ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಡ್ ಬ್ಲಾಕಿಂಗ್; ತೇಜಸ್ವಿಸೂರ್ಯಗೆ ಸಿದ್ದರಾಮಯ್ಯ ಪ್ರಶ್ನೆಗಳು!

|
Google Oneindia Kannada News

ಬೆಂಗಳೂರು, ಮೇ 05; "ತಿನ್ನುವ ಅನ್ನದಿಂದ ಹಿಡಿದು ಮನುಷ್ಯನ ಪ್ರಾಣದವರೆಗೆ ಎಲ್ಲದರಲ್ಲಿಯೂ ಜಾತಿ-ಧರ್ಮವನ್ನು ಎಳೆದು ತರುವ ನಿಮ್ಮ ಕೊಳಕು ಬುದ್ಧಿಯನ್ನು ಕೊರೊನಾ ರೋಗಕ್ಕೂ ಯಾಕೆ ಎಳೆದು ತರ್ತೀರಿ ತೇಜಸ್ವಿ ಸೂರ್ಯ?" ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದಾರೆ.

Recommended Video

ಬೆಡ್ ಬ್ಲಾಕಿಂಗ್ ದಂಧೆ.. ತೇಜಸ್ವಿ ಸೂರ್ಯಗೆ ಪಾಠ ಹೇಳಿದ ಸಿದ್ದರಾಮಯ್ಯ | Oneindia Kannada

ಬೆಂಗಳೂರು ನಗರದಲ್ಲಿ ನಡೆಯುತ್ತಿದ್ದ ಬೆಡ್ ಬ್ಲಾಕಿಂಗ್ ದಂಧೆಯನ್ನು ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಮಂಗಳವಾರ ಬಹಿರಂಗಪಡಿಸಿದ್ದರು. ಹೋಂ ಐಸೋಲೇಷನ್‌ನಲ್ಲಿರುವ ವ್ಯಕ್ತಿಗಳ ಹೆಸರಿನಲ್ಲಿ ಹೇಗೆ ಬೆಡ್ ಬುಕ್ ಆಗುತ್ತದೆ ಎಂಬ ಸತ್ಯ ತೆರೆದಿಟ್ಟಿದ್ದರು.

ಬಿಬಿಎಂಪಿ ಬೆಡ್ ಬ್ಲಾಕಿಂಗ್ ಹಗರಣ ಸಿಸಿಬಿ ತನಿಖೆಗೆ: ಕಮಲ್ ಪಂತ್ ಬಿಬಿಎಂಪಿ ಬೆಡ್ ಬ್ಲಾಕಿಂಗ್ ಹಗರಣ ಸಿಸಿಬಿ ತನಿಖೆಗೆ: ಕಮಲ್ ಪಂತ್

ಕರ್ನಾಟಕ ಸರ್ಕಾರ ಬೆಡ್ ಬ್ಲಾಕಿಂಗ್ ಆರೋಪವನ್ನು ಗಂಭೀರವಾಗಿ ಪರಿಗಣಿಸಿತ್ತು. ಈ ಕುರಿತು ಸಿಸಿಬಿ ತನಿಖೆಗೆ ಆದೇಶವನ್ನು ನೀಡಲಾಗಿದೆ. ಈಗಾಗಲೇ ಸಿಸಿಬಿ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ಬೆಡ್ ಹಗರಣ ಬಯಲಿಗೆಳೆದ ತೇಜಸ್ವಿಗೆ ಕಂಗ್ರಾಟ್ಸ್ ಎಂದ ಡಿಕೆ ಶಿವಕುಮಾರ್ ಬೆಡ್ ಹಗರಣ ಬಯಲಿಗೆಳೆದ ತೇಜಸ್ವಿಗೆ ಕಂಗ್ರಾಟ್ಸ್ ಎಂದ ಡಿಕೆ ಶಿವಕುಮಾರ್

ತೇಜಸ್ವಿ ಸೂರ್ಯ ಕಾರ್ಯದ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆ ನಡೆಯುತ್ತಿದೆ. ಹಲವಾರು ಜನರು ಸಂಸದರ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಈ ಕುರಿತು ಬುಧವಾರ ಸರಣಿ ಟ್ವೀಟ್ ಮಾಡಿದ್ದಾರೆ.

