ಸರ್ಜಾಪುರದಲ್ಲಿ ಕಾರಿಗೆ ಬೈಕ್ ಡಿಕ್ಕಿ, ಕಿರುಕುಳ: ಕ್ಯಾಮೆರಾದಲ್ಲಿ ದೃಶ್ಯ ಸೆರೆ- ಇಬ್ಬರ ಬಂಧನ
ಬೆಂಗಳೂರಿನ ಸರ್ಜಾಪುರದಲ್ಲಿ ಕಾರಿಗೆ ಬೈಕ್ ಡಿಕ್ಕಿ ಹೊಡೆದು ದಂಪತಿಗೆ ಕಿರುಕುಳ ನೀಡಿದ ಆರೋಪದ ಮೇಲೆ ಇಬ್ಬರನ್ನು ಬಂಧಿಸಲಾಗಿದೆ.
ಬೆಂಗಳೂರು ಜನವರಿ 30: ಇತ್ತೀಚೆಗೆ ಬೆಂಗಳೂರಿನ ಪ್ರಮುಖ ರಸ್ತೆಗಳಲ್ಲಿ ಪುಂಡರ ಅಟ್ಟಹಾಸ ಹೆಚ್ಚಾಗಿದೆ. ಸುಖಾ ಸುಮ್ಮನೆ ಸವಾರರೊಂದಿಗೆ ಗಲಾಟೆಗೆ ಮುಂದಾಗುವುದು, ಹಲ್ಲೆ ಮಾಡುವಂತಹ ಘಟನೆಗಳು ಬೆಳಕಿಗೆ ಬರುತ್ತಿವೆ. ಇದಕ್ಕೆ ಸಾಕ್ಷಿಯಾಗಿ ಭಾನುವಾರವೊಂದು ನಡೆದ ಘಟನೆಯ ವಿಡಿಯೋ ವೈರಲ್ ಆಗಿದೆ. ದಂಪತಿಗಳಿಗೆ ವಾಹನ ಸವಾರರಿಬ್ಬರು ಕಿರುಕುಳ ನೀಡಿದ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಪೊಲೀಸರು ತಕ್ಷಣ ಕ್ರಮ ಕೈಗೊಂಡಿದ್ದಾರೆ.
ಸರ್ಜಾಪುರದಲ್ಲಿ ಕಾರಿಗೆ ಬೈಕ್ ಡಿಕ್ಕಿ ಹೊಡೆದು ದಂಪತಿಗೆ ಕಿರುಕುಳ ನೀಡಿದ ಆರೋಪದ ಮೇಲೆ ಇಬ್ಬರನ್ನು ಬಂಧಿಸಲಾಗಿದೆ. ಬಂಧಿತರನ್ನು ಧನುಷ್ (24) ಮತ್ತು ರಕ್ಷಿತ್ (20) ಎಂದು ಗುರುತಿಸಲಾಗಿದೆ. ಇವರ ವಿರುದ್ಧ ಭಾರತೀಯ ದಂಡ ಸಂಹಿತೆಯ (IPC) ಸೆಕ್ಷನ್ 384 (ಸುಲಿಗೆ ಶಿಕ್ಷೆ), 504 (ಶಾಂತಿ ಭಂಗವನ್ನು ಪ್ರಚೋದಿಸುವ ಉದ್ದೇಶದಿಂದ ಉದ್ದೇಶಪೂರ್ವಕ ಅವಮಾನ) ಮತ್ತು 506 (ಕ್ರಿಮಿನಲ್ ಬೆದರಿಕೆಗೆ ಶಿಕ್ಷೆ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಭಾನುವಾರ ಮುಂಜಾನೆ 3 ಗಂಟೆ ಸುಮಾರಿಗೆ ದಂಪತಿ ಸರ್ಜಾಪುರ ರಸ್ತೆಯಲ್ಲಿ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ. ಈ ಘಟನೆ ಕಾರಿನ ಡ್ಯಾಶ್‌ಬೋರ್ಡ್ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಕಾರಿಗೆ ದ್ವಿಚಕ್ರ ವಾಹನ ಸವಾರರು ಡಿಕ್ಕಿ ಹೊಡೆದು ದಂಪತಿಗಳಿಗೆ ಕಿರುಕುಳ ನೀಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಇಬ್ಬರು ಆರೋಪಿಗಳು ತಮ್ಮ ಬೈಕ್‌ನನಲ್ಲಿ ರಸ್ತೆಯ ರಾಂಗ್ ಸೈಡ್‌ನಲ್ಲಿ ಸವಾರಿ ಮಾಡಿ ದಂಪತಿಯ ಕಾರಿಗೆ ಡಿಕ್ಕಿ ಹೊಡೆಯುವುದನ್ನು ವಿಡಿಯೊ ತೋರಿಸಿದೆ. ಈ ವೇಳೆ ವಾಹನ ಸವಾರರು ಹೆಲ್ಮೆಟ್ ಧರಿಸಿರಲಿಲ್ಲ. ತಕ್ಷಣ ದಂಪತಿಗಳು ಕಾರಿನ ಇಂಡಿಕೇಟರ್ ಆನ್ ಆಗಿದ್ದು ರಾಂಗ್ ಸೈಡ್ ನಲ್ಲಿ ಬಂದಿರುವುದಾಗಿ ಇಬ್ಬರಿಗೆ ತಿಳಿಸಿದ್ದಾರೆ. ಸೂಚಿಸಿ ಮುಂದೆ ಸಾಗಿದ್ದಾರೆ. ಆದರೆ ಇಬ್ಬರು ಸವಾರರಲ್ಲಿ ಒಬ್ಬರು ಕಾರನ್ನು ನಿಲ್ಲಿಸುವವರೆಗೆ ಕೆಲವು ಮೀಟರ್‌ಗಳವರೆಗೆ ಹಿಂಬಾಲಿಸಿದ್ದಾರೆ. ಇದರಿಂದ ಕೋಪಗೊಂಡ ವಾಹನ ಸವಾರರು ದಂಪತಿಗೆ ಕಾರಿನಿಂದ ಇಳಿಯುವಂತೆ ಸನ್ನೆ ಮಾಡಿದರು.
