Get Updates
Get notified of breaking news, exclusive insights, and must-see stories!

ಬಿಬಿಎಂಪಿ: ವಾಣಿಜ್ಯ ಮಳಿಗೆಗಳಲ್ಲಿ ಶೇ.60 ಕನ್ನಡ ಕಡ್ಡಾಯಗೊಳಿಸಲು ಶಿಸ್ತು ಕ್ರಮ, ಗಡುವು

ಬೆಂಗಳೂರು, ಡಿಸೆಂಬರ್ 24: ಕನ್ನಡ ನೆಲದಲ್ಲಿಯೇ ಕನ್ನಡ ಕಡ್ಡಾಯ ಮಾಡಿಸಲು ಎಚ್ಚರಿಕೆ, ನಿರ್ದೇಶನ ನೀಡಬೇಕಾದ ಸ್ಥಿತಿ ಎದುರಾಗಿದೆ. ಮೆಟ್ರೋದಲ್ಲಿ, ನಿಲ್ದಾಣ, ಶಾಲೆ ಸೇರಿದಂತೆ ಇನ್ನಿತರ ಕಡೆಗಳಲ್ಲಿ ಕಡ್ಡಾಯ ಕನ್ನಡ ಬಳಕೆಗೆ ಸೂಚಿಸಲಾಗಿತ್ತು. ಇದೀಗ ಬಿಬಿಎಂಪಿ ವ್ಯಾಪ್ತಿಯಲ್ಲಿ ಬರುವ ವಾಣಿಜ್ಯ ಮಳಿಗೆಗಳಲ್ಲಿ ಕನ್ನಡ ಬಳಕೆಗೆ ಗಡುವು ನೀಡಲಾಗಿದೆ.

ಬಿಬಿಎಂಪಿ ವ್ಯಾಪ್ತಿಯಲ್ಲಿ ಬರುವ ಎಲ್ಲಾ ರೀತಿಯ ವಾಣಿಜ್ಯ ಮಳಿಗೆಗಳ ನಾಮಫಲಕಗಳಲ್ಲಿ ಕಡ್ಡಾಯವಾಗಿ ಕನ್ನಡ ಭಾಷೆ ಬಳಸುವ ಸಂಬಂಧ ಕರ್ನಾಟಕ ರಕ್ಷಣಾ ವೇದಿಕೆಯ ಜೊತೆ ಮಲ್ಲೇಶ್ವರಂ ಐಪಿಪಿ ಸಭಾಂಗಣದಲ್ಲಿ ಭಾನುವಾರ ಸಭೆ ನಡೆಯಿತು.

BBMP Will make 60 percent Kannada language is Mandatory in Commercial Complex in Bengaluru soon

ಈ ವೇಳೆ ಮಾತನಾಡಿದ ತುಷಾರ್ ಗಿರಿನಾಥ್ ಅವರು, ಮುಂದಿನ ಫೆಬ್ರವರಿ 28 ರೊಳಗಾಗಿ ಶೇಕಡಾ 60 ರಷ್ಟು ಕನ್ನಡ ಭಾಷೆಯ ನಾಮಫಲಕಗಳನ್ನು ಅಳವಡಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದೆಂದು. ಈ ಕುರಿತು ಮಹತ್ವದ ಸಭೆ ನಡೆಸುವುದಾಗಿ ಅವರು ಭರವಸೆ ನೀಡಿದರು.

ಪಾಲಿಕೆ ವ್ಯಾಪ್ತಿಯಲ್ಲಿ ಬರುವ ಅಂಗಡಿ ಮುಂಗಟ್ಟುಗಳು, ಹೋಟೆಲ್ ಗಳು, ಮಾಲ್ ಸೇರಿದಂತೆ ಇನ್ನಿತರೆ ವಾಣಿಜ್ಯ ಮಳಿಗೆಗಳ ನಾಮಫಲಕಗಳಲ್ಲಿ ಕಡ್ಡಾಯವಾಗಿ ಕನ್ನಡ ಭಾಷೆ ಬಳಸುವ ಸಂಬಂಧ ಎಲ್ಲಾ ವಲಯ ಆಯುಕ್ತರ ಜೊತೆ ಸಭೆ ನಡೆಸಿ ಸೂಕ್ತ ನಿರ್ದೇಶನ ನೀಡಲಾಗುವದು ಎಂದರು.

