Bengaluru 2nd Airport: 3 ಜಾಗ ಶಾರ್ಟ್‌ ಲಿಸ್ಟ್‌, ಮುಂದಿನ ಪ್ರಕ್ರಿಯೆ ಏನು ?

ಬೆಂಗಳೂರಿನ ಬಹು ನಿರೀಕ್ಷಿತ ಎರಡನೇ ವಿಮಾನ ನಿಲ್ದಾಣಕ್ಕೆ ಭರ್ಜರಿ ಸಿದ್ಧತೆ ಶುರುವಾಗಿದೆ. ಬೆಂಗಳೂರಿನ ಎರಡನೇ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಇದೀಗ ರಾಜ್ಯ ಸರ್ಕಾರವು ಮೂರು ಜಾಗಗಳನ್ನು ಅಂತಿಮ ಮಾಡಿದ್ದು ಲಿಸ್ಟ್‌ ಅನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಕೆ ಮಾಡಿದೆ. ಈ ರೀತಿ ನೋಡಿದರೆ ಬೆಂಗಳೂರು ಎರಡನೇ ವಿಮಾನ ನಿಲ್ದಾಣ ವಿಚಾರದಲ್ಲಿ ಪ್ರಾರಂಭಿಕ ಹಂತವಷ್ಟೇ ಪೂರ್ಣಗೊಂಡಂತೆ ಆಗಿದೆ. ವಿಮಾನ ನಿಲ್ದಾಣ ನಿರ್ಮಾಣ ಪ್ರಕ್ರಿಯೆ ಸುದೀರ್ಘವಾಗಿದ್ದು. ಇದೀಗ ಎರಡನೇ ವಿಮಾನ ನಿಲ್ದಾಣ ನಿರ್ಮಾಣದ ಚೆಂಡು ಕೇಂದ್ರ ಸರ್ಕಾರದ ಅಂಗಳದಲ್ಲಿ ಇದೆ.

ತಮಿಳುನಾಡಿನ ಹೊಸೂರಿನಲ್ಲಿ ವಿಮಾನ ನಿಲ್ದಾಣ ನಿರ್ಮಾಣ ಮಾಡುವ ಮೂಲಕ ದೇವಹನಹಳ್ಳಿಯಲ್ಲಿರುವ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಹಾಗೂ ಬೆಂಗಳೂರಿನ ಎರಡನೇ ವಿಮಾನ ನಿಲ್ದಾಣಕ್ಕೆ ಏಕಕಾಲದಲ್ಲಿ ಟಕ್ಕರ್ ಕೊಡುವುದಕ್ಕೆ ತಮಿಳುನಾಡು ಸರ್ಕಾರವು ಮುಂದಾಗಿದೆ. ಇದೇ ಸಂದರ್ಭದಲ್ಲಿ ಕರ್ನಾಟಕ ಸರ್ಕಾರವೂ ಸಹ ಎರಡನೇ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಮೂರು ಜಾಗಗಳನ್ನು ಗುರುತು ಮಾಡಿ ಕೇಂದ್ರ ಸರ್ಕಾರಕ್ಕೆ ಕಳುಹಿಸಿದೆ. ಭಾರತೀಯ ವಿಮಾನ ಅಭಿವೃದ್ಧಿ ಪ್ರಾಧಿಕಾರವು ಮುಂದಿನ ಪ್ರಕ್ರಿಯೆಯನ್ನು ನಡೆಸಲಿದೆ. ಬೆಂಗಳೂರು ವಿಮಾನ ನಿಲ್ದಾಣದ ಮುಂದಿನ ಪ್ರಕ್ರಿಯೆಗಳು ಯಾವ ರೀತಿ ಇರಲಿದೆ ಎನ್ನುವುದನ್ನು ನೋಡೋಣ.

