ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಂಗಳೂರಲ್ಲಿ ಪುನಃ ಜೆಸಿಬಿ ಘರ್ಜನೆ, ರಾಜಕಾಲುವೆ ಒತ್ತುವರಿ ತೆರವು

|
Google Oneindia Kannada News

ಬೆಂಗಳೂರು, ಸೆಪ್ಟೆಂಬರ್ 20 : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ರಾಜಕಾಲುವೆ ಒತ್ತುವರಿ ತೆರವು ಕಾರ್ಯಾಚರಣೆಯನ್ನು ಪುನಃ ಆರಂಭಿಸಲಿದೆ. 728 ಕಡೆ ಒತ್ತುವರಿ ತೆರವು ಕಾರ್ಯಾಚರಣೆ ಬಾಕಿ ಇದೆ.

1000 ಕೋಟಿ ಮೌಲ್ಯದ 189 ಎಕರೆ ಭೂಮಿ ಒತ್ತುವರಿ ತೆರವು1000 ಕೋಟಿ ಮೌಲ್ಯದ 189 ಎಕರೆ ಭೂಮಿ ಒತ್ತುವರಿ ತೆರವು

ಆಗಸ್ಟ್‌ ಮತ್ತು ಸೆಪ್ಟೆಂಬರ್ ತಿಂಗಳಿನಲ್ಲಿ ಸುರಿದ ಮಳೆಯಿಂದಾಗಿ ಹಲವು ಬಡಾವಣೆಗಳು ಜಲಾವೃತವಾಗಿದ್ದವು. ಈ ಪ್ರದೇಶಗಳಿಗೆ ಭೇಟಿ ನೀಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜಕಾಲುವೆ ಒತ್ತುವರಿಯಾಗಿದ್ದರೆ ತೆರವುಗೊಳಿಸಿ ಎಂದು ಸೂಚನೆ ನೀಡಿದ್ದರು.

BBMP will resume its drive to clear raja kaluve encroachment

ಪಾಲಿಕೆಯ ವಿಶೇಷ ಆಯುಕ್ತ ವಿಜಯಶಂಕರ್ ಅಧ್ಯಕ್ಷತೆಯಲ್ಲಿ ಸೆ.15ರಂದು ನಡೆದ ಸಭೆಯಲ್ಲಿ ಕಾರ್ಯಾಚರಣೆಯನ್ನು ಪುನಃ ಆರಂಭಿಸಲು ತೀರ್ಮಾನ ಕೈಗೊಳ್ಳಲಾಗಿದೆ. ಒಂದು ವಾರದಲ್ಲಿ ಕಾರ್ಯಾಚರಣೆ ಆರಂಭವಾಗಲಿದೆ. ತೆರವು ಕಾರ್ಯಾಚರಣೆ ವೇಳೆ ರಕ್ಷಣೆ ನೀಡಲು ಪೊಲೀಸ್ ಮತ್ತು ಬಿಎಂಟಿಎಫ್ ಅಧಿಕಾರಿಗಳಿಗೂ ಮನವಿ ಮಾಡಲಾಗಿದೆ.

ಒತ್ತುವರಿ ತೆರವು, ಮುಲಾಜಿಲ್ಲದೆ ಕ್ರಮ ಕೈಗೊಳ್ಳಿ: ಸಿಎಂಒತ್ತುವರಿ ತೆರವು, ಮುಲಾಜಿಲ್ಲದೆ ಕ್ರಮ ಕೈಗೊಳ್ಳಿ: ಸಿಎಂ

ನಂದಗೋಕುಲ ಬಡಾವಣೆ, ಎಚ್‌ಎಸ್‌ಆರ್ ಲೇಔಟ್, ಎಚ್‌ಆರ್‌ಬಿ ಲೇಔಟ್‌ನಲ್ಲಿ ಮೊದಲು ಕಾರ್ಯಾಚರಣೆ ಆರಂಭವಾಗಲಿದೆ. ನಾಗವಾರ, ರಾಚೇನಹಳ್ಳಿ, ಥಣಿಸಂದ್ರ, ಮಾನ್ಯತಾ ಟೆಕ್ ಪಾರ್ಕ್, ಕೆನರಾಬ್ಯಾಂಕ್ ಬಡಾವಣೆ ಮುಂತಾದ ಕಡೆ ಒತ್ತುವರಿ ಗುರುತಿಸುವಂತೆ ಭೂ ದಾಖಲೆಗಳ ಜಂಟಿ ನಿರ್ದೇಶಕರಿಗೆ ಮನವಿ ಮಾಡಲಾಗಿದೆ.

ಕಳೆದ ವರ್ಷ 1953 ಕಡೆ ರಾಜಕಾಲುವೆಗಳ ಒತ್ತುವರಿಯನ್ನು ಬಿಬಿಎಂಪಿ ಪತ್ತೆ ಹಚ್ಚಿತ್ತು. 1225 ಒತ್ತುವರಿಯನ್ನು ತೆರವು ಮಾಡಲಾಗಿತ್ತು. 728 ಕಡೆ ಒತ್ತುವರಿ ತೆರವು ಕಾರ್ಯ ಇನ್ನು ಬಾಕಿ ಇದೆ.

English summary
The Bruhat Bangalore Mahanagara Palike (BBMP) will resume its drive to clear raja kaluve encroachment in the city.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X