Bengaluru 2nd airport: 2ನೇ ವಿಮಾನ ನಿಲ್ದಾಣ, ಸಂಭಾವ್ಯ ಸ್ಥಳ ಗುರುತು ಹೇಗೆ?

ಬೆಂಗಳೂರು, ಜುಲೈ 24: ಬೆಂಗಳೂರು ನಗರಕ್ಕೆ 2ನೇ ವಿಮಾನ ನಿಲ್ದಾಣ ಬೇಕು ಎನ್ನುವುದು ಸದ್ಯ ಚರ್ಚೆಯ ವಿಷಯ. ಈ ವಿಚಾರದಲ್ಲಿ ಕರ್ನಾಟಕ ಸರ್ಕಾರ ನಿಲುವು ಏನು?, ಸಂಭಾವ್ಯ ಸ್ಥಳಗಳು ಯಾವುವು? ಎಂಬುದು ಸದ್ಯ ಎಲ್ಲರ ಕುತೂಹಲಕ್ಕೆ ಕಾರಣವಾಗಿದೆ.

ಕರ್ನಾಟಕ ವಿಧಾನಸಭೆ ಮುಂಗಾರು ಅಧಿವೇಶನ ನಡೆಯುತ್ತಿದೆ. ವಿಧಾನ ಪರಿಷತ್‌ನಲ್ಲಿ ಸದಸ್ಯೆ ಭಾರತಿ ಶೆಟ್ಟಿ (ನಾಮ ನಿರ್ದೇಶನ ಹೊಂದಿದವರು) ಈ ಕುರಿತು ಸರ್ಕಾರವನ್ನು ಪ್ರಶ್ನಿಸಿದ್ದಾರೆ.

Bengaluru 2nd Airport Construction Government Stand

ಬೆಂಗಳೂರಿನ ಸಮೀಪ 2ನೇಯ ವಿಮಾನ ನಿಲ್ದಾಣ ಸ್ಥಾಪಿಸುವ ಬಗ್ಗೆ ಸರ್ಕಾರದ ನೀತಿ ನಿಲುವುಗಳೇನು? ಎಂದು ಪ್ರಶ್ನೆ ಮಾಡಿದ್ದರು. ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವ ಎಂ. ಬಿ. ಪಾಟೀಲ್ ಈ ಕುರಿತು ಕಲಾಪದಲ್ಲಿ ಉತ್ತರ ನೀಡಿದ್ದಾರೆ.

ಸಚಿವರು ತಮ್ಮ ಉತ್ತರದಲ್ಲಿ Airports Authority of India (AAl) ಮತ್ತು Bangalore International Airport Limited (BIAL)ನೊಂದಿಗೆ ನಡೆದ ಒಪ್ಪಂದದನ ಯ ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಪ್ರಾರಂಭವಾದ ದಿನದಿಂದ 25 ವರ್ಷ ಪೂರ್ಣಗೊಳ್ಳುವವರಗೂ 150 ಕಿ. ಮೀ. ವ್ಯಾಪ್ತಿಯಲ್ಲಿ ಯಾವುದೇ ವಿಮಾನ ನಿಲ್ದಾಣವನ್ನು ಕಾರ್ಯಾಚರಣೆಗೊಳಿಸಲು ಅವಕಾಶ ಇರುವುದಿಲ್ಲ.

ಈ ಒಪ್ಪಂದವು 2023ನೇ ಸಾಲಿನವರೆಗೂ ಜಾರಿಯಲ್ಲಿರುತ್ತದೆ. ಬೆಂಗಳೂರಿನ ಸಮೀಪ 2ನೇ ವಿಮಾನ ನಿಲ್ದಾಣವನ್ನು ಸ್ಥಾಪಿಸುವ ಬಗ್ಗೆ ಪರಿಶೀಲಿಸಲಾಗುತ್ತದೆ ಎಂದು ಸಚಿವರು ಉತ್ತರದಲ್ಲಿ ಹೇಳಿದ್ದಾರೆ.

ಈ ನಿಟ್ಟಿನಲ್ಲಿ ನಡೆದಿರುವ ಪ್ರಕ್ರಿಯೆಗಳೇನು?, (ವಿವರ ಒದಗಿಸುವುದು) ಎಂದು, ಸಂಭಾವ ಸ್ಥಳಗಳನ್ನು ಸರ್ಕಾರ ಪರಿಶೀಲಿಸುತ್ತಿದೆಯೇ?. ಹಾಗಿದ್ದಲ್ಲಿಅವುಗಳು ಯಾವುವು? (ಸಂಪೂರ್ಣ ಮಾಹಿತಿ ಒದಗಿಸುವುದು) ಎಂದು ಪ್ರಶ್ನಿಸಲಾಗಿದೆ.

