ಐಎಂಎ ಹಗರಣ: ಬಿಡಿಎ ಅಸಿಸ್ಟೆಂಟ್ ಎಂಜಿನಿಯರ್ ಬಂಧನ

ಬೆಂಗಳೂರು, ಜು.2: ವಿಶೇಷ ತನಿಖಾ ದಳ(ಎಸ್‌ಐಟಿ)ವು ಐಎಂಎ ಹಗರಣದಲ್ಲಿ ಭಾಗಿಯಾಗಿದ್ದ ಬಿಡಿಎ ಅಸಿಸ್ಟೆಂಟ್ ಎಂಜಿನಿಯರ್ ಒಬ್ಬರನ್ನು ಸೋಮವಾರ ಬಂಧಿಸಿದ್ದಾರೆ.

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಎಂಜಿನಿಯರ್‌ನ್ನು ವಶಕ್ಕೆ ಪಡೆದು ಅವರ ಬಳಿ ಐಎಂಎ ಹಗರಣಕ್ಕೆ ಸಂಬಂಧಿಸಿದ ಮಹತ್ವದ ದಾಖಲೆಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಐಎಂಎ ಜ್ಯುವೆಲರಿಯ ಮೂರು ಶಾಖೆಗಳಲ್ಲಿ ಪರಿಶೀಲನೆ ನಡೆಸಲಾಗುತ್ತಿದೆ. ಸುಮಾರು 70 ಲಕ್ಷ ಮೌಲ್ಯದ ಎಲೆಕ್ಟ್ರಾನಿಕ್ ಉಪಕರಣಗಳು ಹಾಗೂ 4.4 ನಗದು ವಶಪಡಿಸಿಕೊಳ್ಳಲಾಗಿದೆ.

BDA Engineer arrested in IMA scam

ಐಎಂಎಯು ಸಾವಿರಾರು ಮಂದಿ ಹೂಡಿಕೆದಾರರಿಗೆ ಮೋಸ ಮಾಡಿದೆ. ಹಣ ಹಿಂದಿರುಗಿಸುವುದಾಗಿ ಹೇಳಿ ಮೋಸ ಮಾಡಿದ್ದಾರೆ. ಅದರಲ್ಲಿ ಹೆಚ್ಚಿನ ಮಂದಿ ಮುಸಲ್ಮಾನರೇ ಇದ್ದಾರೆ.

ಐಎಂಎ ಸಂಸ್ಥಾಪಕ ಮನ್ಸೂರ್ ಖಾನ್ ಹಣವನ್ನೆಲ್ಲ ದೋಚಿಕೊಂಡು ದೇಶಬಿಟ್ಟು ಪರಾರಿಯಾಗಿದ್ದಾನೆ. ಬಳಿಕ ವಿಡಿಯೋ ಕ್ಲಿಪ್ ಒಂದನ್ನು ಬಿಡುಗಡೆ ಮಾಡಿದ್ದ. ಎಸ್‌ಐಟಿಯು ಈ ಮೊದಲು ಮಳಿಗೆಗಳ ಮೇಲೆ ದಾಳಿ ನಡೆಸಿ 20 ಕೋಟಿ ಮೌಲ್ಯದ ಚಿನ್ನಾಭರಣವನ್ನು ವಶಪಡಿಸಿಕೊಂಡಿದೆ.

ಆಡಿಟರ್ ಇಖ್ಬಾಲ್ ಖಾನ್‌ನ್ನು ಬಂಧಿಸಲಾಗಿದೆ. ಸುಮಾರು 25 ಸಾವಿರ ದೂರುಗಳು ಬಂದಿವೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+