ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಡ್ ಬ್ಲಾಕಿಂಗ್ ದಂಧೆ: ಶಾಸಕ ಸತೀಶ್ ರೆಡ್ಡಿ ಬಂಧಿಸಿ ವಿಚಾರಣೆ ನಡೆಸಿ

|
Google Oneindia Kannada News

ಬೆಂಗಳೂರು, ಮೇ 6: ಎರಡು ದಿವಸಗಳ ಹಿಂದೆ ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಅವರು ನಗರದಲ್ಲಿ ಅವ್ಯಾಹತವಾಗಿ ನಡೆಯುತ್ತಿದ್ದ ಕೊರೋನಾ ರೋಗಿಗಳ ಬೆಡ್ ಬ್ಲಾಕಿಂಗ್ ಅಕ್ರಮ ದಂಧೆಯನ್ನು ಬಯಲಿಗೆಳೆದಿದ್ದೇನೆಂದು ಪರಾಕ್ರಮ ಮೆರೆದಿದ್ದರು. ಆದರೆ ಈ ಅಕ್ರಮ ದಂಧೆಯಲ್ಲಿ ನೇರವಾಗಿ ಪಾಲ್ಗೊಂಡಿದ್ದ ಬೊಮ್ಮನಹಳ್ಳಿ ಬಿ ಜೆ ಪಿ ಶಾಸಕ ಸತೀಶ್ ರೆಡ್ಡಿರನ್ನೇ ಜತೆಯಲ್ಲಿಟ್ಟುಕೊಂಡು ಇಂಥ ಈ ದಂಧೆಯಲ್ಲಿ ಪಾಲ್ಗೊಂಡಿರುವ ಕೊಲೆಪಾತಕರನ್ನು ಬಂಧಿಸಬೇಕೆಂದು ಒತ್ತಾಯಿಸಿದ್ದರು.

ಆದರೆ ಇಂದು ಮಾಧ್ಯಮಗಳಲ್ಲಿ ಶಾಸಕ ಸತೀಶ್ ರೆಡ್ಡಿ ನೇರ ಪಾತ್ರವಿರುವುದು ಬಯಲಾಗಿದೆ. ಈ ಬಗ್ಗೆ ಸಂಸದರು ಜನತೆಗೆ ಏನೆಂದು ಉತ್ತರ ಹೇಳುತ್ತಾರೆ ? ಶಾಸಕ ಸತೀಶ್ ರೆಡ್ಡಿ ಹಾಗೂ ಇನ್ನಿತರ ಕೊಲೆ ಪಾತಕಿಗಳನ್ನು ಪೊಲೀಸ್ ಇಲಾಖೆ ಈ ಕೂಡಲೇ ಬಂಧಿಸಿ ತೀವ್ರ ವಿಚಾರಣೆಗೊಳಪಡಿಸಬೇಕು ಎಂದು ಆಮ್ ಆದ್ಮಿ ಪಕ್ಷದ ನಗರ ಉಪಾಧ್ಯಕ್ಷ ಬಿ. ಟಿ. ನಾಗಣ್ಣ ಇಂದು ಪತ್ರಿಕಾಗೋಷ್ಠಿಯಲ್ಲಿ ಆಗ್ರಹಿಸಿದರು .

ಪೋಸ್ ನೀಡುವ ಸಂಸದರೇ, ಮೊದಲು ಕೇಂದ್ರದಿಂದ ಆಕ್ಸಿಜನ್ ತರಿಸಿಪೋಸ್ ನೀಡುವ ಸಂಸದರೇ, ಮೊದಲು ಕೇಂದ್ರದಿಂದ ಆಕ್ಸಿಜನ್ ತರಿಸಿ

ಬೆಂಗಳೂರಿನ ಎಲ್ಲಾ ವಲಯಗಳ ಸಹಾಯವಾಣಿ ಕೇಂದ್ರಗಳಲ್ಲಿ ಬಿಜೆಪಿಯ ಪ್ರಮುಖ ಮಂತ್ರಿಗಳು ಹಾಗೂ ಶಾಸಕರುಗಳ ನೇರ ಕೈವಾಡವಿದ್ದು ಎಲ್ಲರೂ ಬೆಡ್ ಬ್ಲಾಕಿಂಗ್ ದಂಧೆಯಲ್ಲಿ ಪಾಲ್ಗೊಂಡು ಇದುವರೆವಿಗೂ ಬೆಡ್ ಸಿಗದೆ ಆಗಿರುವ ಸಾವಿರಾರು ಅಮಾಯಕ ರೋಗಿಗಳ ಸಾವಿಗೆ ನೇರ ಹೊಣೆಗಾರರಾಗಿದ್ದಾರೆಂದು ನಾಗಣ್ಣ ಆರೋಪಿಸಿದರು.

