Bengaluru Property BCIC ಎಫೆಕ್ಟ್: ಬೆಂಗಳೂರು ಸುತ್ತ ಭೂಮಿಗೆ ಬಂಗಾರದ ಬೆಲೆ, ರಿಯಲ್ ಎಸ್ಟೇಟ್‌ಗೂ ಹೊಸ ಬೂಸ್ಟ್
Bengaluru Property BCIC: ಬೆಂಗಳೂರಿನಲ್ಲಿ ಭೂಮಿಗೆ ಬಂಗಾರದ ಬೆಲೆ ಇದೆ. ಇದೀಗ ಬೆಂಗಳೂರಿನ ವಿವಿಧ ಭಾಗದಲ್ಲಿ ಅಭಿವೃದ್ಧಿ ವೇಗ ಪಡೆದುಕೊಂಡಿದೆ. ಇದರೊಂದಿಗೆ ಬೆಂಗಳೂರಿನ ಆಸ್ತಿದಾರರಿಗೂ ಭರ್ಜರಿ ಗುಡ್‌ನ್ಯೂಸ್ ಸಿಕ್ಕಂತೆ ಆಗಿದೆ. ಬೆಂಗಳೂರಿನ ಹೊರ ವಲಯದಲ್ಲೂ ಅಭಿವೃದ್ಧಿ ಹೆಚ್ಚಾಗಿದೆ. ಹೊಸ ತಂತ್ರಜ್ಞಾನ ಪಾರ್ಕ್, ಮೂಲಸೌಕರ್ಯ ಸೇರಿದಂತೆ ವಿವಿಧ ವಿಚಾರಗಳಲ್ಲಿ ಬೆಂಗಳೂರು ಅಭಿವೃದ್ಧಿ ಹೊಂದುತ್ತಿದೆ. ಆದರೆ, ಬೆಂಗಳೂರು-ಚೆನ್ನೈ ಕೈಗಾರಿಕಾ ಕಾರಿಡಾರ್ (BCIC) ಬೆಂಗಳೂರಿನ ರಿಯಲ್ ಎಸ್ಟೇಟ್‌ಗೆ ಹೊಸ ಬೂಸ್ಟ್ ಕೊಟ್ಟಿದೆ. ಬೆಂಗಳೂರಿನ ಬಿಡದಿ ಟೌನ್‌ಶಿಪ್ ನಿರ್ಮಾಣ ಯೋಜನೆಯೂ ಸಹ ಬೆಂಗಳೂರಿನಲ್ಲಿ ಭೂಮಿ ಬೆಲೆ ಹೆಚ್ಚಳ ಹಾಗೂ ನಗರದ ವಿಸ್ತರಣೆಗೆ ಕಾರಣವಾಗಿದೆ.
ಬೆಂಗಳೂರು-ಚೆನ್ನೈ ಕೈಗಾರಿಕಾ ಕಾರಿಡಾರ್ ಯೋಜನೆಯು ಬೆಂಗಳೂರು ಹಾಗೂ ಕರ್ನಾಟಕಕ್ಕೆ ಮಾತ್ರವಲ್ಲ, ಇಡೀ ದಕ್ಷಿಣ ಭಾರತಕ್ಕೇ ಲಾಭವನ್ನು ತಂದುಕೊಡಲಿದೆ. ಕರ್ನಾಟಕ, ತಮಿಳುನಾಡು, ಆಂಧ್ರಪ್ರದೇಶ ಹಾಗೂ ತೆಲಂಗಾಣ ಮೂಲಕ ಸುಮಾರು 560 ಕಿ.ಮೀ. ವ್ಯಾಪ್ತಿಯ ಪ್ರದೇಶದಲ್ಲಿ ಈ ಕಾರಿಡಾರ್ ವಿಸ್ತರಣೆ ಆಗಲಿದೆ. BCIC ಅನ್ನು ಕೈಗಾರಿಕಾ ಅಭಿವೃದ್ಧಿಯ ಪ್ರಮುಖ ಕೇಂದ್ರಗಳನ್ನು (Nodes) ಆಧಾರವಾಗಿರಿಸಿಕೊಂಡು ಈ ಯೋಜನೆಯನ್ನು ರೂಪಿಸಲಾಗಿದೆ. ಸಾಮಾನ್ಯವಾಗಿ ಮೊದಲು ಅಭಿವೃದ್ಧಿ ಆದ ನಂತರ ಮೂಲಸೌಕರ್ಯ ವಿಸ್ತರಣೆ ಆಗಲಿದೆ. ಆದರೆ BCIC ಯೋಜನೆ ಪ್ರಾರಂಭದಿಂದಲೇ ಕೈಗಾರಿಕೆಗಳು, ಕಚೇರಿಗಳು ಹಾಗೂ ಅಗತ್ಯ ಮೂಲಸೌಕರ್ಯ ಸೇವೆಯನ್ನು ಒಟ್ಟಾಗಿ ಅಭಿವೃದ್ಧಿಪಡಿಸುವ ಗುರಿಯನ್ನು ಹಾಕಿಕೊಳ್ಳಲಾಗಿದೆ. ಇದರಿಂದ ಆರ್ಥಿಕ ಬೆಳವಣಿಗೆಯ ಜೊತೆಗೆ ನಗರಗಳು ಅಭಿವೃದ್ಧಿಯಾಗುವ ವಿಧಾನವೂ ಬದಲಾಗಲಿದೆ ಎಂದು ಹೇಳಲಾಗಿದೆ.