Bengaluru 2nd Airport 3 Places Shortlisted and what is Next Process

ಕೇಂದ್ರದಿಂದ ಸಕಾರಾತ್ಮಕ ಸ್ಪಂದನೆ: ಇನ್ನು ಬೆಂಗಳೂರಿನ ಎರಡನೇ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಕೇಂದ್ರ ಬಿಜೆಪಿ ಸರ್ಕಾರವು ಸಕಾರಾತ್ಮಕವಾಗಿ ಸ್ಪಂದಿಸುತ್ತಿದೆ. ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೇಲೆ ಒತ್ತಡ ಹೆಚ್ಚಾಗುತ್ತಿದ್ದು ಎರಡನೇ ವಿಮಾನ ನಿಲ್ದಾಣವನ್ನು ನಿರ್ಮಾಣ ಮಾಡುವ ಅವಶ್ಯಕತೆ ಇದೆ. ಎರಡನೇ ವಿಮಾನ ನಿಲ್ದಾಣ ನಿರ್ಮಾಣದ ಬಗ್ಗೆ ಪ್ರಸ್ತಾವನೆ ಸಲ್ಲಿಸಿದರೆ ಅಗತ್ಯ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಕೇಂದ್ರ ಸರ್ಕಾರ ಈಗಾಗಲೇ ಹೇಳಿದೆ.

ಬೆಂಗಳೂರಿನಲ್ಲಿ ಎರಡನೇ ವಿಮಾನ ನಿಲ್ದಾಣ ನಿರ್ಮಾಣ ಮಾಡುವ ಬಗ್ಗೆ ನಾಗರಿಕ ವಿಮಾನಯಾನ ಸಚಿವ ಕೆ. ರಾಮಮೋಹನ್‌ ನಾಯ್ಡು ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ.
ಮುಂದಿನ ಪ್ರಕ್ರಿಯೆ ಹೇಗಿರಲಿದೆ ?

ಕರ್ನಾಟಕ ಸರ್ಕಾರವು ಮೂರು ಜಾಗಗಳನ್ನು ಎರಡನೇ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಫೈನಲ್‌ ಮಾಡಿದೆ. ಆದರೆ ಇದರಲ್ಲಿ ರಾಜ್ಯ ಸರ್ಕಾರದ ನಿರ್ಧಾರವೇ ಅಂತಿಮವಲ್ಲ. ಈ ಜಾಗಗಳ ಬಗ್ಗೆ ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರದ ಅಧಿಕಾರಿಗಳು ಕರ್ನಾಟಕಕ್ಕೆ ಬಂದು ಪರಿಶೀಲನೆ ನಡೆಸಿದ್ದಾರೆ. ರಾಜ್ಯ ಸರ್ಕಾರ ಗುರುತು ಮಾಡಿರುವ ಜಾಗಗಳಲ್ಲಿ ವಿಮಾನ ನಿಲ್ದಾಣ ನಿರ್ಮಾಣ ಮಾಡಲು ಸಾಧ್ಯವೇ. ಇಲ್ಲಿ ವಿಮಾನ ನಿಲ್ದಾಣ ನಿರ್ಮಾಣ ಮಾಡಿದರೆ, ಸಾಧಕ ಬಾಧಕಗಳೇನು ಎಂದು ಪರಿಶೀಲನೆ ಮಾಡಲಿದ್ದಾರೆ.

ಇನ್ನು ಅಲ್ಲಿಂದಲೂ ಒಪ್ಪಿಗೆ ಬಂದ ಮೇಲೆ ಕಾರ್ಯಸಾಧ್ಯತೆಯನ್ನು ಪರಿಶೀಲಿಸಲಿದ್ದೇವೆ ಎಂದು ಸಚಿವ ಎಂ.ಬಿ ಪಾಟೀಲ್‌ ಅವರು ಹೇಳಿದ್ದಾರೆ. ಆ ವರದಿಯನ್ನು ಆಧರಿಸಿ ಸ್ಥಳವನ್ನು ಅಂತಿಮಗೊಳಿಸುವುದಾಗಿ ಹೇಳಿದ್ದಾರೆ.

ಮೂರು ಸ್ಥಳ ನಿಗದಿ: ಇನ್ನು ಇದೀಗ ಬೆಂಗಳೂರು ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಕನಕಪುರ ರಸ್ತೆ ಹಾಗೂ ಹಾರೋಹಳ್ಳಿಯಲ್ಲಿ 2 ಜಾಗ ಗುರುತು ಮಾಡಲಾಗಿದೆ. ನೆಲಮಂಗಲ ಕುಣಿಗಲ್‌ ರಸ್ತೆ ಸಹ ಇದರಲ್ಲಿ ಸೇರಿದೆ. ನೆಲಮಂಗಲ, ಕುಣಿಗಲ್‌ ರಸ್ತೆ ಹಾಗೂ ಕನಕಪುರ ರಸ್ತೆ ಫೈನಲ್‌ ಲಿಸ್ಟ್‌ನಲ್ಲಿ ಇವೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+