ಸಚಿವರು ತಮ್ಮ ಉತ್ತರದಲ್ಲಿ ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಸಮೀಪ ಎರಡನೇಯ ವಿಮಾನ ನಿಲ್ದಾಣವನ್ನು ಸ್ಥಾಪಿಸುವ ವಿಷಯದ ಕುರಿತು ಅಧ್ಯಯನವನ್ನು ನಡೆಸಿ ವರದಿ ನೀಡುವಂತೆ ಮೂಲಸೌಲಭ್ಯ ಅಭಿವೃದ್ಧಿ ಇಲಾಖೆಯಿಂದ ಐಡಕ್ ಸಂಸ್ಥೆಗೆ ಸೂಚಿಸಲಾಗಿರುತ್ತದೆ.

ಅದರಂತೆ ಸಂಸ್ಥೆಯು ಪ್ರಾಥಮಿಕ ಅಧ್ಯಯನವನ್ನು ನಡೆಸಿ ಬೆಂಗಳೂರಿನಿಂದ 100 ಕಿ. ಮೀ. ವ್ಯಾಪ್ತಿಯಲ್ಲಿ ಸ್ಥಳಗಳನ್ನು ಗುರುತಿಸುವ ಕಾರ್ಯವನ್ನು ಕೈಗೊಳ್ಳಲಾಗುತ್ತಿದೆ. ಈ ಕೆಳಕಂಡ 4 ಅಂಶಗಳನ್ನು ಪರಿಗಣನೆಗೆ ತೆಗೆದುಕೊಂಡು ಸಂಭಾವ್ಯ ಸ್ಥಳಗಳನ್ನು ಗುರುತಿಸಲಾಗುವುದು ಎಂದು ಸಚಿವರು ಉತ್ತರ ನೀಡಿದ್ದಾರೆ.

* ತಾಂತ್ರಿಕ ಕಾರ್ಯಸಾಧುತ್ವ-ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಗಳು, ಗುಡ್ಡಗಾಡು ಪ್ರದೇಶ, ಎತ್ತರದ ರಚನೆಗಳು.

* ಸಂಪರ್ಕ-ರಸ್ತೆ (NH & SH), ರೈಲು ಮತ್ತು ಮೆಟ್ರೋ ಸಂಪರ್ಕ.

* ಪ್ರಯಾಣಿಕರಿಗೆ ಉದ್ದೇಶಿತ ವಿಮಾನ ನಿಲ್ದಾಣವನ್ನು ತಲುಪುವ ದೂರ ಮತ್ತು ಸಮಯ.

* ಸ್ಥಳ ವೈಶಿಷ್ಟ್ಯತೆಗಳು - ವಿಸ್ತಾರವಾದ ಭೂಪ್ರದೇಶ, ಜಮೀನಿನ ಪ್ರಕಾರಗಳು, ಕಡಿಮೆ ಜನಸಾಂದ್ರತೆಯ ಪ್ರದೇಶ ಮತ್ತು ಜಲಸಂಪನ್ಮೂಲದ ಲಭ್ಯತೆ.

ತಮಿಳುನಾಡು ಸರ್ಕಾರ ಹೊಸೂರಿನಲ್ಲಿ ವಿಮಾನ ನಿಲ್ದಾಣ ಸ್ಥಾಪನೆ ಮಾಡುವುದಾಗಿ ಘೋಷಣೆ ಮಾಡಿದೆ. ಬಳಿಕ ಕರ್ನಾಟಕ ಸರ್ಕಾರ ಬೆಂಗಳೂರಿನಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಿಸುವುದಾಗಿ ಹೇಳಿದರು. ಬಳಿಕ 2ನೇ ವಿಮಾನ ನಿಲ್ದಾಣದ ಕುರಿತು ಚರ್ಚೆಗಳು ಆರಂಭವಾದವು.

ಬೆಂಗಳೂರು ನಗರಕ್ಕೆ ವಾರ್ಷಿಕವಾಗಿ 100 ಮಿಲಿಯನ್ ಪ್ರಯಾಣಿಕರನ್ನು ನಿರ್ವಹಿಸುವ ಮತ್ತೊಂದು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಅತ್ಯಗತ್ಯವಾಗಿದೆ ಎಂದು ಸಚಿವರು ಹೇಳಿದ್ದರು. ಅಲ್ಲದೇ ಬೆಂಗಳೂರು ದಕ್ಷಿಣ, ಪಶ್ಚಿಮ ಮತ್ತು ಉತ್ತರ ಭಾಗದಲ್ಲಿ ಸ್ಥಳಗಳನ್ನು ಗುರುತಿಸಲಾಗಿದ್ದು, ರಾಜಧಾನಿಗೆ ಸನಿಹದಲ್ಲೇ 2ನೇ ವಿಮಾನ ನಿಲ್ದಾಣ ನಿರ್ಮಿಸಲಾಗುವುದು ಎಂದು ಹೇಳಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+