ಬಿಎಂಟಿಸಿ ದರ ಏರಿಕೆ ವಿರುದ್ಧ ಬಿಬಿಪಿವಿ ಪ್ರತಿಭಟನೆ
ಬೆಂಗಳೂರು, ಮೇ 26 : ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ಪ್ರಯಾಣದರ ಏರಿಕೆ ಮಾಡಿರುವುದನ್ನು ಖಂಡಿಸಿ ಬೆಂಗಳೂರು ಬಸ್ ಪ್ರಯಾಣಿಕರ ವೇದಿಕೆ ನಡೆಸುತ್ತಿರುವ ಪ್ರತಿಭಟನೆ ಮುಂದುವರೆದಿದೆ. ಭಾನುವಾರ ಶಾಂತಿನಗರ ಬಸ್ ನಿಲ್ದಾಣದಿಂದ ಸಚಿವ ರಾಮಲಿಂಗಾ ರೆಡ್ಡಿ ನಿವಾಸದವರೆಗೆ ಜಾಥಾ ನಡೆಸಲು ಮುಂದಾದ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿ, ನಂತರ ಬಿಡುಗಡೆ ಮಾಡಿದರು.
ಭಾನುವಾರ ಬೆಂಗಳೂರು ಬಸ್ ಪ್ರಯಾಣಿಕರ ವೇದಿಕೆ ಬಿಎಂಟಿಸಿ ಪ್ರಯಾಣ ದರ ಹೆಚ್ಚಳವನ್ನು ಖಂಡಿಸಿ ಶಾಂತಿನಗರ ಬಸ್ ನಿಲ್ದಾಣದಿಂದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರ ನಿವಾಸದವರೆಗೆ ಜಾಥಾ ನಡೆಸಿ, ಪ್ರತಿಭಟನೆ ಮಾಡಲು ಮುಂದಾಗಿದ್ದರು. ಆದರೆ, ಪ್ರತಿಭಟನೆಗೆ ಅವಕಾಶ ಪಡೆದಿಲ್ಲ ಎಂದು ಹೇಳಿದ ಪೊಲೀಸರು ಕಾರ್ಯಕರ್ತರನ್ನು ಬಂಧಿಸಿದರು.[ಬಿಎಂಟಿಸಿ ಪ್ರಯಾಣದರ ಎಷ್ಟು ಹೆಚ್ಚಾಗಿದೆ]
ಬೆಳಗ್ಗೆ 10.30ಕ್ಕೆ ಶಾಂತಿನಗರ ಬಸ್ ನಿಲ್ದಾಣಕ್ಕೆ ಆಗಮಿಸಿದ ಕಾರ್ಯಕರ್ತರು, ಅಲ್ಲಿ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದರು. ಬೆಂಗಳೂರಿನ ಪ್ರತಿಯೊಬ್ಬರ ನಾಗರೀಕರು ಪ್ರಯಾಣದರ ಏರಿಕೆ ವಿರುದ್ಧ ಹೋರಾಟ ಮಾಡಬೇಕೆಂದು ಕರೆ ನೀಡಿದರು. ಸಾರಿಗೆ ಸಚಿವರ ಮನೆ ಮುಂದೆ ಧರಣಿ ನಡೆಸಲು ಸಿದ್ಧವಾಗುತ್ತಿದ್ದ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು. ಚಿತ್ರಗಳಲ್ಲಿ ನೋಡಿ ಪ್ರತಿಭಟನೆ [ಚಿತ್ರಕೃಪೆ : ಬಿಬಿವಿಪಿ]

ಪ್ರಯಾಣ ದರ ಏರಿಕೆ ವಿರುದ್ಧ ಪ್ರತಿಭಟನೆ
ಬಿಎಂಟಿಸಿ ಪ್ರಯಾಣದರ ಏರಿಕೆ ಮಾಡಿರುವುದನ್ನು ಖಂಡಿಸಿ ಬೆಂಗಳೂರು ಬಸ್ ಪ್ರಯಾಣಿಕರ ವೇದಿಕೆ ಪ್ರತಿಭಟನೆ ನಡೆಸಿತು. ಭಾನುವಾರ ಶಾಂತಿನಗರ ಬಸ್ ನಿಲ್ದಾಣದಿಂದ ಸಚಿವ ರಾಮಲಿಂಗಾ ರೆಡ್ಡಿ ನಿವಾಸದವರೆಗೆ ಜಾಥಾ ನಡೆಸಲು ಮುಂದಾದ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿ, ನಂತರ ಬಿಡುಗಡೆ ಮಾಡಿದರು.

