ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಉದ್ಧವ್ ಹೇಳಿಕೆಯನ್ನುಉಗ್ರವಾಗಿ ಖಂಡಿಸಿದ ಸಚಿವ ಈಶ್ವರಪ್ಪ

|
Google Oneindia Kannada News

ಬೆಂಗಳೂರು, ಜನವರಿ 28: ತಮ್ಮ ಜನಪ್ರಿಯತೆಯನ್ನು ಹೆಚ್ಚಿಸಿಕೊಳ್ಳಬೇಕು ಎನ್ನುವ ದುರುದ್ದೇಶದಿಂದ ಮಹಾರಾಷ್ಟ್ರ ಮುಖ್ಯಮಂತ್ರಿಗಳು ಇಲ್ಲಸಲ್ಲದ ಹೇಳಿಕೆಯನ್ನು ನೀಡುತ್ತಿದ್ದಾರೆ. ಅವರ ಹೇಳಿಕೆಯನ್ನು ನಾನು ಉಗ್ರವಾಗಿ ಖಂಡಿಸುತ್ತೇನೆ ಎಂದು ಗ್ರಾಮೀಣಾಭಿವೃದ್ದಿ ಸಚಿವ ಕೆ. ಎಸ್‌ ಈಶ್ವರಪ್ಪನವರು ಹೇಳಿದರು.

ಬೆಂಗಳೂರಿನಲ್ಲಿ ಹ.ನೀ ದೀಪಕ್‌ ಅವರ ನೇತೃತ್ವದ ಕರುನಾಡು ವಿಜಯಸೇನೆಯ ಕೇಂದ್ರ ಕಚೇರಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ಮರಾಠಿಗರು ಕರ್ನಾಟಕ ರಾಜ್ಯದಲ್ಲಿ ವಾಸಿಸುತ್ತಿದ್ದಾರೋ ಆ ಪ್ರದೇಶಗಳೆಲ್ಲಾ ಮಹಾರಾಷ್ಟ್ರಕ್ಕೆ ಸೇರಬೇಕು ಎನ್ನುವ ಅಸಂಬದ್ದ ಹೇಳಿಕೆಯನ್ನು ಮಹಾರಾಷ್ಟ್ರ ಮುಖ್ಯಮಂತ್ರಿ ನೀಡಿದ್ದಾರೆ. ಇದೇ ರೀತಿ ಕರ್ನಾಟಕದ ವಿವಿಧ ಭಾಗಗಳ ಜನರು ಮಹಾರಾಷ್ಟ್ರ ಹಾಗೂ ವಿಶೇಷವಾಗಿ ಮುಂಬಯಿಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಾಸಿಸುತ್ತಿದ್ದಾರೆ, ಆ ಪ್ರದೇಶಗಳನ್ನು ಕರ್ನಾಟಕಕ್ಕೆ ಸೇರಿಸಿ ಎಂದು ಕೇಳುವುದು ಸರಿಯಾಗುವುದೇ ಎಂದು ಪ್ರಶ್ನಿಸಿದರು.

Belagavi issue: KS Eashwarappa hits back at uddhav Maharashtra CM Thackeray

ಅವರು ಮಾಡುತ್ತಿರುವ ತಪ್ಪನ್ನು ನಾವು ಮಾಡುವುದಕ್ಕೆ ಆಗುವುದಿಲ್ಲ. ಮಹಾಜನ ವರದಿಯೇ ಅಂತಿಮವಾಗಿದ್ದು, ಮರಾಠಿಗರು ಹಾಗೂ ಕನ್ನಡಿಗರು ಮೊದಲಿನಿಂದಲೂ ಸಹೋದರರಂತೆ ಬಾಳುತ್ತಿದ್ದೇವೆ. ಇದು ಮುಂದುವರೆಯಬೇಕು. ರಾಜ್ಯದ ಯುವಕರಲ್ಲಿ ಗಡಿ, ನೀರು ಹಾಗೂ ಭೂಮಿ ವಿಷಯದಲ್ಲಿ ಜಾಗೃತಿ ಮೂಡಿಸಬೇಕಾದ ಅವಶ್ಯಕತೆ ಹೆಚ್ಚಾಗುತ್ತಿದೆ. ಈ ನಿಟ್ಟಿನಲ್ಲಿ ಕರುನಾಡು ವಿಜಯಸೇನೆ ಸಂಘಟನೆ ಕಾರ್ಯಪ್ರವೃತ್ತರಾಗಲಿ ಎಂದು ಹಾರೈಸಿದರು.

Belagavi issue: KS Eashwarappa hits back at uddhav Maharashtra CM Thackeray

ಕೇಂದ್ರ ಕಚೇರಿಯ ಉದ್ಘಾಟನೆಯನ್ನು ತುಮಕೂರು ಸಿದ್ದಗಂಗಾ ಕ್ಷೇತ್ರದ ಮಹಾಸ್ವಾಮೀಜಿಗಳಾದ ಸಿದ್ದಗಂಗಾ ಶ್ರೀಗಳು ನೆರವೇರಿಸಿದರು. ಉಪಮುಖ್ಯಂತ್ರಿ ಅಶ್ವಥ್‌ ನಾರಾಯಣ, ಯುವಘಟಕದ ಅಧ್ಯಕ್ಷ ಮಹೇಶ್ ಆರ್ ಎಸ್, ರಾಜ್ಯ ವಕ್ತಾರರು ರಾಮ್ ಪ್ರಸಾದ್, ಸಾಮಾಜಿಕ ಜಾಲತಾಣಗಳ ಅಧ್ಯಕ್ಷ ರೇಣುಕಾ ಪ್ರಸಾದ್, ಬೆಂಗಳೂರು ನಗರ ಅಧ್ಯಕ್ಷ ವಿಜಯ್ ಕುಮಾರ್ ಹಾಗೂ ಆಟೋ ಮತ್ತು ಮಹಿಳಾ ಘಟಕದ ಸದಸ್ಯರು ಈ ಸಮಯದಲ್ಲಿ ಉಪಸ್ಥಿತರಿದ್ದರು.

Belagavi issue: KS Eashwarappa hits back at uddhav Maharashtra CM Thackeray
English summary
Belagavi issue: Maharashtra CM lost popularity making false statements on Karnataka Maharashtra border issue said Karnataka minister KS Eshwarappa.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X