ದಂಪತಿಗಳು ಬಾಗಿಲುಗಳನ್ನು ಬಡಿಯಲು ಪ್ರಾರಂಭಿಸಿದರು. ದಂಪತಿಗಳು ಈ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದು, ಪೊಲೀಸರು ಕ್ರಮ ಕೈಗೊಳ್ಳುವಂತೆ ಕೋರಿದ್ದಾರೆ.
Horrific incident reported on Sarjapur road near Sofas & More around 3 am today. Miscreant riders collided purposefully to a couple traveling in car. They chased the car for 5km till their society in Chikkanayakanahalli. Don't open your car in night. Use dash cam. @BlrCityPolice. pic.twitter.com/4QVYtBZ67B
— Citizens Movement, East Bengaluru (@east_bengaluru) January 29, 2023
ಘಟನೆಯ ಕುರಿತು ಪ್ರತಿಕ್ರಿಯಿಸಿದ ವೈಟ್‌ಫೀಲ್ಡ್ ವಿಭಾಗದ ಉಪ ಪೊಲೀಸ್ ಆಯುಕ್ತ (ಡಿಸಿಪಿ) ಎಸ್ ಗಿರೀಶ್ ಟ್ವಿಟರ್‌ನಲ್ಲಿ ಹೀಗೆ ಬರೆದಿದ್ದಾರೆ: "ಈ ಘಟನೆಯಲ್ಲಿ ಭಾಗಿಯಾಗಿದ್ದ ಬೈಕ್‌ನಲ್ಲಿದ್ದ ಇಬ್ಬರನ್ನು ಎಫ್‌ಐಆರ್ ದಾಖಲಿಸಿ ಬಂಧಿಸಲಾಗಿದೆ. ಬೆಳ್ಳಂದೂರು ಪೊಲೀಸರ ಕ್ಷಿಪ್ರ ಪ್ರತಿಕ್ರಿಯೆಯನ್ನು ಶ್ಲಾಘಿಸುತ್ತೇನೆ'' ಎಂದಿದ್ದಾರೆ. ಇವರಿಬ್ಬರು ಬೆಳ್ಳಂದೂರು ಬಳಿ ಮೀನು ಮಾರಾಟಗಾರರಾಗಿ ಕೆಲಸ ಮಾಡುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಎಚ್ ಎಸ್ ಆರ್ ಲೇಔಟ್ ಸಂಚಾರಿ ಪೊಲೀಸ್ ಠಾಣೆಯಲ್ಲಿ ಮತ್ತೊಂದು ಪ್ರಕರಣ ದಾಖಲಾಗಿದೆ ಎಂದು ಸಂಚಾರ ಪೂರ್ವ ವಿಭಾಗದ ಡಿಸಿಪಿ ಕಲಾ ಕೃಷ್ಣಸ್ವಾಮಿ ತಿಳಿಸಿದ್ದಾರೆ. "ಎಚ್‌ಎಸ್‌ಆರ್ ಸಂಚಾರಿ ಪೊಲೀಸ್ ಠಾಣೆಯಲ್ಲಿ ರಸ್ತೆ ಅಪಘಾತ ಪ್ರಕರಣ ದಾಖಲಾಗಿದೆ. ಮುಂದಿನ ಕ್ರಮ ಕೈಗೊಳ್ಳಲಾಗುವುದು' ಎಂದು ಟ್ವಿಟರ್‌ನಲ್ಲಿ ಬರೆದುಕೊಂಡಿದ್ದಾರೆ.












Click it and Unblock the Notifications