ತುಮಕೂರು ರಸ್ತೆಯಿಂದ ಹೊಸೂರು ರಸ್ತೆವರೆಗೆ ಪೆರಿಫೆರಲ್ ರಿಂಗ್ ರಸ್ತೆ!
ಬೆಂಗಳೂರು, ಫೆಬ್ರವರಿ 07 : ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಿಂದ ಹೆಬ್ಬಾಳದಿಂದ ಸಿಲ್ಕ್ ಬೋರ್ಡ್ ವರೆಗೆ ಹೊರವರ್ತುಲ ರಸ್ತೆ ನಿರ್ಮಿಸಲಾಗಿದ್ದು, ಅಂತೆಯೇ ತುಮಕೂರು ರಸ್ತೆಯಿಂದ ಹೊಸೂರು ರಸ್ತೆವರೆಗೆ ಫೆರಿಪೆರಲ್ ರಿಂಗ್ ರಸ್ತೆಯನ್ನು ನಿರ್ಮಿಸಲು ಉದ್ದೇಶಿಸಲಾಗಿರುತ್ತದೆ ಎಂದು ಬೆಂಗಳೂರು ಅಭಿವೃದ್ಧಿ ಹಾಗೂ ನಗರ ಯೋಜನಾ ಸಚಿವರಾದ ಕೆ.ಜೆ. ಜಾರ್ಜ್ ಅವರು ತಿಳಿಸಿದರು.
ಶಾಸಕ ಸುಬ್ಬಾರೆಡ್ಡಿ ಎಸ್.ಎನ್. ಅವರ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಸಚಿವರು ಈಗಿರುವ ಪೆರಿಪೆರಲ್ ರಿಂಗ್ ರಸ್ತೆಯನ್ನು ತುಮಕೂರು ರಸ್ತೆಬಳಿ ಹಾಗೂ ಹೊಸೂರು ರಸ್ತೆ ಬಳಿ ನೈಸ್ ರಸ್ತೆಗೆ ಜೋಡಿಸಲು ಉದ್ದೇಶಿಸಲಾಗಿದ್ದು, ಈ ಯೋಜನೆಯನ್ನು ಸ್ಪೆಷಲ್ ಪರ್ಪಸ್ ವೆಹಿಕಲ್ ಮುಖಾಂತರ ಅನುಷ್ಠಾನಗೊಳಿಸಲು ಅಗತ್ಯವಿರುವ ಆರ್ಥಿಕ ಸಂಪನ್ಮೂಲ ಕ್ರೋಢಿಕರಿಸುವ ಪ್ರಕ್ರಿಯೆ ಚಾಲನೆಯಲ್ಲಿದೆ ಎಂದು ಅವರು ತಿಳಿಸಿದರು.

ರಾಜರಾಜೇಶ್ವರಿ ನಗರದ ವಿಧಾನಸಭಾ ಕ್ಷೇತ್ರದಲ್ಲಿ ಭೀಕರ ಮಳೆಯಿಂದಾಗಿ ಹಾನಿಗೊಳಗಾದ ಕುಟುಂಬಗಳಿಗೆ ರೂ 2 ಕೋಟಿ 30 ಲಕ್ಷ ರೂ. ಮೊತ್ತವನ್ನು ಪರಿಹಾರ ಧನವಾಗಿ ವಿತರಿಸಲಾಗಿರುತ್ತದೆ ಎಂದು ಶಾಸಕರ ಪ್ರಶ್ನೆಗೆ ಉತ್ತರಿಸಿದರು.












Click it and Unblock the Notifications