Bed blocking Scam: AAP demand CCB to arrest MLA Satish Reddy

ಇಂತಹ ದೊಡ್ಡ ದುಷ್ಕೃತ್ಯಗಳಲ್ಲಿ ಪ್ರಭಾವಿಗಳ ಪಾತ್ರ ಇದ್ದೇ ಇರುತ್ತದೆ ಎಂಬುದು ಮೊದಲಿನಿಂದಲೂ ಆಮ್ ಆದ್ಮಿ ಪಕ್ಷದ ಸ್ಪಷ್ಟ ಅಭಿಪ್ರಾಯವಾಗಿತ್ತು . ಪ್ರಭಾವಿಗಳನ್ನು ರಕ್ಷಿಸಲು ಹೋಗಿ ಸಂಸದರು ಸಣ್ಣ ಸಣ್ಣ ಅಧಿಕಾರಿಗಳನ್ನು ಹಾಗೂ ಗುತ್ತಿಗೆ ನೌಕರರನ್ನು ಬಂಧಿಸಿ ಪ್ರಕರಣವನ್ನು ದಿಕ್ಕು ತಪ್ಪಿಸುವ ಹುನ್ನಾರ ಕೈಗೊಂಡಿದ್ದರು. ಆದರೆ ಈಗ ಪ್ರಭಾವಿಗಳ ಬಣ್ಣ ಬಟಾಬಯಲಾಗಿದೆ.

ಬೆಂಗಳೂರಿನಲ್ಲಿ ಬೆಡ್ ಕೊರತೆ ನೀಗಿಸಲು ತಜ್ಞರು ನೀಡಿದ ಸಲಹೆ ಏನು?ಬೆಂಗಳೂರಿನಲ್ಲಿ ಬೆಡ್ ಕೊರತೆ ನೀಗಿಸಲು ತಜ್ಞರು ನೀಡಿದ ಸಲಹೆ ಏನು?

Recommended Video

ಬಿಬಿಎಂಪಿ ಪೋರ್ಟಲ್ ಮೂಲಕ ಬೆಡ್ ಬ್ಲಾಕಿಂಗ್ ಕೇಸ್ ಸಿಸಿಬಿಗೆ ವರ್ಗಾಯಿಸಿದ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ | Oneindia Kannada

ಈ ಸಂಬಂಧ ಶಾಸಕ ಸತೀಶ್ ರೆಡ್ಡಿ ವಿರುದ್ಧ ಈಗಾಗಲೇ ಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ಆಮ್ ಆದ್ಮಿ ಪಕ್ಷದಿಂದ ದೂರನ್ನು ಸಹ ಸಲ್ಲಿಸಲಾಗಿದೆ. ಕೂಡಲೇ ಸರ್ಕಾರವು ಪ್ರಕರಣದ ತನಿಖೆಯ ಹಾದಿಯನ್ನು ತಪ್ಪಿಸದೆ ತನ್ನದೇ ಪಕ್ಷದ ಪ್ರಭಾವಿಗಳು ಶಾಸಕರುಗಳು ಹಾಗೂ ಮಂತ್ರಿಗಳ ವಿರುದ್ಧ ತನಿಖೆ ಕೈಗೊಳ್ಳಲು ಹಾಲಿ ಉಚ್ಚನ್ಯಾಯಾಲಯದ ನ್ಯಾಯಾಧೀಶರ ಮೇಲುಸ್ತುವಾರಿಯಲ್ಲಿ ಉನ್ನತ ಮಟ್ಟದ ನ್ಯಾಯಾಂಗ ತನಿಖೆಗೆ ಒಪ್ಪಿಸಬೇಕೆಂದು ನಾಗಣ್ಣ ಪತ್ರಿಕಾಗೋಷ್ಠಿಯಲ್ಲಿ ಸರ್ಕಾರವನ್ನು ಆಗ್ರಹಿಸಿದರು. ಪತ್ರಿಕಾಗೋಷ್ಠಿಯಲ್ಲಿ ಪಕ್ಷದ ಮಹಿಳಾ ಮುಖಂಡರಾದ ಉಷಾ ಮೋಹನ್ ರವರು ಭಾಗವಹಿಸಿದ್ದರು.

English summary
Bed blocking Scam: AAP karnataka has demanded CCB police to arrest MLA Satish Reddy and carry out investigation.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X