• search
  • Live TV
ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಬೆಂಗಳೂರು: ಒಂದೇ ಅಪಾರ್ಟ್‌ಮೆಂಟ್‌ನ 105 ಮಂದಿಗೆ ಕೊರೊನಾ ಸೋಂಕು

|

ಬೆಂಗಳೂರು,ಫೆಬ್ರವರಿ 15: ಬೆಂಗಳೂರಿನ ಒಂದೇ ಅಪಾರ್ಟ್‌ಮೆಂಟ್‌ನ 105 ಮಂದಿಗೆ ಕೊರೊನಾ ಸೋಂಕು ತಗುಲಿದೆ. ಬೊಮ್ಮನಹಳ್ಳಿ ಪ್ರದೇಶದ ಅಪಾರ್ಟ್‌ಮೆಂಟ್ ಒಂದರಲ್ಲಿ 105 ಮಂದಿಗೆ ಸೋಂಕು ತಗುಲಿದ್ದು ಅವರನ್ನು ಗೃಹ ಬಂಧನದಲ್ಲಿರಿಸಲಾಗಿದೆ.

ಆ ಅಪಾರ್ಟ್‌ಮೆಂಟ್‌ನಲ್ಲಿ 475 ಫ್ಲ್ಯಾಟ್‌ಗಳಿದ್ದು, 2500ಕ್ಕೂ ಹೆಚ್ಚು ಮಂದಿ ವಾಸಿಸುತ್ತಿದ್ದಾರೆ.ಅವರೊಂದಿಗೆ ಸಂಪರ್ಕದಲ್ಲಿದ್ದವರಿಗೆ ಪರೀಕ್ಷೆ ಮಾಡಿಸಿಕೊಳ್ಳಲು ಸೂಚಿಸಲಾಗಿದೆ.

ಸಿಹಿಸುದ್ದಿ: ಕರ್ನಾಟಕದಲ್ಲಿ 5863 ಕೊರೊನಾ ಸಕ್ರಿಯ ಪ್ರಕರಣಗಳಷ್ಟೇ ಬಾಕಿ

ಕಳೆದ 24 ಗಂಟೆಗಳಲ್ಲಿ 414 ಮಂದಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದ್ದು, ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆಯು 945270ಕ್ಕೆ ಏರಿಕೆಯಾಗಿದೆ. ಕಳೆದೊಂದು ದಿನದಲ್ಲಿ ಕೊರೊನಾವೈರಸ್ ನಿಂದ ಇಬ್ಬರು ಪ್ರಾಣ ಬಿಟ್ಟಿದ್ದು, ಸಾವಿನ ಸಂಖ್ಯೆ 12265ಕ್ಕೆ ಏರಿಕೆ ಆಗಿದೆ.

ಭಾನುವಾರದ ಅಂಕಿ-ಅಂಶಗಳ ಪ್ರಕಾರ, ಒಟ್ಟು 945270 ಸೋಂಕಿತ ಪ್ರಕರಣಗಳ ಪೈಕಿ 927150 ಸೋಂಕಿತರು ಗುಣಮುಖರಾಗಿದ್ದಾರೆ. ಒಂದು ದಿನದಲ್ಲೇ 486 ಸೋಂಕಿತರು ಗುಣಮುಖರಾಗಿದ್ದು, ಉಳಿದಂತೆ ರಾಜ್ಯದಲ್ಲಿ 5836 ಕೊವಿಡ್-19 ಸಕ್ರಿಯ ಪ್ರಕರಣಗಳಿವೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಮಾಹಿತಿ ನೀಡಿದೆ.

ರಾಜ್ಯದಲ್ಲಿ ಒಟ್ಟು 414 ಮಂದಿಗೆ ಕೊರೊನಾವೈರಸ್ ಸೋಂಕು ಪತ್ತೆಯಾಗಿವೆ. ಅಷ್ಟಾಗಿಯೂ ರಾಜ್ಯ 22 ಜಿಲ್ಲೆಗಳಲ್ಲಿ ಹೊಸ ಸೋಂಕಿತ ಪ್ರಕರಣಗಳ ಸಂಖ್ಯೆ ಒಂದಂಕಿಗಿಂತ ಹೆಚ್ಚಾಗಿಲ್ಲ.

English summary
105 Residence of an apartment in Bommanahalli zone in Bengaluru tested positive for Coronavirus.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X