ಮುಖ್ಯ-ಉಪಮುಖ್ಯ ರಸ್ತೆ ಎಲ್ಲ ಮಳಿಗೆಗಳಿಗೆ ನಿರ್ದೇಶನ

ನಗರದಲ್ಲಿ ಆರ್ಟಿರಿಯಲ್ ಹಾಗೂ ಸಬ್ ಆರ್ಟಿರಿಯಲ್ ರಸ್ತೆಗಳು 1400 ಕಿ.ಮೀ ನಷ್ಟಿವೆ. ಸದರಿ ರಸ್ತೆಗಳಲ್ಲಿ ಬರುವ ಎಲ್ಲಾ ವಾಣಿಜ್ಯ ಮಳಿಗೆಗಳನ್ನು ವಲಯವಾರು ಸರ್ವೆ ಮಾಡಿಸಲಾಗುವುದು. ಸರ್ವೇಯ ನಂತರ ಶೇ. 60 ರಷ್ಟು ಕನ್ನಡ ಭಾಷೆ ಬಳಸದ ಮಳಿಗೆಗಳಿಗೆ ನೋಟೀಸ್ ನೀಡಲಾಗುವುದು. ನೋಟೀಸ್ ನಿಡಿದ ಬಳಿಕ ಫೆಬ್ರವರಿ 28 ರವರೆಗೆ ಸಮಯಾವಕಾಶ ನೀಡಿ ಕಡ್ಡಾಯವಾಗಿ ಕನ್ನಡ ಭಾಷೆಯ ನಾಮಫಲಕಗಳನ್ನು ಅಳವಡಿಸಿ ಅನುಷ್ಠಾನಗೊಳಿಸಿ ಆಯಾ ವಲಯ ಆಯುಕ್ತರಿಗೆ ಅನುಪಾಲನೆ ಸಲ್ಲಿಸಬೇಕೆಂದು ಸೂಚಿಸಲಾಗುವುದು.

ಇಲ್ಲಿನ ಅಂಗಡಿ ಮುಂಗಟ್ಟುಗಳಲ್ಲಿ ಕನ್ನಡ ನಾಮಫಲಕ ಹಾಕದೇ ಇರುವವರ ಮೇಲೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು. ಸರ್ಕಾರದ ಆದೇಶ ಹಾಗೂ ಪಾಲಿಕೆ ಸುತ್ತೋಲೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಲಾಗುವುದು.

BBMP Will make 60 percent Kannada language is Mandatory in Commercial Complex in Bengaluru soon

ಫೆ.28ರೊಳಗೆ ಕನ್ನಡ ಕಡ್ಡಾಯವಾಗದಿದ್ದರೆ ಕ್ರಮ

ಫೆಬ್ರವರಿ 28ರೊಳಗಾಗಿ ಕನ್ನಡ ನಾಮಫಲಕಗಳನ್ನು ಅಳವಡಿಕೊಳ್ಳದ ಅಂಗಡಿ ಮೇಲೆ ಕಾನೂನು ಕ್ರಮ ಜರುಗಿಸಲಾಗುವುದು. ಅದರಂತೆ ನಾಮಫಲಕಗಳಲ್ಲಿ ಕನ್ನಡ ಭಾಷೆಯನ್ನು ಬಳಸದ ಅಂಗಡಿ ಮುಂಗಟ್ಟುಗಳನ್ನು ಕಾನೂನಿನ ಪ್ರಕಾರ ಅಮಾನತಿನಲ್ಲಿಟ್ಟು ತದನಂತರ ಪರವಾನಗಿಯನ್ನು ರದ್ದುಗೊಳಿಸಲಾಗುವುದು. ಜೊತೆಗೆ ಸರಿಯಾಗಿ ಕಾರ್ಯನಿರ್ವಹಿಸದ ಅಧಿಕಾರಿಯ ಮೇಲೂ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ನಗರದಲ್ಲಿ ಬರುವ ದೊಡ್ಡ ದೊಡ್ಡ ಮಾಲ್ ಗಳ ಜೊತೆ ಕೂಡಲೆ ಸಮಾಲೋಚನೆ ನಡೆಸಿ ಮಾಲ್ ಗಳಲ್ಲಿರುವ ಎಲ್ಲಾ ಮಳಿಗೆಗಳಲ್ಲಿ 15-20 ದಿನಗಳೊಳಗಾಗಿ ನಾಮಫಲಕಗಳಲ್ಲಿ ಕನ್ನಡ ಭಾಷೆಯನ್ನು ಅಳವಡಿಸಿಕೊಳ್ಳಬೇಕು. ಇಲ್ಲವಾದರೆ ಕಾನೂನು ಪ್ರಕಾರ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಇಂದಿನ ಸಭೆಯಲ್ಲಿ ಪಾಲಿಕೆ ಉಪ ಆಯುಕ್ತರಾದ ಮಂಜುನಾಥ ಸ್ವಾಮಿ, ಮುಖ್ಯ ಅಭಿಯಂತರರಾದ ಪ್ರವೀಣ್ ಲಿಂಗಯ್ಯ, ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷರಾದ ನಾರಾಯಣ್ ಗೌಡ, ಕನ್ನಡ ಸಂಘದ ಪ್ರತಿನಿಧಿಗಳು, ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+