ಬೆಡ್ ಬ್ಲಾಕಿಂಗ್ ಅವ್ಯವಹಾರ ಬಯಲಿಗೆಳೆದ ಸಂಸದ ತೇಜಸ್ವಿ ಸೂರ್ಯ ಬೆಡ್ ಬ್ಲಾಕಿಂಗ್ ಅವ್ಯವಹಾರ ಬಯಲಿಗೆಳೆದ ಸಂಸದ ತೇಜಸ್ವಿ ಸೂರ್ಯ

ಅದನ್ನೂ ಓದಿ ಹೇಳಿಬಿಡಿ

ಅದನ್ನೂ ಓದಿ ಹೇಳಿಬಿಡಿ

ಸಿದ್ದರಾಮಯ್ಯ ಅವರು "ಬೆಡ್ ಬ್ಲಾಕಿಂಗ್ ದಂಧೆಯಲ್ಲಿ ಷಾಮೀಲಾಗಿರುವವರು ಒಂದೇ ಕೋಮಿನವರು ಎನ್ನುವ ರೀತಿಯಲ್ಲಿ ಆರೋಪಿಗಳ ಪಟ್ಟಿ ಓದಿದ ತೇಜಸ್ವಿ ಸೂರ್ಯ ಅವರೇ, ಮುಖ್ಯ ಆರೋಪಿಗಳಾದ ಮುಖ್ಯಮಂತ್ರಿಗಳಿಂದ ಹಿಡಿದು ಸಚಿವರು, ಶಾಸಕರು, ಸಂಸದರೆಲ್ಲರೂ ಯಾವ ಧರ್ಮದವರು? ಅದನ್ನೂ ಓದಿ ಹೇಳಿಬಿಡಿ" ಎಂದು ಟ್ವೀಟ್ ಮಾಡಿದ್ದಾರೆ.

ಜನರಿಗೆ ತಿಳಿಸಿ

ಜನರಿಗೆ ತಿಳಿಸಿ

"ಕೋವಿಡ್ ನಿರ್ವಹಣೆಯಲ್ಲಿ‌ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎನ್ನುವುದು ಜಗಜ್ಜಾಹೀರಾಗಿದೆ. ನಿಮ್ಮ ಕೇಂದ್ರ ಸರ್ಕಾರ ಏನು ಕಡಿದುಕಟ್ಟೆ ಹಾಕಿದೆ‌‌ ಅದನ್ನೂ ರಾಜ್ಯದ ಜನತೆಗೆ ತಿಳಿಸಿ" ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

10 ದಿನಗಳು ಆಯಿತು ಎನ್ನುತ್ತೀರಿ

"ಬೆಡ್ ಬ್ಲಾಕಿಂಗ್ ನಿಮ್ಮ ಗಮನಕ್ಕೆ ಬಂದು ಹತ್ತು ದಿನ ಆಯ್ತು ಅಂತೀರಿ. ಇಷ್ಟು ದಿನ ಅಧಿಕಾರಿಗಳ ಮನವೊಲಿಸುತ್ತಿದ್ದೀರಾ?"ಎಂದು ಸಿದ್ದರಾಮಯ್ಯ ಟ್ವೀಟ್‌ನಲ್ಲಿ ಪ್ರಶ್ನಿಸಿದ್ದಾರೆ.

ಕೊರೊನಾ ಯಾಕೆ ಬಳಸುತ್ತೀರಿ?

"ಮುಖ್ಯಮಂತ್ರಿಗಳಿಂದ ಕರ್ತವ್ಯಲೋಪ-ಭ್ರಷ್ಟತೆ ನಡೆದಿದ್ದರೆ ಅವರ ವಿರುದ್ಧ ನೇರ ಆರೋಪ‌ಪಟ್ಟಿ ಸಲ್ಲಿಸಿ ಅವರನ್ನು ಕಿತ್ತು ಹಾಕಿ. ನಿಮ್ಮ ಆಂತರಿಕ ಕಿತ್ತಾಟಕ್ಕೆ ಕೊರೊನಾವನ್ನು ಯಾಕೆ ಬಳಸಿಕೊಳ್ತೀರಿ?" ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಯಾವ ವಿರುದ್ಧ ಕಾರ್ಯಾಚರಣೆ

"ತೇಜಸ್ವಿಸೂರ್ಯ,ರವಿಸುಬ್ರಹ್ಮಣ್ಯ,‌ ಸತೀಶ್ ರೆಡ್ಡಿ‌ ಅವರೇ,
ಕೋವಿಡ್ ನಿರ್ವಹಣೆಯ ಗುಪ್ತ ಕಾರ್ಯಾಚರಣೆ‌ ನಡೆಸಬೇಕಾಗಿರುವುದು BBMPಯ ಅಧಿಕಾರಿಗಳ ವಿರುದ್ಧವಲ್ಲ" ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

English summary
Bengaluru South MP Tejasvi Surya exposed the bed blocking racket at the BBMP war rooms. Opposition leader Siddaramaiah questions to Tejasvi Surya.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X