ಸಾರಿಗೆ ಸಚಿವರ ಮನೆ ಮುಂದೆ ಪ್ರತಿಭಟನೆ
ಶಾಂತಿನಗರ ಬಸ್ ನಿಲ್ದಾಣದಲ್ಲಿ ಬೆಳಗ್ಗೆ 10.30ಕ್ಕೆ ಪ್ರತಿಭಟನೆ ಆರಂಭಿಸಿದ ಬೆಂಗಳೂರು ಬಸ್ ಪ್ರಯಾಣಿಕರ ವೇದಿಕೆ ಕಾರ್ಯಕರ್ತರು ಜಾಥಾ ಮೂಲಕ ತೆರಳಿ, ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಮನೆ ಮುಂದೆ ಪ್ರತಿಭಟನೆ ನಡೆಸಲು ಸಜ್ಜಾಗಿದ್ದರು. ಆದರೆ, ಪ್ರತಿಭಟನೆಗೆ ಅನುಮತಿ ಪಡೆಯದ ಕಾರಣ ಪೊಲೀಸರು ಕಾರ್ಯಕರ್ತರನ್ನು ಬಂಧಿಸಿ, ನಂತರ ಬಿಡುಗಡೆ ಮಾಡಿದರು.

ಪ್ರತಿಭಟನೆಗೆ ಅನುಮತಿ ಪಡೆದಿರಲಿಲ್ಲ
ಶಾಂತಿನಗರ ಬಸ್ ನಿಲ್ದಾಣದ ಬಳಿ ಪ್ರತಿಭಟನೆ ನಡೆಸುತ್ತಿದ್ದ ಸ್ಥಳಕ್ಕೆ ಆಗಮಿಸಿದ ಪೊಲೀಸರು ಪ್ರತಿಭಟನೆಗೆ ಅವಕಾಶ ಪಡೆದಿಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದರು. ಈ ವಿಚಾರವಾಗಿ ಪೊಲೀಸರು ಮತ್ತು ಪ್ರತಿಭಟನಾನಿರತರ ನಡುವೆ ಕೆಲಕಾಲ ವಾಗ್ವಾದ ನಡೆಯಿತು.

ಕಾರ್ಯಕರ್ತರ ಆಕ್ರೋಶ
ಬೆಂಗಳೂರು ಬಸ್ ಪ್ರಯಾಣಿಕರ ವೇದಿಕೆ ಕಾರ್ಯಕರ್ತರು ಪೊಲೀಸರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನೆ ನಡೆಸಲು ಅನುಮತಿ ಕೋರಿ ಮೇ 13ರಂದೇ ಹೆಚ್ಚುವರಿ ಪೊಲೀಸ್ ಆಯುಕ್ತರಿಗೆ ಪತ್ರ ಬರೆದು ಮನವಿ ಮಾಡಲಾಗಿತ್ತು. ಅವರು ಕೂಡ ಮೌಖಿಕವಾಗಿ ಅನುಮತಿ ನೀಡಿದ್ದರು. ಆದರೆ, ಪೊಲೀಸರು ನಮ್ಮ ಮಾತನ್ನು ಕೇಳದೆ ಬಂಧಿಸುತ್ತಿದ್ದಾರೆ ಎಂದು ವೇದಿಕೆ ಸಂಚಾಲಕ ವಿನಯ್ ಶ್ರೀನಿವಾಸ್ ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆ ಮುಂದುವರೆಸುತ್ತೇವೆ
ಬಿಎಂಟಿಸಿ ಪ್ರಯಾಣ ದರ ಇಳಿಕೆ ಮಾಡುವವರೆಗೂ ಪ್ರತಿಭಟನೆ ನಡೆಸಲಾಗುವುದು ಎಂದು ವೇದಿಕೆ ಕಾರ್ಯಕರ್ತರು ಎಚ್ಚರಿಕೆ ನೀಡಿದ್ದಾರೆ. ಕಿ.ಮೀಗೆ 50 ಪೈಸೆ ನಿಗದಿಪಡಿಸಬೇಕೆಂಬ ಆಂದೋಲನವನ್ನು ಮುಂದುವರೆಸುತ್ತೇವೆ ಎಂದು ಹೇಳಿದ್ದಾರೆ.












Click it and Unblock the Notifications