ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬಿಡಿಎ ಆಸ್ತಿ ಒತ್ತುವರಿದಾರರ ವಿರುದ್ಧ ತೆರವು ಕಾರ್ಯಾಚರಣೆಗೆ ಚಾಲನೆ

|
Google Oneindia Kannada News

ಬೆಂಗಳೂರು, ಸೆ. 16: ಭೂ ಕಬಳಿಕೆದಾರರ ವಿರುದ್ಧ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಸಮರ ಸಾರಿದೆ. ಬಿಡಿಎ ಆಸ್ತಿಯನ್ನು ಒತ್ತುವರಿದಾರರ ವಿರುದ್ಧ ಗುರುವಾರ ಕಾರ್ಯಾಚರಣೆ ನಡೆಸಿದ ಬಿಡಿಎ ಅಧಿಕಾರಿಗಳು, ಬರೋಬ್ಬರಿ 40.57 ಕೋಟಿ ರೂಪಾಯಿ ಮೌಲ್ಯದ ತನ್ನ ಆಸ್ತಿಯನ್ನು ವಶಪಡಿಸಿಕೊಂಡಿದೆ.

ಉತ್ತರ ತಾಲೂಕಿನ ಯಶವಂತಪುರ ಹೋಬಳಿಯ ಉಲ್ಲಾಳು ಗ್ರಾಮದ ಸರ್ವೆ ಸಂಖ್ಯೆ 156/2 ರಲ್ಲಿನ 1 ಎಕರೆ 12 ಗುಂಟೆ ಮತ್ತು ಸರ್ವೆ ಸಂಖ್ಯೆ 156/3 ರಲ್ಲಿನ 1 ಎಕರೆ 28 ಗುಂಟೆ ಪ್ರದೇಶವನ್ನು ಬಿಡಿಎ ಬಡಾವಣೆ ನಿರ್ಮಾಣಕ್ಕೆಂದು ಸ್ವಾಧೀನ ಮಾಡಿಕೊಂಡಿತ್ತು. ಆದರೆ, ಈ ಬಗ್ಗೆ ಭೂಮಾಲೀಕರು ನ್ಯಾಯಾಲಯದಲ್ಲಿ ದೂರು ದಾಖಲಿಸಿದ್ದರು. ವಿಚಾರಣೆ ನಡೆಸಿದ್ದ ನ್ಯಾಯಾಲಯವು ಬಿಡಿಎ ಪರವಾಗಿ ತೀರ್ಪು ನೀಡಿತ್ತು. ಈ ಹಿನ್ನೆಲೆಯಲ್ಲಿ ಪೊಲೀಸ್ ವರಿಷ್ಠಾಧಿಕಾರಿ ಭಾಸ್ಕರ್ ಮತ್ತು ಕಾರ್ಯಕಾರಿ ಎಂಜಿನಿಯರ್ ಸುಷ್ಮಾ ನೇತೃತ್ವದಲ್ಲಿ ಬಿಡಿಎ ಅಧಿಕಾರಿಗಳು ಗುರುವಾರ ಸದರಿ ಜಾಗದಲ್ಲಿ ನಿರ್ಮಾಣವಾಗಿದ್ದ ತಾತ್ಕಾಲಿಕ ಶೆಡ್ ಗಳನ್ನು ತೆರವುಗೊಳಿಸಿ ಜಾಗವನ್ನು ಬಿಡಿಎ ವಶಕ್ಕೆ ಪಡೆದುಕೊಂಡರು. ಈ ಭೂಮಿಯ ಪ್ರಸ್ತುತ ಮಾರುಕಟ್ಟೆ ದರ 34.52 ಕೋಟಿ ರೂಪಾಯಿ ಎಂದು ಬಿಡಿಎ ಅಧಿಕಾರಿಗಳು ತಿಳಿಸಿದ್ದಾರೆ.

ಮತ್ತೊಂದು ಕಾರ್ಯಾಚರಣೆಯಲ್ಲಿ ಸರ್ ಎಂ.ವಿಶ್ವೇಶ್ವರಯ್ಯ ಬಡಾವಣೆಯ 6 ನೇ ಬ್ಲಾಕ್ ನಲ್ಲಿ ನಿವೇಶನ ರಚನೆಗಾಗಿ ಭೂ ಸ್ವಾಧೀನಪಡಿಸಿಕೊಳ್ಳಲಾಗಿತ್ತು. ಆದರೆ, ಉಲ್ಲಾಳು ಗ್ರಾಮದ ಸರ್ವೆ ಸಂಖ್ಯೆ 202 ರಲ್ಲಿ ಸ್ವಾಧೀನಪಡಿಸಿಕೊಳ್ಳಲಾಗಿದ್ದ 30x40 ಅಳತೆಯ 7 ನಿವೇಶನಗಳಲ್ಲಿ ಅಕ್ರಮವಾಗಿ ತಾತ್ಕಾಲಿಕ ಶೆಡ್ ಗಳನ್ನು ನಿರ್ಮಾಣ ಮಾಡಲಾಗಿತ್ತು. ನ್ಯಾಯಾಲಯದ ಆದೇಶದಂತೆ ಈ ಶೆಡ್ ಗಳನ್ನು ತೆರವುಗೊಳಿಸಿದ ಅಧಿಕಾರಿಗಳು ಸ್ವತ್ತನ್ನು ಬಿಡಿಎ ವಶಕ್ಕೆ ಪಡೆದುಕೊಂಡರು. ಈ ನಿವೇಶನಗಳ ಪ್ರಸ್ತುತ ಮಾರುಕಟ್ಟೆ ಮೌಲ್ಯ 6.05 ಕೋಟಿ ರೂಪಾಯಿ ಎಂದು ಅಂದಾಜಿಸಲಾಗಿದೆ.

