ಬೆಂಗಳೂರು: 6 ತಿಂಗಳಿಂದ ಬಾಲಕಿ ಮೇಲೆ ನಿರಂತರ ಅತ್ಯಾಚಾರ
ಬೆ೦ಗಳೂರು, ಫೆಬ್ರವರಿ, 18: ಮಕ್ಕಳಿಗೆ ಮಾರ್ಗದರ್ಶನ ನೀಡಬೇಕಾದ ಶಿಕ್ಷಕನೇ ಬಾಲಕಿ ಮೇಲೆ ಅತ್ಯಾಚಾರ ಎಸಗುತ್ತಿದ್ದ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಜಾಲಹಳ್ಳಿ ಸಮೀಪದ ಖಾಸಗಿ ಶಾಲೆಯ 9ನೇ ತರಗತಿ ವಿದ್ಯಾಥಿ೯ನಿ ಮೇಲೆ ಅದೇ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಲಕ್ಷ್ಮಿಕಾ೦ತ್ (40) ಅತ್ಯಾಚಾರವೆಸಗಿದ್ದು ತಲೆಮರೆಸಿಕೊಂಡಿದ್ದಾನೆ.
2015ರ ಜೂನ್ ತಿಂಗಳಿಂದ 14 ವಷ೯ದ ಬಾಲಕಿ ಮೇಲೆ ಅನೇಕ ಸಾರಿ ಅತ್ಯಾಚಾರ ನಡೆಸಿದ್ದಾನೆ. ಪ್ರಕರಣ ದಾಖಲಾಗುತ್ತಿದಂತೆ ನಾಪತ್ತೆಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.[ಇನ್ಫೋಸಿಸ್ ಕ್ಯಾಂಪಸ್ ನಲ್ಲಿ ರೇಪ್, ವಿಡಿಯೋ ಮಾಡಿದ ದುರುಳರು]

ನೆಪ ಹೇಳಿಕೊ೦ಡು ವಿದ್ಯಾಥಿ೯ನಿಯನ್ನು ತನ್ನ ಮನೆಗೆ ಕರೆಸಿಕೊಳ್ಳುತ್ತಿದ್ದ. ಶಾಲಾ ಆವರಣ ಹಾಗೂ ಸಾವ೯ಜನಿಕ ಸ್ಥಳಗಳಲ್ಲೂ ಲೈ೦ಗಿಕ ದೌಜ೯ನ್ಯ ಎಸಗಿದ್ದ. ಇದನ್ನು ಬಾಯಿಬಿಟ್ಟರೆ ನಿನ್ನನ್ನು ಕೊಲೆ ಮಾಡುತ್ತೇನೆ ಎಂದು ವಿದ್ಯಾರ್ಥಿನಿಗೆ ಬೆದರಿಸಿದ್ದ. 6 ತಿ೦ಗಳಿ೦ದ ಲೈ೦ಗಿಕ ಕಿರುಕುಳ ಅನುಭವಿಸುತ್ತಿದ್ದ ಬಾಲಕಿ ತನ್ನ ಸಹಪಾಠಿಗಳ ಬಳಿ ಅಳಲು ತೋಡಿಕೊ೦ಡಿದ್ದಳು.[ಮಹಿಳೆ ಮೇಲಿನ ದೌರ್ಜನ್ಯ ತಡೆಗೆ ಹೊಸ ಮೊಬೈಲ್ ಆಪ್]
ನಂತರ ಈ ವಿಚಾರವನ್ನು ಪಾಲಕರಿಗೆ ತಿಳಿಸಿದ ಮೇಲೆ ಕಠಿಣ ಕ್ರಮ ತೆಗೆದುಕೊಂಡ ಶಾಲಾ ಆಡಳಿತ ಮಂಡಳಿ ಶಿಕ್ಷಕನನ್ನು ಸೇವೆಯಿ೦ದ ವಜಾಗೊಳಿಸಿತ್ತು ಅಲ್ಲದೇ ಫೆ.16ರ೦ದು ಜಾಲಹಳ್ಳಿ ಪೊಲೀಸ್ ಠಾಣೆಯಲ್ಲಿ ಶಿಕ್ಷಕನ ವಿರುದ್ಧ ದೂರು ಸಹ ದಾಖಲಿಸಲಾಗಿತ್ತು.
ಲಕ್ಷ್ಮಿಕಾ೦ತ್ ಮೂಲತಃ ಶಿವಮೊಗ್ಗದವ
ಆರೋಪಿ ಲಕ್ಷ್ಮಿಕಾ೦ತ್ ಮೂಲತಃ ಶಿವಮೊಗ್ಗದವನು. ಆತನಿಗೆ ಮದುವೆಯಾಗಿದ್ದು, ಜಾಲಹಳ್ಳಿಯಲ್ಲಿ ಪತ್ನಿ ಹಾಗೂ ಮಕ್ಕಳ ಜತೆ ವಾಸವಾಗಿದ್ದಾನೆ. ಪತ್ನಿ ಮತ್ತು ಮಕ್ಕಳು ಮನೆಯಲ್ಲಿ ಇಲ್ಲದ ವೇಳೆ ಬಾಲಕಿಯನ್ನು ಕರೆದೊಯ್ದು ಅತ್ಯಾಚಾರ ಎಸಗುತ್ತಿದ್ದ. ಆತನ ಪತ್ನಿ ಹಾಗೂ ಸ೦ಬ೦ಧಿಕರಿ೦ದ ಇನ್ನಷ್ಟು ಮಾಹಿತಿ ಕಲೆಹಾಕಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
-
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು












Click it and Unblock the Notifications