ಬೆಂಗಳೂರಿನ ಈ ಆಸ್ತಿದಾರರಿಗೆ ಬಿಡಿಎ ಶಾಕ್: 6.90 ಕೋಟಿ ಮೌಲ್ಯದ ಆಸ್ತಿ ವಶಕ್ಕೆ!
ಬೆಂಗಳೂರಿನಲ್ಲಿ ಆಸ್ತಿ ವಿಚಾರದಲ್ಲಿ ಲೋಪ ಎಸಗುತ್ತಿರುವವರಿಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಹಾಗೂ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಒಂದಾಗಿದೆ. ಬಿಬಿಎಂಪಿ ಹಾಗೂ ಬಿಡಿಎ ಎರಡರಿಂದಲೂ ಬೆಂಗಳೂರಿನಲ್ಲಿ ಅಕ್ರಮವಾಗಿ ಆಸ್ತಿ ಒತ್ತುವರಿ ಹಾಗೂ ಅಕ್ರಮವಾಗಿ ಕಟ್ಟಡ ನಿರ್ಮಾಣ ಮಾಡುವವರಿಗೆ ಬಿಸಿ ಮುಟ್ಟಿಸುವ ಕೆಲಸವನ್ನು ಮಾಡಲಾಗುತ್ತಿದೆ. ಬೆಂಗಳೂರಿನಲ್ಲಿ ಯಾವ ಆಸ್ತಿದಾರರಿಗೆ ಮುನ್ನೆಚ್ಚರಿಕೆ ಕೊಡಲಾಗಿದೆ. ಬಿಡಿಎ ಕಾರ್ಯಾಚರಣೆ ಏನು ಎನ್ನುವ ಸಂಪೂರ್ಣ ವಿವರ ಇಲ್ಲಿದೆ.
ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯಲ್ಲಿ ಒತ್ತುವರಿಯಾಗಿರುವ 6.90ಕೋಟಿ ರೂಪಾಯಿ ಅಂದಾಜು ಮೌಲ್ಯದ ಒಟ್ಟು ಎಕರೆ 3 ಎಕರೆ 0.05 ಗುಂಟೆ ಸರ್ಕಾರಿ ಜಮೀನನ್ನು ಬೆಂಗಳೂರು ನಗರ ಜಿಲ್ಲಾಧಿಕಾರಿಗಳಾದ ಜಿ.ಜಗದೀಶ ಅವರ ನೇತೃತ್ವದಲ್ಲಿ ತೆರವುಗೊಳಿಸಿ ಸರ್ಕಾರದ ವಶಕ್ಕೆ ಪಡೆಯಲಾಗಿದೆ. ಬೆಂಗಳೂರು ನಗರ ಜಿಲ್ಲೆಯಾದ್ಯಂತ ವಿವಿಧ ತಾಲ್ಲೂಕುಗಳ ತಹಶೀಲ್ದಾರ್‌ಗಳು ತಮ್ಮ ವ್ಯಾಪ್ತಿಯಲ್ಲಿ ಅಕ್ರಮವಾಗಿ ಒತ್ತುವರಿಯಾಗಿದ್ದ ಸರ್ಕಾರಿ ತೋಪು, ಖರಾಬು ಕಲ್ಲುಬೆಟ್ಟ, ಸರ್ಕಾರಿ ಕೆರೆ, ಜಾಗಗಳಿಗೆ ಭೇಟಿ ನೀಡಿ ತೆರವು ಕಾರ್ಯಾಚರಣೆ ಕೈಗೊಂಡಿದ್ದಾರೆ.

ಆನೇಕಲ್ ತಾಲ್ಲೂಕಿನ ಕಸಬಾ: ಹೋಬಳಿಯ ಚಿಕ್ಕನಹಳ್ಳಿ ಗ್ರಾಮದ ಸ.ನಂ. 11 ರ ಸರ್ಕಾರಿ ತೋಪು ಒಟ್ಟು ಒತ್ತುವರಿ ತೆರವುಗೊಳಿಸಿರುವ ವಿಸ್ತೀರ್ಣ 0.23 ಗುಂಟೆಗಳಾಗಿದ್ದು, ಅಂದಾಜು ಮೌಲ್ಯ 0.25 ಲಕ್ಷಗಳಾಗಿದೆ.
