Get Updates
Get notified of breaking news, exclusive insights, and must-see stories!

ಗವಿ ವಿವಾದ: ಮಹಾರಾಷ್ಟ್ರ ಸಿಎಂ ಪ್ರತಿಕೃತಿ ದಹಿಸಿ ವಾಟಾಳ್ ನಾಗರಾಜ್ ಪ್ರತಿಭಟನೆ, ಪೊಲೀಸ್ ವಶಕ್ಕೆ

ಬೆಂಗಳೂರು, ಡಿ. 28: ಕರ್ನಾಟಕ- ಮಹಾರಾಷ್ಟ್ರ ಗಡಿ ವಿವಾದ ಉಲ್ಬನಗೊಳ್ಳುತ್ತಿರುವ ಬೆನ್ನಲ್ಲೇ ರಾಜಧಾನಿ ಬೆಂಗಳೂರಿನಲ್ಲಿ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಪ್ರತಿಭಟನೆ ನಡೆದಿದೆ.

ಬೆಳಗಾವಿ ಗಡಿ ವಿಚಾರವಾಗಿ ಮಹಾರಾಷ್ಟ್ರ ಸರ್ಕಾರದ ವಿರುದ್ಧ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಹಾಗೂ ಅವರ ಬೆಂಬಲಿಗರು ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿದರು.

ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರ ಪ್ರತಿಕೃತಿ ದಹಿಸಿ ಪ್ರತಿಭಟನೆ ನಡೆಸಿದ್ದು, ಪೊಲೀಸರು ಪ್ರತಿಭಟನಾಕಾರರನ್ನು ವಶಕ್ಕೆ ಪಡೆದಿದ್ದಾರೆ.

ಈ ಹಿಂದೆಯೂ ಮಹಾರಾಷ್ಟ್ರ ರಾಜ್ಯವು ಪದೇ ಪದೆ ಗಡಿ ಭಾಗದಲ್ಲಿ ಪುಂಡಾಟಿಕೆ ನಡೆಸುತ್ತಿದೆ ಎಂದು ಬೆಂಗಳೂರಿನ ಮೈಸೂರು ಬ್ಯಾಂಕ್ ವೃತ್ತದಲ್ಲಿ ನವೆಂಬರ್ 26ರಂದು

ವಾಟಾಳ್ ನಾಗರಾಜ್ ಪ್ರತಿಭಟನೆ ನಡೆಸಿದ್ದರು.

"ಬೆಳಗಾವಿ ನಮ್ಮದು, ರಾಜ್ಯದ ಒಂದು ಅಂಗುಲ ಜಾಗವನ್ನು ಸಹ ಬಿಟ್ಟುಕೊಡುವುದಿಲ್ಲ. ಮುಂಬೈ, ಸೊಲ್ಲಾಪುರ, ಅಂಕಲಕೋಟೆ ಸೇರಿದಂತೆ ಮಹಾರಾಷ್ಟ್ರದ ಎಲ್ಲಾ ಕನ್ನಡ ಪ್ರದೇಶಗಳು ಕನ್ನಡಿಗರದ್ದು. ಕರ್ನಾಟಕದ ನೆಲಕ್ಕೆ ಸೇರಿದ್ದಾಗಿದೆ. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಗಟ್ಟಿಯಾಗಬೇಕು. ರಾಜ್ಯದಲ್ಲಿ ಮಹಾರಾಷ್ಟ್ರ ಏಕೀಕರಣ ಸಮಿತಿಯನ್ನು ನಿಷೇಧಿಸಬೇಕು" ಎಂದು ವಾಟಾಳ್ ನಾಗರಾಜ್ ಆಗ್ರಹಿಸಿದ್ದರು.

Belagavi border issue : Vattal Nagaraj and his supporters protested in Bengaluru against Maharashtra Govt

ಮಂಗಳವಾರ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ಕರ್ನಾಟಕದ "ಮರಾಠಿ ವಿರೋಧಿ" ನಿಲುವನ್ನು ಖಂಡಿಸಿ ನಿರ್ಣಯ ಮಂಡಿಸಿದ್ದು, ಸರ್ವಾನುಮತದಿಂದ ಅಂಗೀಕಾರವಾಗಿದೆ.

ಮಹಾರಾಷ್ಟ್ರದ ವಿಧಾನಸಭೆಯಲ್ಲಿ ಮಂಡಿಸಲಾಗಿರುವ ನಿರ್ಣಯವು 865 ಮರಾಠಿ ಮಾತನಾಡುವ ಹಳ್ಳಿಗಳಿವೆ, ಈ ಹಳ್ಳಿಗಳ ಪ್ರತಿ ಇಂಚಿನನ್ನೂ ರಾಜ್ಯಕ್ಕೆ ತರಲಾಗುವುದು. ಇದಕ್ಕಾಗಿ ಮಹಾರಾಷ್ಟ್ರ ಸರ್ಕಾರ ಸುಪ್ರೀಂ ಕೋರ್ಟ್‌ನಲ್ಲಿ ಏನು ಬೇಕಾದರೂ ಮಾಡಲಿದೆ ಎಂದು ಹೇಳಿದೆ. ಜೊತೆಗೆ 'ಬೆಳಗಾವಿ, ಕಾರವಾರ, ಬೀದರ್, ನಿಪಾಣಿ, ಭಾಲ್ಕಿಯ ಇಂಚಿಂಚೂ ಮಹಾರಾಷ್ಟ್ರದ ಭಾಗವಾಗಲಿದೆ' ಎಂದು ನಿರ್ಣಯದಲ್ಲಿ ಹೇಳಲಾಗಿದೆ.

ಮಹಾರಾಷ್ಟ್ರದ ನಿರ್ಣಯ ಖಂಡಿಸಿ ರಾಜ್ಯದ ನಾಯಕರು ಪಕ್ಷಾತೀತರಾಗಿ ವಿರೋಧ ವ್ಯಕ್ತಪಡಿಸಿದ್ದಾರೆ. ರಾಜ್ಯದ ಒಂದಿಚೂ ಭೂಮಿಯನ್ನು ಮಹಾರಾಷ್ಟ್ರಕ್ಕೆ ಬಿಟ್ಟು ಕೊಡುವುದಿಲ್ಲ ಎಂದು ಎಲ್ಲಾ ನಾಯಕರು ಹೇಳಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+