ಅಪಘಾತದಲ್ಲಿ ವಿದ್ಯಾರ್ಥಿನಿ ಸಾವು, ಕಣ್ಣು ದಾನ ಮಾಡಿದ ಪೋಷಕರು
ಬೆಂಗಳೂರು, ಜುಲೈ 22 : ಬೆಂಗಳೂರಿನಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಪ್ರಥಮ ಬಿ.ಕಾಂ ವಿದ್ಯಾರ್ಥಿನಿ ಮೃತಪಟ್ಟಿದ್ದಾರೆ. ಪೋಷಕರು ವಿದ್ಯಾರ್ಥಿನಿ ಕಣ್ಣುಗಳನ್ನು ದಾನ ಮಾಡಿದ್ದು, ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ.
ಲಾಲ್ ಬಾಗ್ ಪಶ್ಚಿಮ ದ್ವಾರದ ಬಳಿ ಭಾನುವಾರ ಬೆಳಗ್ಗೆ ನಡೆದ ರಸ್ತೆ ಅಪಘಾತದಲ್ಲಿ ಪ್ರೀತಿ (19) ಮೃತಪಟ್ಟಿದ್ದಾರೆ. ಪ್ರೀತಿ ಸುರನಾ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿ.ಕಾಂ ವ್ಯಾಸಂಗ ಮಾಡುತ್ತಿದ್ದರು.
ಪ್ರೀತಿ ಇಂದು ಬೆಳಗ್ಗೆ ಸಹೋದರಿ ಲಾವಣ್ಯ ಜೊತೆ ಬೈಕ್‌ನಲ್ಲಿ ಹೋಗುತ್ತಿರಬೇಕಾದರೆ ಕಾಂಕ್ರೀಟ್ ಮಿಶ್ರಣ ಮಾಡುವ ಲಾರಿ ಬಂದು ಬೈಕ್‌ಗೆ ಡಿಕ್ಕಿ ಹೊಡೆದಿದೆ. ಕೆಳಗೆ ಬಿದ್ದ ಪ್ರೀತಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.

24 ವರ್ಷದ ಲಾವಣ್ಯ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಅಪಘಾತದ ತೀವ್ರತೆಗೆ ಸ್ಕೂಟಿ ಸಂಪೂರ್ಣವಾಗಿ ಜಖಂ ಆಗಿದೆ. ತಲೆಗೆ ಬಲವಾದ ಪೆಟ್ಟು ಬಿದ್ದ ಕಾರಣ ಪ್ರೀತಿ ಮೃತಪಟ್ಟಿದ್ದಾರೆ.
ಪ್ರೀತಿಯ ಎರಡೂ ಕಣ್ಣುಗಳನ್ನು ಪೋಷಕರು ದಾನ ಮಾಡಿದ್ದು, ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ. ಅಪಘಾತ ನಡೆದ ಸ್ಥಳಕ್ಕೆ ವಿ.ವಿ.ಪುರಂ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.












Click it and Unblock the Notifications