ಬೆಳ್ಳಂದೂರು ಕೆರೆಯ ನೊರೆ ಸಮಸ್ಯೆಗೆ ಪರಿಹಾರ?
ಬೆಂಗಳೂರು, ಡಿಸೆಂಬರ್ 24 : 'ಬೆಳ್ಳಂದೂರು ಕೆರೆಯ ನೊರೆ ಸಮಸ್ಯೆಯನ್ನು ಹಂತ-ಹಂತವಾಗಿ ಪರಿಹರಿಸಲಾಗುವುದು. ಕೊಳಚೆ ನೀರು ಕೆರೆಗೆ ಹರಿದುಬರದಂತೆ ತಡೆಗಟ್ಟಲಾಗುವುದು' ಎಂದು ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಲಕ್ಷ್ಮಣ್ ಭರವಸೆ ನೀಡಿದ್ದಾರೆ.
ಬುಧವಾರ ಬೆಳ್ಳಂದೂರು ಕೆರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಮಾತನಾಡಿದ ಲಕ್ಷ್ಮಣ್ ಅವರು, 'ಕೆರೆಗೆ ಕೈಗಾರಿಕೆ ಮತ್ತು ಜನವಸತಿ ಪ್ರದೇಶದ ತ್ಯಾಜ್ಯಗಳು ಬಂದು ಸೇರುತ್ತಿವೆ. ಕೆರೆಯಲ್ಲಿ ಸುಮಾರು ಮೂರು ಮೀಟರ್‌ನಷ್ಟು ಹೂಳು ತುಂಬಿದೆ' ಎಂದು ಹೇಳಿದರು. [ಬೆಳ್ಳಂದೂರು ಕೆರೆ ಸ್ವಚ್ಛ ಮಾಡಲು ಎಷ್ಟು ವರ್ಷ ಬೇಕು?]

'ಕೆರೆಗೆ ಕೊಳಚೆ ನೀರು ಹರಿದುಬರದಂತೆ ತಡೆಯಲು ಕ್ರಮ ಕೈಗೊಳ್ಳಲಾಗುತ್ತೆ. ಹಂತ-ಹಂತವಾಗಿ ಈ ಯೋಜನೆಗಳನ್ನು ಕಾರ್ಯಗತಗೊಳಿಸಲಾಗುತ್ತದೆ. ನೀರು ಎತ್ತರಿಂದ ಬೀಳುತ್ತಿದೆ ಆದ್ದರಿಂದ ನೊರೆ ಉಂಟಾಗುತ್ತಿದೆ. ನೀರು ಬೀಳುವ ಜಾಗದಲ್ಲಿ ಇಳಿಜಾರು ನಿರ್ಮಿಸಲಾಗುತ್ತದೆ' ಎಂದರು. [ಗೂಗಲ್ ಮ್ಯಾಪ್ ನಲ್ಲಿ 'ಬೆಳ್ಳಂದೂರು ಲೇಕ್' ಹುಡುಕಬೇಡಿ!]
'2016ರ ಜೂನ್‌ನಲ್ಲಿ ಇಳಿಜಾರು ನಿರ್ಮಾಣ ಕಾರ್ಯಪೂರ್ಣಗೊಳ್ಳಲಿದೆ. ಚಲ್ಲಘಟ್ಟ ಬಳಿ ಕೊಳಚೆ ನೀರು ಸಂಸ್ಕರಣಾ ಘಟಕ (ಎಸ್‌ಟಿಪಿ) ಸ್ಥಾಪನೆ ಮಾಡಲಾಗುತ್ತಿದ್ದು, ಇದರಿಂದ ಕೆರೆಗೆ ಕೊಳಚೆ ನೀರು ಹರಿದುಬರುವುದು ತಪ್ಪಲಿದೆ' ಎಂದು ಲಕ್ಷಣ್ ತಿಳಿಸಿದರು. [ಬೆಳ್ಳಂದೂರು ಕೆರೆ ನೊರೆ ಸಮಸ್ಯೆ ಬಗೆಹರಿಸಿ : ಸಿದ್ದರಾಮಯ್ಯ]
ಜಲಮಂಡಳಿ, ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳ ಜೊತೆ ಮಾತುಕತೆ ನಡೆಸಿದ ಲಕ್ಷಣ್ ಅವರು ಕೆರೆಯ ನೊರೆಯಿಂದ ಆಗುತ್ತಿರುವ ತೊಂದರೆಗಳ ಕುರಿತು ಸ್ಥಳೀಯ ಜನರೊಂದಿಗೆ ಚರ್ಚೆ ನಡೆಸಿದರು.
-
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ










Click it and Unblock the Notifications