BDA Launches Clearing Operations Against Property encroachment

ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಬಿಡಿಎ ಅಧ್ಯಕ್ಷ ಎಸ್.ಆರ್.ವಿಶ್ವನಾಥ್, ವಿವಿಧ ಬಡಾವಣೆಗಳಲ್ಲಿ ಬಿಡಿಎಗೆ ಅಪಾರ ಮೌಲ್ಯದ ಸೇರಿದ ಸ್ವತ್ತುಗಳು ಒತ್ತುವರಿಯಾಗಿವೆ. ಗಣೇಶ ಹಬ್ಬಕ್ಕೆ ಮುನ್ನ ಒತ್ತುವರಿ ತೆರವು ಕಾರ್ಯಾಚರಣೆಯನ್ನು ಆರಂಭಿಸಿದ್ದೇವೆ. ಈ ಕಾರ್ಯಾಚರಣೆ ನಿರಂತರವಾಗಿ ನಡೆಯಲಿದ್ದು, ಎಷ್ಟೇ ಪ್ರಭಾವಶಾಲಿಗಳಾಗಿದ್ದರೂ ಅವರ ವಶದಲ್ಲಿರುವ ಬಿಡಿಎ ಆಸ್ತಿಯನ್ನು ವಶಪಡಿಸಿಕೊಳ್ಳಲಾಗುತ್ತಿದೆ ಎಂದು ತಿಳಿಸಿದರು. ಈ ಕಾರ್ಯಾಚರಣೆಯಲ್ಲಿ ಡಿವೈಎಸ್ ಪಿ ಬಾಲಕೃಷ್ಣ, ಪೊಲೀಸ್ ಇನ್ಸ್ ಪೆಕ್ಟರ್ ಗಳಾದ ಶ್ರೀನಿವಾಸ್ ಮತ್ತು ಲಕ್ಷ್ಮಯ್ಯ, ಎಂಜಿನಿಯರ್ ಪ್ರಕಾಶ್ ಮತ್ತಿತರರು ಪಾಲ್ಗೊಂಡಿದ್ದರು.

BDA Launches Clearing Operations Against Property encroachment

ಬಿಡಿಎ ಒತ್ತುವರಿ ಕಾರ್ಯಾಚರಣೆ ಆರಂಭ: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಮೂಲೆ ನಿವೇಶನಗಳನ್ನು ಅಕ್ರಮವಾಗಿ ಪರಭಾರೆ ಮಾಡಿದ್ದ ಅಕ್ರಮ ಇತ್ತೀಚೆಗೆ ಬೆಳಕಿಗೆ ಬಂದಿತ್ತು. ಈ ಕುರಿತು ಹಿಂದಿನ ಬಿಡಿಎ ಆಯುಕ್ತ ಮಹದೇವ, ಪೊಲೀಸ್ ತನಿಖೆಗೆ ವಹಿಸಿದ್ದರು. ಶೇಷಾದ್ರಿಪುರಂ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದರು. ತನಿಖೆಯಲ್ಲಿ ಕೆಎಎಸ್ ದರ್ಜೆಯ ಅಧಿಕಾರಿಗಳು, ಇಂಜಿನಿಯರ್ ಗಳು ಬಂಧನಕ್ಕೆ ಒಳಗಾಗಿದ್ದರು. ಸುಮಾರು 40ಕ್ಕೂ ಹೆಚ್ಚು ಮಂದಿ ಬಂಧನದ ಭೀತಿಗೆ ಒಳಗಾಗಿ ತಲೆಮರೆಸಿಕೊಂಡಿದ್ದರು.

BDA Launches Clearing Operations Against Property encroachment

Recommended Video

ನಮ್ಮ ಹೆಮ್ಮೆಯ ಅಗ್ನಿ 5 ಬಗ್ಗೆ ತಿಳಿದುಕೊಳ್ಳಿ | Oneindia Kannada

ಬಿಡಿಎ ಅಕ್ರಮ ವಿಚಾರವಾಗಿ ಹಿಂದಿನ ಆಯುಕ್ತ ಮಹದೇವ ಮತ್ತು ಬಿಡಿಎ ಅಧ್ಯಕ್ಷ ವಿಶ್ವನಾಥ್ ನಡುವೆ ದೊಡ್ಡ ಕದನ ನಡೆದಿತ್ತು. ಮಹದೇವ ನಿವೃತ್ತಿ ಬಳಿಕ ನೂತನ ಆಯುಕ್ತರಾಗಿ ಐಎಎಸ್ ಅಧಿಕಾರಿ ರಾಜೇಶ್ ಗೌಡ ಆಗಮಿಸಿದ್ದು, ಇದೀಗ ಬಿಡಿಎ ಒತ್ತುವರಿದಾರರ ವಿರುದ್ಧ ಸಮರ ಸಾರಿದೆ. ಸಾವಿರಾರು ಕೋಟಿ ಮೌಲ್ಯದ ಬಿಡಿಎ ಆಸ್ತಿ ಒತ್ತುವರಿ ಮಾಡಿಕೊಂಡಿರುವುದು ಬೆಳಕಿಗೆ ಬಂದಿರುವ ಹಿನ್ನೆಲೆಯಲ್ಲಿ ಇದೀಗ ಒತ್ತುವರಿದಾರರ ವಿರುದ್ಧ ಸಮರ ಆರಂಭಿಸಿದೆ.

English summary
Bengaluru Development Authority Launches Clearing Operations Against Property encroachment know more
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X