ಬೆಂಗಳೂರಿನ ಆಸ್ತಿದಾರರಿಗೆ ಬಿಡಿಎ ಶಾಕ್: ಈ ಭಾಗದಲ್ಲಿ ನಿರ್ಮಾಣ ಹಂತದ ಕಟ್ಟಡಗಳಿಗೆ ನೋಟಿಸ್!
ಬೆಂಗಳೂರಿನ ಆಸ್ತಿದಾರರಿಗೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು ಶಾಕ್ ನೀಡಿದೆ. ಬೆಂಗಳೂರಿನಲ್ಲಿ ಪ್ರಮುಖ ಯೋಜನೆಯ ವಿಸ್ತರಣೆಯ ಭಾಗವಾಗಿ ನೋಟಿಸ್ ನೀಡಲಾಗಿದ್ದು. ಈ ನೋಟಿಸ್‌ನಿಂದ ಬೆಂಗಳೂರಿನ ನಿರ್ದಿಷ್ಟ ಭಾಗದ ಆಸ್ತಿದಾರರು ಶಾಕ್‌ಗೆ ಒಳಗಾಗಿದ್ದಾರೆ. ಬೆಂಗಳೂರಿನ ಯಾವ ಆಸ್ತಿದಾರರಿಗೆ ಶಾಕ್ ನೀಡಲಾಗಿದೆ. ಈ ಸಂಬಂಧಿ ಬಿಡಿಎ ಹೇಳಿರುವುದೇನು ಎನ್ನುವ ಸಂಪೂರ್ಣ ವಿವರ ಇಲ್ಲಿದೆ.
ಬೆಂಗಳೂರಿನ ನಾಡಪ್ರಭು ಕೆಂಪೇಗೌಡ ಲೇಔಟ್ (NPKL) ವಿಸ್ತರಣೆಯ ಭಾಗವಾಗಿ ಭೂಸ್ವಾಧೀನ ಪ್ರಕ್ರಿಯೆಗೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಮುಂದಾಗಿದೆ. ಆದರೆ ಈ ರೀತಿ ಭೂಸ್ವಾಧೀನ ಪ್ರಕ್ರಿಯೆ ಮಾಡಿಕೊಳ್ಳುವ ಹಂತದಲ್ಲಿ ಈಗಾಗಲೇ ನಿರ್ಮಾಣ ಹಂತದಲ್ಲಿರುವ ಆಸ್ತಿಗಳಿಗೂ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು ನೋಟಿಸ್ ನೀಡಿರುವುದು ಭಾರೀ ಚರ್ಚೆಗೆ ಕಾರಣವಾಗಿದೆ. ಈ ರೀತಿ ಆಸ್ತಿದಾರರಿಗೆ ನೋಟಿಸ್ ನೀಡುತ್ತಿರುವುದು ಕೆಂಗೇರಿ ಸುತ್ತಮುತ್ತಲಿನ ಆಸ್ತಿ ಮಾಲೀಕರಿಗೆ ಶಾಕ್ ನೀಡಿದೆ. ನಿರ್ಮಾಣ ಹಂತದಲ್ಲಿರುವ ಕಟ್ಟಡಗಳಿಗೆ ನೋಟಿಸ್ ನೀಡಲಾಗಿದೆ ಎಂದು ಹೇಳಲಾಗಿದ್ದು. ಈ ವಿಚಾರವಾಗಿ ಆಸ್ತಿದಾರರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಬೆಂಗಳೂರಿನ ನಾಡಪ್ರಭು ಕೆಂಪೇಗೌಡ ಲೇಔಟ್ ವಿಸ್ತರಣೆಯ ಎರಡನೇ ಹಂತವನ್ನು ಸುಗಮ ಅನುಷ್ಠಾನದ ಉದ್ದೇಶದಿಂದ ಕೆಂಗೇರಿಯ ಸುತ್ತಮುತ್ತಲಿನ ಪ್ರದೇಶದ 17 ಗ್ರಾಮಗಳಲ್ಲಿಗಳ ವ್ಯಾಪ್ತಿಯಲ್ಲಿ 9,000 ಎಕರೆಗಳನ್ನು ಭೂಸ್ವಾಧೀನಪಡಿಸಿಕೊಳ್ಳುವ ಯೋಜನೆಯ ಬಗ್ಗೆ ಹೇಳಿದ ಕೆಲವೇ ದಿನಗಳಲ್ಲಿ ಪ್ರಾಧಿಕಾರವು ಈ ಕ್ರಮಕ್ಕೆ ಬಂದಿದೆ.
