ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಡ್ ಬ್ಲಾಕಿಂಗ್ ಕೇಸ್; ಖಾಸಗಿ ಆಸ್ಪತ್ರೆ ಉದ್ಯೋಗಿಗಳ ಬಂಧನ

|
Google Oneindia Kannada News

ಬೆಂಗಳೂರು, ಮೇ 10; ಬೆಂಗಳೂರು ನಗರದಲ್ಲಿ ಕೋವಿಡ್ ವಾರ್‌ ರೂಂನಲ್ಲಿ ನಡೆದ ಬೆಡ್ ಬ್ಲಾಕಿಂಗ್ ಬಗ್ಗೆ ಸಿಸಿಬಿ ಪೊಲೀಸರು ತನಿಖೆಯನ್ನು ಮುಂದುವರೆಸಿದ್ದಾರೆ. ಸೋಮವಾರ ಮೂವರನ್ನು ಬಂಧಿಸಲಾಗಿದ್ದು, ಇದುವರೆಗೂ ಬಂಧಿತರಾದವರ ಸಂಖ್ಯೆ 7.

ಸಿಸಿಬಿ ಜಂಟಿ ಆಯುಕ್ತ ಸಂದೀಪ್ ಪಾಟೀಲ್ ಈ ಕುರಿತು ಮಾಹಿತಿ ನೀಡಿದ್ದಾರೆ. ಸೋಮವಾರ ಶಶಿಧರ್, ವೆಂಕೋಬ ರಾವ್, ಸುಧೀರ್ ಉಮಾರಾಣಿ ಎಂಬುವವರನ್ನು ಬಂಧಿಸಲಾಗಿದೆ. ಶಶಿಧರ್ ಆರೋಗ್ಯ ಮಿತ್ರರಾಗಿ ಕೆಲಸ ಮಾಡುತ್ತಿದ್ದರು.

ಬೆಡ್ ಬ್ಲಾಕಿಂಗ್ ದಂಧೆ ಗೊಂದಲ, ಆರೋಪದ ಬಗ್ಗೆ ತೇಜಸ್ವಿ ಸೂರ್ಯ ಸ್ಪಷ್ಟನೆ ಬೆಡ್ ಬ್ಲಾಕಿಂಗ್ ದಂಧೆ ಗೊಂದಲ, ಆರೋಪದ ಬಗ್ಗೆ ತೇಜಸ್ವಿ ಸೂರ್ಯ ಸ್ಪಷ್ಟನೆ

ಬಂಧಿತ ಮತ್ತಿಬ್ಬರು ಆರೋಪಿಗಳು ಆರ್. ಆರ್. ನಗರದ ಸ್ಪರ್ಶ ಆಸ್ಪತ್ರೆ ಮತ್ತು ಬಸವೇಶ್ವರ ನಗರದ ಪುಣ್ಯ ಆಸ್ಪತ್ರೆಯ ಸಿಬ್ಬಂದಿಗಳಾಗಿದ್ದಾರೆ. ಈ ಮೂವರು ಸಹ ರಿಯಲ್ ಟೈಂ ಡೇಟಾ ಎಂಟ್ರಿಗಳನ್ನು ಬ್ಲಾಕ್ ಮಾಡುತ್ತಿದ್ದರು ಎಂದು ಪೊಲೀಸರು ಹೇಳಿದ್ದಾರೆ.

ವಾರ್ ರೂಂನಲ್ಲಿ ಬೆಡ್ ಬ್ಲಾಕ್; ಬಿಬಿಎಂಪಿಗೆ ವರದಿ ಸಲ್ಲಿಕೆ ವಾರ್ ರೂಂನಲ್ಲಿ ಬೆಡ್ ಬ್ಲಾಕ್; ಬಿಬಿಎಂಪಿಗೆ ವರದಿ ಸಲ್ಲಿಕೆ

Bed Blocking Case CCB Arrested 3 Accused

ಕೋವಿಡ್‌ ಚಿಕಿತ್ಸೆ ಪಡೆಯುತ್ತಿರುವ ರೋಗಿ ಗುಣಮುಖಗೊಂಡು ಡಿಸ್ಚಾರ್ಜ್ ಆದರೂ ಅಥವ ಸಾವನ್ನಪ್ಪಿದರೂ ಆತನ ಬಗ್ಗೆ ಬಿಬಿಎಂಪಿಗೆ ಮಾಹಿತಿಯನ್ನೇ ನೀಡುತ್ತಿರಲಿಲ್ಲ. ಇದರಿಂದಾಗಿ ರೋಗಿ ಇನ್ನೂ ಚಿಕಿತ್ಸೆ ಪಡೆಯುತ್ತಿದ್ದಾನೆ ಎಂದು ಬಿಬಿಎಂಪಿ ಮಾಹಿತಿ ತೋರಿಸುತ್ತಿತ್ತು.

ಬೆಡ್ ಬ್ಲಾಕಿಂಗ್ ದಂಧೆ: ಶಾಸಕ ಸತೀಶ್ ರೆಡ್ಡಿ ಬಂಧಿಸಿ ವಿಚಾರಣೆ ನಡೆಸಿ ಬೆಡ್ ಬ್ಲಾಕಿಂಗ್ ದಂಧೆ: ಶಾಸಕ ಸತೀಶ್ ರೆಡ್ಡಿ ಬಂಧಿಸಿ ವಿಚಾರಣೆ ನಡೆಸಿ

ಡೇಟಾ ಅಪ್‌ಡೇಟ್ ಮಾಡದಿದ್ದರಿಂದ ಅಗತ್ಯವಾಗಿ ಬೆಡ್ ಬೇಕಾದ ರೋಗಿಗೆ ಬೆಡ್ ಸಿಗುತ್ತಿರಲಿಲ್ಲ. ಬೆಡ್ ಬ್ಲಾಕಿಂಗ್ ದಂಧೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೂ 7 ಜನರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

Recommended Video

ಮತ್ತೆ ತೇಜಸ್ವಿ ಸೂರ್ಯರನ್ನು ಅಪಾಯಕಾರಿ ವೈರಸ್ ಎಂದು ಕಾಮೆಂಟ್ ಮಾಡಿದ ಸಿದ್ದಾರ್ಥ್ | Oneindia Kannada

ಇದುವರೆಗೂ ರೋಹಿತ್ ಕುಮಾರ್, ನೇತ್ರಾವತಿ, ರಿಹಾನ್, ಶಶಿ ಕುಮಾರ್ ಎಂಬ ಆರೋಪಿಗಳನ್ನು ಬಂಧಿಸಲಾಗಿದೆ. ಬೆಡ್ ಬ್ಲಾಕಿಂಗ್ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದ ಕರ್ನಾಟಕ ಸರ್ಕಾರ ತನಿಖೆಯನ್ನು ಸಿಸಿಬಿಗೆ ವಹಿಸಿತ್ತು.

English summary
CCB police arrested 3 more in the case of bed blocking case in BBMP war room. Till 7 accused arrested in connection with the case.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X