ಕೋವಿಡ್ ಸೋಂಕಿತರನ್ನು ಬಿಬಿಎಂಪಿಯೇ ಕರೆದುಕೊಂಡು ಹೋಗಲಿದೆ

ಬೆಂಗಳೂರು, ಜುಲೈ 02 : ಬೆಂಗಳೂರು ನಗರದಲ್ಲಿ ಕೊರೊನಾ ವೈರಸ್ ಸೋಂಕಿತರು ಆಸ್ಪತ್ರೆಗಳನ್ನು ಹುಡುಕಿಕೊಂಡು ಅಲೆದಾಡಬೇಕಿಲ್ಲ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯೇ ನಿಮ್ಮ ಮನೆಗೆ ಬಂದು ಆಸ್ಪತ್ರೆಗೆ ಕರೆದುಕೊಂಡು ಹೋಗಲಿದೆ.

ಕಳೆದ ಎರಡು ದಿನಗಳಿಂದ ಕೆಲವು ರೋಗಿಗಳು ಆಸ್ಪತ್ರೆಯಲ್ಲಿ ಬೆಡ್ ಸಿಗದೆ ಪರದಾಡಿದ ಪ್ರಕರಣ ಬೆಳಕಿಗೆ ಬಂದಿದೆ. ಈ ಹಿನ್ನಲೆಯಲ್ಲಿ ಬಿಬಿಎಂಪಿ ಆಯುಕ್ತ ಬಿ. ಎಚ್. ಅನಿಲ್ ಕುಮಾರ್ ರೋಗಿಗಳು ಆಸ್ಪತ್ರೆ ಹುಡುಕಿಕೊಂಡು ಅಲೆಯಬೇಕಿಲ್ಲ ಎಂದು ಹೇಳಿದ್ದಾರೆ.

ರೋಗಿಯ ಕೊರೊನಾ ವೈರಸ್ ಪರೀಕ್ಷೆ ವರದಿ ಐಸಿಎಂಆರ್‌ ಮೂಲಕ ಬಿಬಿಎಂಪಿಗೆ ರವಾನೆಯಾಗುತ್ತದೆ. ವರದಿ ಬಂದ ತಕ್ಷಣ ಆಂಬ್ಯುಲೆನ್ಸ್‌ನಲ್ಲಿ ಬಿಬಿಎಂಪಿ ಸಿಬ್ಬಂದಿಯೇ ಮನೆಗೆ ಬಂದು ರೋಗಿಗಳನ್ನು ಕರೆದುಕೊಂಡು ಹೋಗಿ ಆಸ್ಪತ್ರೆಗೆ ದಾಖಲು ಮಾಡಲಿದ್ದಾರೆ.

BBMP Will Pick Coronavirus Patients From Home

ಬಿಬಿಎಂಪಿ ಕೋವಿಡ್ ವಾರ್ ರೂಂನಲ್ಲಿ ನಗರದ ಆಸ್ಪತ್ರೆಗಳಲ್ಲಿ ಇರುವ ಬೆಡ್‌ಗಳ ಸಂಖ್ಯೆ ತಿಳಿಯಲಿದೆ. ಇದಕ್ಕಾಗಿ ಸಾಫ್ಟ್‌ವೇರ್‌ ಒಂದನ್ನು ಮಾಡಲಾಗುತ್ತಿದ್ದು, 4 ದಿನಗಳಲ್ಲಿ ಅದು ಲಭ್ಯವಾಗಲಿದೆ. ಆಗ ಆಸ್ಪತ್ರೆಗಳ ಹುಡುಕಾಟ ಇನ್ನೂ ಸುಲಭವಾಗಲಿದೆ.

ಪ್ರಸ್ತುತ ನಗರದಲ್ಲಿ 2 ಸಾವಿರ ಹಾಸಿಗೆಗಳು ಕೋವಿಡ್ ರೋಗಿಗಳಿಗಾಗಲೇ ಮೀಸಲಾಗಿವೆ. ಸಾಫ್ಟ್‌ವೇರ್ ಸಿದ್ಧವಾದ ಬಳಿಕ ಎಲ್ಲಾ ಖಾಸಗಿ ಆಸ್ಪತ್ರೆಗಳಲ್ಲಿ ಲಭ್ಯವಿರುವ ಹಾಸಿಗೆಗಳ ಮಾಹಿತಿ ಸಿಗಲಿದೆ.

ಕಳೆದ ಮೂರು ದಿನಗಳಿಂದ ಬೆಂಗಳೂರು ನಗರದಲ್ಲಿ ಪ್ರತಿದಿನ 500ಕ್ಕೂ ಅಧಿಕ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ದಾಖಲಾಗುತ್ತಿವೆ. ನಗರದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 5290ಕ್ಕೆ ಏರಿಕೆಯಾಗಿದೆ. ಇದುವರೆಗೂ ಬೆಂಗಳೂರು ನಗರದಲ್ಲಿ 97 ಜನರು ಮೃತಪಟ್ಟಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+