• search
 • Live TV
ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಅಸಾರಾಂ ಬಾಪು ಆಶ್ರಮಕ್ಕೆ ನೀಡಿದ ಸೈಟ್ ರದ್ದುಗೊಳಿಸಿದ ಬಿಡಿಎ

|

ಬೆಂಗಳೂರು, ಜೂನ್ 19 : ಸ್ವಯಂ ಘೋಷಿತ ದೇವಮಾನವ ಅಸಾರಾಂ ಬಾಪುಗೆ ಬಿಡಿಎ ಶಾಕ್ ನೀಡಿದೆ. ಬೆಂಗಳೂರು ನಗರದಲ್ಲಿ ನೀಡಲಾಗಿದ್ದ ಸಿಎ ನಿವೇಶವನ್ನು ರದ್ದುಗೊಳಿಸಲು ಆಡಳಿತ ಮಂಡಳಿ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ.

   ದಾಖಲೆ ಪ್ರಮಾಣದಲ್ಲಿ ಏರಿಕೆ ಆಯಿತು ಪೆಟ್ರೋಲ್, ಡೀಸೆಲ್ ಬೆಲೆ | Oneindia Kannada

   2004ರಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಬನಶಂಕರಿ 2ನೇ ಹಂತದಲ್ಲಿ ಅಸಾರಾಂ ಬಾಪು ಆಶ್ರಮದ ಕಟ್ಟಡ ನಿರ್ಮಾಣಕ್ಕೆ ಸಿಎ ಸೈಟ್‌ ನೀಡಿತ್ತು. 30 ವರ್ಷಗಳ ಅವಧಿಗೆ ಗುತ್ತಿಗೆ ಆಧಾರದ ಮೇಲೆ ಇದನ್ನು ನೀಡಲು ಒಪ್ಪಂದ ಮಾಡಿಕೊಳ್ಳಲಾಗಿತ್ತು.

   ನಿವೇಶನ ಇ-ಹರಾಜಿಗೆ ಅರ್ಜಿ ಕರೆದ ಬಿಡಿಎ; ಎಲ್ಲೆಲ್ಲಿ ಇವೆ ಸೈಟ್

   ಸಾಮಾಜಿಕ ಮತ್ತು ಧಾರ್ಮಿಕ ಕಾರ್ಯಕ್ರಮಗಳನ್ನು ನಡೆಸಲು 2014ರಲ್ಲಿ ಈ ನಿವೇಶನದಲ್ಲಿ 3 ಅಂತಸ್ತಿನ ಕಟ್ಟಡವನ್ನು ನಿರ್ಮಾಣ ಮಾಡಲಾಗಿದೆ. ಸಾಮಾಜಿಕ ಕಾರ್ಯಕರ್ತರೊಬ್ಬರು ಆಶ್ರಮ ಬಿಡಿಎ ಒಪ್ಪಂದದ ನಿಯಮಗಳನ್ನು ಉಲ್ಲಂಘನೆ ಮಾಡುತ್ತಿದೆ ಎಂದು ದೂರು ನೀಡಿದ್ದರು.

   ಅತ್ಯಾಚಾರ ಪ್ರಕರಣ: ಅಸಾರಾಂ ಬಾಪು ಮಧ್ಯಂತರ ಜಾಮೀನು ಅರ್ಜಿ ವಜಾ

   ಅಸಾರಾಂ ಬಾಪು ಆಶ್ರಮಕ್ಕೆ ನೀಡಿದ್ದ ಜಾಗದಲ್ಲಿ ಬಿಡಿಎ ನಿಯಮಗಳ ಉಲ್ಲಂಘನೆಯಾಗುತ್ತಿದೆ. ಸಿಎ ನಿವೇಶನ ಹಂಚಿಕೆಯನ್ನು ರದ್ದುಗೊಳಿಸಬೇಕು. ಕಟ್ಟಡವನ್ನು ಬಿಡಿಎ ವಶಕ್ಕೆ ಪಡೆದುಕೊಂಡು ಬೇರೆ ಸಂಸ್ಥೆಗೆ ನೀಡಬಹುದು ಎಂದು ದೂರಿನಲ್ಲಿ ಉಲ್ಲೇಖಿಸಿದ್ದರು.

   ಕ್ಷಮಾದಾನಕ್ಕಾಗಿ ಅರ್ಜಿ ಹಾಕಿದ 'ದೇವ ಮಾನವ' ಅಸಾರಾಮ್ ಬಾಪು

   ಬುಧವಾರ ನಡೆದ ಬಿಡಿಎ ಆಡಳಿತ ಮಂಡಳಿ ಸಭೆಯಲ್ಲಿ ಈ ಕುರಿತು ಚರ್ಚೆ ನಡೆದಿದ್ದು, ನಿವೇಶನ ಹಂಚಿಕೆಯನ್ನು ರದ್ದುಗೊಳಿಸಲು ತೀರ್ಮಾನಿಸಲಾಗಿದೆ. ಕಟ್ಟಡವನ್ನು ಬಿಡಿಎ ವಶಕ್ಕೆ ಪಡೆಯುವ ನಿರೀಕ್ಷೆ ಇದೆ.

   ಸ್ವಯಂ ಘೋಷಿತ ದೇವಮಾನದ ಅಸಾರಾಂ ಬಾಪು ಅಪ್ರಾಪ್ತೆ ಮೇಲೆ ಅತ್ಯಾಚಾರ ನಡೆಸಿದ ಪ್ರಕರಣದಲ್ಲಿ ಅಪರಾಧಿ. ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದ್ದು ಜೈಲಿನಲ್ಲಿ ಶಿಕ್ಷೆ ಅನುಭವಿಸುತ್ತಿದ್ದಾರೆ.

   English summary
   Bangalore Development Authority (BDA) cancelled the CA site issued to the Sant Shri Asharamji Bapu Ashram in Banashankari 2nd Stage. Site leased out in 2004 for 30 years.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X