ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬಿಬಿಎಂಪಿ ಬೆಡ್ ಬ್ಲಾಕಿಂಗ್ ಹಗರಣ ಸಿಸಿಬಿ ತನಿಖೆಗೆ: ಕಮಲ್ ಪಂತ್

|
Google Oneindia Kannada News

ಬೆಂಗಳೂರು, ಮೇ 4: ಬೃಹತ್ ಬೆಂಗಳೂರು ನಗರ ಪಾಲಿಕೆ ವ್ಯಾಪ್ತಿಯಲ್ಲಿ ಕೊರೊನಾ ಸೋಂಕಿತರಿಗೆ ಆಸ್ಪತ್ರೆಗೆ ದಾಖಲಾಗಲು ಬೆಡ್ ಸಿಗದೆ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಇದರ ಹಿಂದೆ ಭಾರಿ ಅವ್ಯವಹಾರ ನಡೆದಿದೆ ಎಂದು ಸಂಸದ ತೇಜಸ್ವಿ ಸೂರ್ಯ ಹಾಗೂ ತಂಡ ಇಂದು ಅಕ್ರಮ ಬಯಲಿಗೆಳೆದಿದ್ದರು. ಈ ಪ್ರಕರಣದ ಬಗ್ಗೆ ಸಮಗ್ರ ತನಿಖೆಗೂ ಆಗ್ರಹಿಸಿದ್ದರು. ಈಗ ಈ ಬಗ್ಗೆ ಸಿಸಿಬಿ ತನಿಖೆ ನಡೆಸಲಿದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಟ್ವೀಟ್ ಮಾಡಿದ್ದಾರೆ.

ಬಿಬಿಎಂಪಿ ವಾರ್ ರೂಮ್ ಉಸ್ತುವಾರಿಯನ್ನು ಮುಖ್ಯಮಂತ್ರಿ ಯಡಿಯೂರಪ್ಪ ಅವರು ಇತ್ತೀಚೆಗೆ ಬದಲಾಯಿಸಿ ಅರವಿಂದ ಲಿಂಬಾವಳಿಗೆ ಹೊಣೆ ನೀಡಲಾಗಿತ್ತು. ಆದರೆ, ಈ ವಾರ್ ರೂಮ್ ಕಾರ್ಯ ನಿರ್ವಹಣೆ ಬಗ್ಗೆ ಅಪಸ್ವರ ಕೇಳಿ ಬಂದ ಹಿನ್ನೆಲೆಯಲ್ಲಿ ಇಂದು ಸಂಸದ ತೇಜಸ್ವಿ ಸೂರ್ಯ, ಶಾಸಕ ಸತೀಶ್ ರೆಡ್ಡಿ, ರವಿ ಸುಬ್ರಹ್ಮಣ್ಯ, ಉದಯ್ ಗರುಡಾಚಾರ್ ಅವರು ಭೇಟಿ ನೀಡಿದ್ದರು. ಈ ಸಂದರ್ಭದಲ್ಲಿ ಬೆಡ್ ಬ್ಲಾಕಿಂಗ್ ಪ್ರಕ್ರಿಯೆಯಲ್ಲಿ ಅವ್ಯವಹಾರ ನಡೆದಿರುವುವುದನ್ನು ತೇಜಸ್ವಿ ಸೂರ್ಯ ಬಯಲಿಗೆಳೆದಿದ್ದರು.

ಬೆಡ್ ಹಗರಣ ಬಯಲಿಗೆಳೆದ ತೇಜಸ್ವಿಗೆ ಕಂಗ್ರಾಟ್ಸ್ ಎಂದ ಡಿಕೆ ಶಿವಕುಮಾರ್ ಬೆಡ್ ಹಗರಣ ಬಯಲಿಗೆಳೆದ ತೇಜಸ್ವಿಗೆ ಕಂಗ್ರಾಟ್ಸ್ ಎಂದ ಡಿಕೆ ಶಿವಕುಮಾರ್

ಈ ಬಗ್ಗೆ ಪ್ರತಿಕ್ರಿಯಿಸಿ ಟ್ವೀಟ್ ಮಾಡಿರುವ ಕಮಲ್ ಪಂತ್, ಬಿಬಿಎಂಪಿ ಪೋರ್ಟಲ್ ಮೂಲಕ ಕೋವಿಡ್ ಸೋಂಕಿತರ ಚಿಕಿತ್ಸೆಗಾಗಿ ಆಸ್ಪತ್ರೆಯಲ್ಲಿ ಬೆಡ್ ಕಾಯ್ದಿರಿಸುವ ವಿಧಾನದಲ್ಲಿ ಅಕ್ರಮ ಎಸಗಿದವರ ವಿರುದ್ಧ ಜಯನಗರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಿಸಲಾಗಿದೆ. ಈ ಪ್ರಕರಣದಲ್ಲಿ ಇಬ್ಬರನ್ನು ಬಂಧಿಸಲಾಗಿದ್ದು, ಅಕ್ರಮದಲ್ಲಿ ಭಾಗಿಯಾದವರ ಹೆಚ್ಚಿನ ತನಿಖೆಗಾಗಿ ಪ್ರಕರಣವನ್ನು ಕೇಂದ್ರ ಅಪರಾಧ ಶಾಖೆ (ಸಿಸಿಬಿ) ಗೆ ವರ್ಗಾಯಿಸಲಾಗಿದೆ ಎಂದಿದ್ದಾರೆ.

Bed blocking scam case transferred to CCB for investigation

Recommended Video

ಆಸ್ಪತ್ರೆಯಲ್ಲಿ ನಡೆಯುತ್ತಿರುವ ದಂಧೆಯ ವಿರುದ್ಧ ಸಿಡಿದೆದ್ದ ತೇಜಸ್ವಿ ಸೂರ್ಯ | Oneindia Kannada

ಜಯನಗರದಲ್ಲಿ ದಾಖಲಾಗಿರುವ ಪ್ರಕರಣದ ಸಂಖ್ಯೆ(87/21 )ಯನ್ನು ನೀಡಿದ್ದು, ವಂಚನೆ, ಮೋದ ಎಸಗಿದವರ ವಿರುದ್ಧ ಕಾನೂನು ಪ್ರಕಾರ ಕ್ರಮ ಜರುಗಿಸಲಾಗುತ್ತಿದೆ. ಈ ಬಗ್ಗೆ ಸಮಗ್ರ ತನಿಖೆಯನ್ನು ಸಿಸಿಬಿ ತಂಡ ನಡೆಸಲಿದೆ ಎಂದಿದ್ದಾರೆ.

English summary
Bed blocking scam case transferred to CCB for investigation sadi Bengaluru police commissioner Kamal Pant.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X