ಬೆಂಗಳೂರು ಉತ್ತರ ತಾಲ್ಲೂಕಿನ ದಾಸನಪುರ ಹೋಬಳಿಯ ಗೊಲ್ಲರಪಾಳ್ಯ ಗ್ರಾಮದ ಸ.ನಂ 28 ರ ಖರಾಬು ಕಲ್ಲುಬೆಟ್ಟ ಒಟ್ಟು ಒತ್ತುವರಿ ತೆರವುಗೊಳಿಸಿರುವ ವಿಸ್ತೀರ್ಣ 0.20 ಗುಂಟೆಗಳಾಗಿದ್ದು, ಅಂದಾಜು ಮೌಲ್ಯ 0.50 ಲಕ್ಷಗಳಾಗಿರುತ್ತದೆ.
ಇನ್ನು ಹಂತಿಮವಾಗಿ ಯಲಹಂಕ ತಾಲ್ಲೂಕಿನ ಹೆಸರಘಟ್ಟ ಹೋಬಳಿಯ ಕಾಕೋಳು ಗ್ರಾಮದ ಸ.ನಂ 44ರ ಸರ್ಕಾರಿ ಕೆರೆ ಒಟ್ಟು ಒತ್ತುವರಿ ತೆರವುಗೊಳಿಸಿರುವ ವಿಸ್ತೀರ್ಣ 2 ಎಕರೆ 0.02 ಗುಂಟೆಗಳಾಗಿದ್ದು, ಅಂದಾಜು ಮೌಲ್ಯ 6.15 ಕೋಟಿಗಳಾಗಿರುತ್ತದೆ. ಇದೇ ಸಂದರ್ಭದಲ್ಲಿ ವಿವಿಧ ತಾಲ್ಲೂಕಿನ ತಹಶೀಲ್ದಾರ್ ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಅನಧಿಕೃತ ಕಟ್ಟಡಗಳ ತೆರವು: ಇನ್ನು ಬೆಂಗಳೂರಿನಲ್ಲಿ ಅನಧಿಕೃತವಾಗಿ ನಿರ್ಮಾಣವಾಗಿರುವ ಕಟ್ಟಡಗಳ ತೆರವಿಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮುಂದಾಗಿದೆ. ಈಗಾಗಲೇ ಬೆಂಗಳೂರಿನ ವಿವಿಧ ವಲಯಗಳಲ್ಲಿ ಅನಧಿಕೃತ ಕಟ್ಟಡ ನಿರ್ಮಾಣ ಮಾಡಿರುವವರಿಗೆ ಹಾಗೂ ಕಟ್ಟಡ ನಕ್ಷೆ ಮಂಜೂರಾತಿ ಇಲ್ಲದೆ ಕಟ್ಟಡ ನಿರ್ಮಾಣ ಮಾಡಿರುವ ಕಟ್ಟಡಗಳನ್ನು ತೆರವು ಮಾಡಲಾಗುತ್ತಿದೆ.
ಈಗಾಗಲೇ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯು ಬೆಂಗಳೂರಿನ ವಿವಿಧ ಭಾಗದಲ್ಲಿ ಅನಧಿಕೃತ ಕಟ್ಟಡ ನಿರ್ಮಾಣದ ಮೇಲೆ ಕಣ್ಣಿರಿಸಿದ್ದು ತೆರವು ಕಾರ್ಯಾಚರಣೆಯನ್ನು ಮುಂದುವರಿಸಿದೆ. ಅಲ್ಲದೇ ಕಟ್ಟಡ ನಕ್ಷೆ ಮಂಜೂರಾತಿ ಲೋಪ ಹಾಗೂ ಕಟ್ಟಡ ನಕ್ಷೆ ಮಂಜೂರಾತಿಯಲ್ಲಿ ಲೋಪವೆಸಗಿರುವ ಕಟ್ಟಡಗಳ ತೆರವು ಕಾರ್ಯಾಚರಣೆ ನಡೆಸಲಾಗುತ್ತಿದೆ.












Click it and Unblock the Notifications