಿಯಲ್ಲಿ ಯಾವುದೇ ಬದಲಾವಣೆ ಇದ್ದರೆ ಈ ಸಮಯದಲ್ಲಿ ಸೂಚಿಸಬಹುದಾಗಿದೆ.

BBMP will conduct a special revision of electoral rolls

ಜನವರಿ 1, 2018ಕ್ಕೆ 18 ವರ್ಷ ಪೂರ್ಣಗೊಳಿಸಿದವರು ಮತದಾರರ ಪಟ್ಟಿಗೆ ಹೆಸರುಗಳನ್ನು ಸೇರಿಸಬಹುದಾಗಿದೆ. ಈಗಾಗಲೇ ಪಟ್ಟಿಯಲ್ಲಿ ಹೆಸರು ಇರುವ ಮತದಾರರು ತಮ್ಮ ಹೆಸರನ್ನು ಪುನಃ ಪರಿಶೀಲಿಸಿಕೊಳ್ಳಬಹುದು.

ನವೆಂಬರ್ 30ರೊಳಗೆ ಮತದಾರರ ಪಟ್ಟಿ ಪರಿಷ್ಕರಣೆಯಾಗಬೇಕಾಗಿದೆ. ಹೊಸದಾಗಿ ಹೆಸರು ಸೇರಿಸಲು ಬಯಸುವವರು ಈಗ ಹೆಸರನ್ನು ಸೇರಿಸಿ, ಚುನಾವಣೆ ಘೋಷಣೆಯಾದ ಬಳಿಕ ಮತ್ತೊಮ್ಮೆ ಮತದಾರರ ಪಟ್ಟಿ ಪರಿಷ್ಕರಣೆಯಾಗಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+