ಅಧಿಕೃತ ಭೂಸ್ವಾಧೀನ ಪ್ರಕ್ರಿಯೆಯು ಇನ್ನೂ ಪ್ರಾರಂಭವಾಗಿಲ್ಲ. ಇನ್ನು ಬಿಡಿಎ ಎಂಜಿನಿಯರ್‌ಗಳು ಈಗಾಗಲೇ ಈ ಗ್ರಾಮಗಳಿಗೆ ಪ್ರತಿದಿನ ಭೇಟಿ ನೀಡಿ ಪರಿಶೀಲನೆ ಮಾಡುತ್ತಿದ್ದಾರೆ ಹಾಗೂ ಈ ಭಾಗದಲ್ಲಿ ನಿರ್ಮಾಣ ಹಂತದಲ್ಲಿರುವ ಕಟ್ಟಡ ನಿರ್ಮಾಣಗಳ ಯೋಜನೆಯನ್ನು ಪರಿಶೀಲನೆ ಮಾಡುತ್ತಿದ್ದಾರೆ.
ಅಲ್ಲದೇ ಈ ಭಾಗದಲ್ಲಿ ನಿರ್ಮಾಣ ಹಂತದಲ್ಲಿರುವ ಕಟ್ಟಡಗಳ ಮಾಲೀಕರಿಗೆ ನೋಟಿಸ್‌ನೊಂದಿಗೆ ಮಾಹಿತಿಯನ್ನೂ ನೀಡಲಾಗುತ್ತಿದೆ. ಈ ಯೋಜನೆಗಳ ಮಾಲೀಕರಿಗೆ ಕಾಮಗಾರಿಯನ್ನು ತಕ್ಷಣವೇ ನಿಲ್ಲಿಸುವಂತೆ ಅಥವಾ ಕಟ್ಟಡಗಳನ್ನು ತೆರವು ಮಾಡಬೇಕಾಗುತ್ತದೆ ಎಂದೂ ಎಚ್ಚರಿಕೆ ನೀಡಿ ನೋಟಿಸ್ ನೀಡಲಾಗಿದೆ. ಕಾನೂನು ನಿಯಮವನ್ನು ಮೀರಿ ಈ ಭಾಗದಲ್ಲಿ ಕಟ್ಟಡಗಳನ್ನು ನಿರ್ಮಾಣ ಮಾಡಲಾಗುತ್ತಿದೆ ಎಂದು ಬಿಡಿಎ ಹೇಳಿದೆ ಎನ್ನಲಾಗಿದೆ.
ಕರ್ನಾಟಕ ಪಟ್ಟಣ ಯೋಜನಾ ಕಾಯ್ದೆ-1961 ರ ಅಡಿಯಲ್ಲಿ ನೀಡಲಾದ ಅಧಿಕಾರಗಳ ಪ್ರಕಾರ, ಬಿಡಿಎಯನ್ನು ಸ್ಥಳೀಯ ಯೋಜನಾ ಪ್ರಾಧಿಕಾರ ಎಂದು ಹೆಸರಿಸಲಾಗಿದೆ. ಅಲ್ಲದೇ ಯಾವುದೇ ಆಸ್ತಿ ಮಾಲೀಕರು ಕಟ್ಟಡ ನಕ್ಷೆ ವಿನ್ಯಾಸ ಅಥವಾ ಕಟ್ಟಡ ವಿನ್ಯಾಸ ಅಭಿವೃದ್ಧಿಪಡಿಸಲು ಇಲ್ಲವೇ ನಿರ್ಮಾಣವನ್ನು ಕೈಗೊಳ್ಳಲು ಬಿಡಿಎಯಿಂದ ಪೂರ್ವಾನುಮತಿ ಪಡೆಯುವುದು ಕಡ್ಡಾಯವಾಗಿದೆ ಎಂದು ಹೇಳಲಾಗಿದೆ. ಯಾವುದೇ ಉಲ್ಲಂಘನೆಯನ್ನು ಕಾನೂನುಬಾಹಿರವೆಂದು ಪರಿಗಣಿಸಲಾಗುವುದು ಹಾಗೂ ಕಾನೂನಿನ ಅನುಸಾರ ಕ್ರಮ ತೆಗೆದುಕೊಳ್ಳಲಾಗುವುದು ಎಂದು ನೋಟಿಸ್‌ನಲ್ಲಿ ಉಲ್ಲೇಖ ಮಾಡಲಾಗಿದೆ.
ಬೆಂಗಳೂರಿನಲ್ಲಿ ಇತ್ತೀಚಿನ ದಿನಗಳಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಹಾಗೂ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯು ಹಲವು ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳುತ್ತಿದೆ. ಇದರೊಂದಿಗೆ ಕಟ್ಟಡ ನಿರ್ಮಾಣ ಹಾಗೂ ಕಟ್ಟಡ ನಕ್ಷೆ ಮಂಜೂರಾತಿ ವಿಚಾರ ಸೇರಿದಂತೆ ಹಲವು ವಿಚಾರಗಳನ್ನು ಗಂಭೀರವಾಗಿ ಪರಿಗಣಿಸಿದ್ದು. ಈ ನಿಯಮಗಳನ್ನು ಉಲ್ಲಂಘನೆ ಮಾಡುವವರ ಮೇಲೆ ಕಠಿಣ ಕಾನೂನು ಕ್ರಮವನ್ನು ತೆಗೆದುಕೊಳ್ಳಲಾಗುತ್ತಿದೆ.












Click it and Unblock the Notifications