ಬೆಂಗಳೂರು-ಚೆನ್ನೈ ಕೈಗಾರಿಕಾ ಕಾರಿಡಾರ್ (CBIC) ಮುಖ್ಯವಾಗಿ ಕರ್ನಾಟಕ, ತಮಿಳುನಾಡು ಮತ್ತು ಆಂಧ್ರಪ್ರದೇಶ ರಾಜ್ಯಗಳನ್ನು ಬೆಸೆಯುವ ಪ್ರಮುಖ ಆರ್ಥಿಕ ಮತ್ತು ಉತ್ಪಾದನಾ ಯೋಜನೆ ಆಗಿದೆ. ಅಲ್ಲದೆ ಇದು ಉತ್ತಮ ಸಾರಿಗೆ ವ್ಯವಸ್ಥೆ, ಹೊಸ ಕೈಗಾರಿಕಾ ನಗರಗಳು ಹಾಗೂ ಉದ್ಯೋಗ ಸೃಷ್ಟಿಗೆ ಸಹಕಾರಿ ಆಗಲಿದೆ.
ಬೆಂಗಳೂರಿನಲ್ಲಿ ಬಾಡಿಗೆ ಬೆಲೆ ಹೆಚ್ಚಳ
ಇನ್ನು ಬೆಂಗಳೂರಿನಲ್ಲಿ ವಿವಿಧ ಕಾಮಗಾರಿಗಳ ಅನುಷ್ಠಾನದೊಂದಿಗೆ ಬೆಂಗಳೂರಿನಲ್ಲಿ ಬಾಡಿಗೆ ಮನೆಗಳ ಬಾಡಿಗೆಯೂ ಸಹ ಗಣನೀಯವಾಗಿ ಹೆಚ್ಚಳವಾಗಿದೆ. ಬೆಂಗಳೂರಿನ ವಿವಿಧ ಪ್ರದೇಶಗಳಲ್ಲಿ ಮೆಟ್ರೋ ಯೋಜನೆ ವಿಸ್ತರಣೆ ಹಾಗೂ ಮೆಟ್ರೋ ನಿಲ್ದಾಣಗಳ ಅಭಿವೃದ್ಧಿ ಕಾರಣಕ್ಕೆ ಬೆಂಗಳೂರಿನ ವಿವಿಧ ಭಾಗದಲ್ಲಿ ಪ್ರಾಪರ್ಟಿ ಬೆಲೆ ಹೆಚ್ಚಳವಾಗಿದೆ. ಬೆಂಗಳೂರಿನ ಸುತ್ತಮುತ್ತಲಿನ ಪ್ರದೇಶಗಳು ಸಹ ಅಭಿವೃದ್ಧಿ ಆಗುತ್ತಿರುವುದರಿಂದ ಸಹಜವಾಗಿಯೇ ಬೆಂಗಳೂರು ಹಾಗೂ ಬೆಂಗಳೂರಿನ ಸುತ್ತಮುತ್ತಲಿನ ಪ್ರದೇಶದಲ್ಲಿ ಪ್ರಾಪರ್ಟಿ ಬೆಲೆಯೂ ಸಹ ಹೆಚ್ಚಳವಾಗಿದೆ.
ವಿವಿಧ ಕಾಮಗಾರಿಗಳಿಗೆ ಡೆಡ್‌ಲೈನ್
ಇನ್ನು ಬೆಂಗಳೂರಿನಲ್ಲಿ ನಡೆಯುತ್ತಿರುವ ವಿವಿಧ ಕಾಮಗಾರಿಗಳಿಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರವು ಡೆಡ್‌ಲೈನ್ ನಿಗದಿ ಮಾಡಿದೆ. ಇದರಿಂದ ಬೆಂಗಳೂರಿನ ಪ್ರಮುಖ ಪ್ರದೇಶಗಳಲ್ಲಿ ಟ್ರಾಫಿಕ್ ಜಾಮ್ ಸಮಸ್ಯೆ ಕಡಿಮೆ ಆಗಲಿದೆ ಎಂದು ಅಂದಾಜಿಸಲಾಗಿದೆ. ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ವ್ಯಾಪ್ತಿಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳಿಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್ ಅವರು, ಪ್ರಗತಿಯಲ್ಲಿರುವ ಕಾಮಗಾರಿಗಳಿಗೆ ಹೊಸ ಡೆಡ್‌ಲೈನ್ ನಿಗದಿ ಮಾಡಿದ್ದಾರೆ.


Click it and Unblock the Notifications
