ಬಿಡಿಎ, ಬಿಬಿಎಂಪಿ ಕಾರ್ಯಾಚರಣೆ 180 ಕೋಟಿಗೂ ಹೆಚ್ಚು ಆಸ್ತಿ ವಶಕ್ಕೆ!

ಬೆಂಗಳೂರಿನಲ್ಲಿ ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆಯಂತೆಯೇ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಸಹ ಇದೀಗ ಬೃಹತ್‌ ಕಾರ್ಯಾಚರಣೆಗಳನ್ನು ಬೆಂಗಳೂರಿನಲ್ಲಿ ನಡೆಸುತ್ತಿದೆ. ಬೆಂಗಳೂರಿನಲ್ಲಿ ಬಿಡಿಎ ಇತ್ತೀಚಿನ ದಿನಗಳಲ್ಲಿ ಬೃಹತ್‌ ಕಾರ್ಯಾಚರಣೆಯೊಂದನ್ನು ಈಗ ನಡೆಸಿದೆ. ಬಿಡಿಎ ನಡೆಸಿದ ಈ ಕಾರ್ಯಾಚರಣೆಯಲ್ಲಿ ಸುಮಾರು 120 ಕೋಟಿ ರೂಪಾಯಿಗಳ ಆಸ್ತಿ ವಶಕ್ಕೆ ಪಡೆದುಕೊಳ್ಳಲಾಗಿದೆ. ಬೆಂಗಳೂರಿನಲ್ಲಿ ಬಿಬಿಎಂಪಿಯು ಇಲ್ಲಿಯ ವರೆಗೆ ಈ ರೀತಿಯ ಕಾರ್ಯಾಚರಣೆಯನ್ನು ನಡೆಸುತ್ತಿತ್ತು. ಇದೀಗ ಬಿಡಿಎ ಸಹ ಬಿಬಿಎಂಪಿ ಮಾದರಿಯ ಕಾರ್ಯಾಚರಣೆಯನ್ನು ಶುರು ಮಾಡಿಕೊಂಡಿದೆ. ಅದೇನು ಎನ್ನುವ ವಿವರ ಇಲ್ಲಿದೆ.

ಬೆಂಗಳೂರಿನಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು ಅನಧಿಕೃತವಾಗಿ ನಿರ್ಮಾಣವಾಗುತ್ತಿರುವ ಕಟ್ಟಡಗಳನ್ನು ತೆರವುಗೊಳಿಸುವ ಕಾರ್ಯಾಚರಣೆಯನ್ನು ಮುಂದುವರೆಸಿದೆ. ಗುರುವಾರ ನಡೆಸಿದ ಕಾರ್ಯಾಚರಣೆಯಲ್ಲಿ ನಾಗರಬಾವಿ ಬಡಾವಣೆಯ ಮಾಳಗಾಲ ಎನ್ನುವ ಪ್ರದೇಶದಲ್ಲಿ ಬರೋಬ್ಬರಿ 120 ಕೋಟಿ ರೂಪಾಯಿ ಮೊತ್ತದ ಆಸ್ತಿಯನ್ನು ವಶಪಡಿಸಿಕೊಂಡಿದೆ. ಬೆಂಗಳೂರು ಉತ್ತರ ತಾಲ್ಲೂಕು ಯಶವಂತಪುರ ಹೋಬಳಿ ವ್ಯಾಪ್ತಿಯ ಮಾಳಗಾಲ ಗ್ರಾಮದ (ನಾಗರಬಾವಿ ಬಡಾವಣೆ)ಲ್ಲಿ ಈ ಕಾರ್ಯಾಚರಣೆಯನ್ನು ನಡೆಸಿರುವುದಾಗಿ ಬಿಡಿಎ ಹೇಳಿದೆ.

BDA and BBMP launches Massive Operation Seize Property Worth Over 180 Crore

ಈ ಭಾಗದಲ್ಲಿ ನಿರ್ಮಾಣ ಮಾಡಲಾಗಿದ್ದ 20 ಎ.ಸಿ. ಶೀಟ್ ಶೆಡ್, ಆರ್.ಟಿ.ಸಿ. ಕಟ್ಟಡಗಳನ್ನು ತೆರವುಗೊಳಿಸುವ ಮೂಲಕ ಬರೋಬ್ಬರಿ 120 ಕೋಟಿ ರೂಪಾಯಿ ಬೆಲೆ ಬಾಳುವ ಪ್ರದೇಶವನ್ನು ಪ್ರಾಧಿಕಾರವು ವಶಪಡಿಸಿಕೊಂಡಿದೆ.

