ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಏಪ್ರಿಲ್‌ನಿಂದ ಆನ್‌ಲೈನ್ ನಕ್ಷೆ: 30ದಿನದಲ್ಲಿ ಮಂಜೂರು

|
Google Oneindia Kannada News

ಬೆಂಗಳೂರು, ಮಾರ್ಚ್ 21: ಕಟ್ಟಡ ನಿರ್ಮಾಣಕ್ಕೆ ನಕ್ಷೆ ಮಂಜೂರಾತಿ ಪಡೆಯಲು ಬಿಬಿಎಂಪಿ ಕಚೇರಿಗಳಿಗೆ ಅಲೆಯುವಂತಿಲ್ಲ. ಏಕೆಂದರೆ, ಬಿಬಿಎಂಪಿ ಆನ್‌ಲೈನ್ ಮೂಲಕ ಕಟ್ಟಡ ನಕ್ಷೆ ಮಂಜೂರಾತಿ ವ್ಯವಸ್ಥೆ ಜಾರಿಗೆ ತರಲು ಚಾಲನೆ ನೀಡಿದ್ದು, ಏಪ್ರಿಲ್ 1ರಿಂದ ನೂತನ ವ್ಯವಸ್ಥೆ ಜಾರಿಗೆ ಬರಲಿದೆ.

ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ | ಯಾವ ಪಕ್ಷಕ್ಕೆಷ್ಟು ಸೀಟು? ನೀವೇ ಊಹಿಸಿ

ಬಿಎಂಆರ್ ಡಿಎ ಕಚೇರಿಯಲ್ಲಿ ಆಟೊಮೆಟಿಕ್ ಬಿಲ್ಡಿಂಗ್ ಪ್ಲ್ಯಾನ್ ಅಪ್ರೂವಲ್ ಸಿಸ್ಟಂ ನೂತನ ವ್ಯವಸ್ಥೆಗೆ ಚಾಲನೆ ನೀಡಲಾಯಿತು. ಬಿಬಿಎಂಪಿಯಲ್ಲಿ ನಕ್ಷೆ ಮಂಜೂರಾತಿ ಪಡೆಯಲು ಜನರು ಈವರೆಗೆ ಕಚೇರಿಯಿಂದ ಕಚೇರಿಗೆ ಅಲೆದಾಡಬೇಕಿತ್ತು. ಅದನ್ನು ತಪ್ಪಿಸಲು ಆನ್ ಲೈನ್ ಮೂಲಕ ಕಾಲಮಿತಿಯೊಳಗೆ ನಕ್ಷೆ ನೀಡುವ ವ್ಯವಸ್ಥೆಗೆ ಚಾಲನೆ ನೀಡಲಾಗಿದೆ. ಅದರಿಂದ ನಕ್ಷೆ ಮಂಜೂರಾತಿ ಪಡೆಯುವುದು ಸುಲಭ ಮತ್ತು ಸರಳವಾಗಲಿದೆ ಎಂದು ಜಾರ್ಜ್ ಹೇಳಿದ್ದಾರೆ.

ಬಿಬಿಎಂಪಿಯ 110 ಹಳ್ಳಿ ವ್ಯಾಪ್ತಿಯ ಕಟ್ಟಡಗಳಿಗೆ ಜಲಮಂಡಳಿಯಿಂದ ಎನ್ಒಸಿಬಿಬಿಎಂಪಿಯ 110 ಹಳ್ಳಿ ವ್ಯಾಪ್ತಿಯ ಕಟ್ಟಡಗಳಿಗೆ ಜಲಮಂಡಳಿಯಿಂದ ಎನ್ಒಸಿ

ಆನ್ ಲೈನ್ ಮೂಲಕ ಕಟ್ಟಡ ಮಂಜೂರಾತಿ ವ್ಯವಸ್ಥೆಯಲ್ಲಿ ಅಧಿಕಾರಿಗಳಿಗೆ ಕಡತ ಪರಿಶೀಲನೆಗೆ ಕಾಲಮಿತಿ ನಿಗದಿ ಮಾಡಲಾಗಿದ್ದು, ಕಾಲಮಿತಿ ಮೀರಿದರೆ ಕ್ರಮ ಎದುರಿಸಬೇಕಾಗುತ್ತದೆ ಎಂದು ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್ ಹೇಳಿದರು.

BBMP will launch building permission service through online from april

ಎಸ್‌ಎಂಎಸ್,ಇ-ಮೇಲ್ ಮೂಲಕ ಸ್ಪಷ್ಟನೆ: ನಕ್ಷೆ ಮಂಜೂರಾತಿ ಸಂಬಂಧಿಸಿದಂತೆ ಅಧಿಕಾರಿಗಳಿಗೆ ಯಾವುದೇ ಸ್ಪಷ್ಟನೆ ಬೇಕಾದರೆ, ಅರ್ಜಿದಾರರಿಗೆ ಇ-ಮೇಲ್ ಮತ್ತು ಎಸ್‌ಎಂಎಸ್ ಮೂಲಕ ಸಂದೇಶ ಕಳುಹಿಸಬಹುದು. ಅವರಿಂದ ಸ್ಪಷ್ಟನೆ ಪಡೆದು ನಕ್ಷೆ ಮಂಜೂರಾತಿ ನೀಡಲಾಗುವುದು ಎಂದು ತಿಳಿಸಿದರು.

English summary
BBMP is all set to launch online service for issuing building permission and map approval from April 1 and the same will be issued within one month which will be applied through online. It was the long time demand from the public avoid Unneccessary delay and corruption.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X