65 ಕೋಟಿ ಆಸ್ತಿ ವಶ: ಇನ್ನು ಈಚೆಗೆ ಬೆಂಗಳೂರಿನ ಭೀಮನಕುಪ್ಪೆಯಲ್ಲಿ ಬೃಹತ್‌ ಕಾರ್ಯಾಚರಣೆಯನ್ನು ನಡೆಸಿದ್ದ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು ಬರೋಬ್ಬರಿ 65 ಕೋಟಿ ರೂಪಾಯಿ ಮೊತ್ತದ ಆಸ್ತಿಯನ್ನು ವಶಕ್ಕೆ ಪಡೆದಿತ್ತು. ಬೆಂಗಳೂರಿನಲ್ಲಿ ಕಳೆದ ಒಂದು ತಿಂಗಳಿನಿಂದಲೂ ಬಿಡಿಎ ಬೆಂಗಳೂರಿನ ವಿವಿಧ ಭಾಗದಲ್ಲಿ ಕಾರ್ಯಾಚರಣೆಯನ್ನು ನಡೆಸಿದ್ದು. ಬಿಡಿಎಗೆ ಸೇರಿರುವ ಆಸ್ತಿಗಳನ್ನು ಸಂರಕ್ಷಣೆ ಮಾಡಿಕೊಳ್ಳುವುದಕ್ಕೆ ಮುಂದಾಗಿದೆ.

ರಾಜರಾಜೇಶ್ವರಿ ನಗರದಲ್ಲಿ ಬಿಬಿಎಂಪಿ ಕಾರ್ಯಾಚರಣೆ

ಇನ್ನು ಬಿಡಿಎ ಒಂದು ಕಡೆ ಬೃಹತ್‌ ಕಾರ್ಯಾಚರಣೆಗಳನ್ನು ನಡೆಸುತ್ತಿದ್ದಾರೆ. ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ ಸಹ ಬೃಹತ್‌ ಕಾರ್ಯಾಚರಣೆಗೆ ಇಳಿದಿದೆ. ಈಚೆಗೆ ಬೆಂಗಳೂರಿನ ರಾಜರಾಜೇಶ್ವರಿ ನಗರದ ಹೆಚ್.ಎಂ.ಟಿ ವ್ಯಾಪ್ತಿಯಲ್ಲಿ ರಾಜಕಾಲುವೆ ಭಾಗದಲ್ಲಿ ಅನಧಿಕೃತವಾಗಿ ಒತ್ತುವರಿ ಮಾಡಿಕೊಂಡು ನಿರ್ಮಾಣ ಮಾಡಿಕೊಂಡಿದ್ದ ಶೆಡ್‌ಗಳನ್ನು ತೆರವುಗೊಳಿಸಿದೆ.

ಬಿಬಿಎಂಪಿಯ ಆರ್.ಆರ್ ನಗರ ವಲಯದ ಎಚ್.ಎಂ.ಟಿ ವಾರ್ಡ್‌ನಲ್ಲಿ ಈ ಕಾರ್ಯಾಚರಣೆ ನಡೆದಿದೆ. ತುಮಕೂರು ಮುಖ್ಯರಸ್ತೆಯಿಂದ ಎಸ್.ಆರ್.ಎಸ್ ಸಿಗ್ನಲ್ ಕಡೆಗೆ ಹೋಗುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ಹೊಂದಿಕೊಂಡಿರುವ ರಾಜಕಾಲುವೆಯ ಸುತ್ತಮುತ್ತಲಿನ ಸುಮಾರು 100 ಮೀ. ಪ್ರದೇಶದಲ್ಲಿ ಅನಧಿಕೃತವಾಗಿ ಒತ್ತುವರಿ ಮಾಡಿಕೊಂಡಿದ್ದ ಸುಮಾರು 35ಕ್ಕೂ ಹೆಚ್ಚು ಶೆಡ್‌ಗಳು ಹಾಗೂ ಒಂದು ಗ್ಯಾರೇಜ್ ಒತ್ತುವರಿಯನ್ನು ತೆರವು ಮಾಡಲಾಗಿದೆ.

ಒತ್ತುವರಿ ಮಾಡಿಕೊಂಡಿದ್ದ ಜಾಗವನ್ನು ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ ವಶಕ್ಕೆ ಪಡೆದಿದೆ. ಈ ಭಾಗದ ಶೆಡ್ ಹಾಗೂ ಗ್ಯಾರೇಜ್‌ಗಳನ್ನು ಸಂಪೂರ್ಣ ತೆರವುಗೊಳಿಸಲಾಗಿದೆ. ಮತ್ತೆ ಒತ್ತುವರಿ ಮಾಡದಂತೆ ಸ್ಥಳದಲ್ಲಿ ವಾಸವಿದ್ದ ನಿವಾಸಿಗಳಿಗೆ ಎಚ್ಚರಿಕೆಯನ್ನು ಸಹ ನೀಡಲಾಗಿದೆ ಎಂದು ಬಿಬಿಎಂಪಿಯ ಅಧಿಕಾರಿಗಳು ಮಾಹಿತಿ ಕೊಟ್ಟಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+