Bengaluru 2nd Airport: ಬೆಂಗಳೂರು ವಿಮಾನ ನಿಲ್ದಾಣ: ಫೈನಲ್ ಲಿಸ್ಟ್‌ನಲ್ಲಿವೆ 4 ಜಾಗ, ಯಾವುದು ನೋಡಿ!
Bengaluru 2nd Airport: ಬೆಂಗಳೂರಿನ ಎರಡನೇ ವಿಮಾನ ನಿಲ್ದಾಣಕ್ಕೆ ಸಂಬಂಧಿಸಿದಂತೆ ಹೊಸ ಅಪ್‌ಡೇಟ್ ಬಂದಿದೆ. ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಮೇಲೆ ಮುಂದಿನ ದಿನಗಳಲ್ಲಿ ಒತ್ತಡ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಪರ್ಯಾಯ ವಿಮಾನ ನಿಲ್ದಾಣ ನಿರ್ಮಾಣ ಮಾಡಲು ರಾಜ್ಯ ಕಾಂಗ್ರೆಸ್ ಸರ್ಕಾರ ಮುಂದಾಗಿದೆ. ಬೃಹತ್ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್ ಅವರು ಎರಡನೇ ವಿಮಾನ ನಿಲ್ದಾಣ ನಿರ್ಮಾಣದ ಬಗ್ಗೆ ಮಹತ್ವದ ಮಾಹಿತಿಯೊಂದನ್ನು ಹಂಚಿಕೊಂಡಿದ್ದಾರೆ. ಬೆಂಗಳೂರಿನ ಎರಡನೇ ವಿಮಾನ ನಿಲ್ದಾಣದ ಜಾಗವನ್ನು ಸಂಪೂರ್ಣವಾಗಿ ಅಹರ್ತೆಯ ಆಧಾರದ ಮೇಲೆ ಮಾತ್ರ ಅಂತಿಮಗೊಳಿಸುವುದಾಗಿ ಅವರು ಹೇಳಿದ್ದು, ಎಲ್ಲಾ ಚರ್ಚೆಗಳಿಗೂ ಬ್ರೇಕ್ ಹಾಕಿದ್ದಾರೆ. ಬೆಂಗಳೂರಿನ ಎರಡನೇ ವಿಮಾನ ನಿಲ್ದಾಣವನ್ನ, ನೆಲಮಂಗಲ ಅಥವಾ ತುಮಕೂರು ಇಲ್ಲವೇ ದಾಬಸ್‌ಪೇಟೆಯಲ್ಲಿ ವಿಮಾನ ನಿಲ್ದಾಣ ನಿರ್ಮಾಣದ ಬಗ್ಗೆ ಚರ್ಚೆ ನಡೆದಿದೆ ಎನ್ನಲಾಗಿತ್ತು. ಇದೀಗ ನಾಲ್ಕು ಪ್ರಮುಖ ಜಾಗದ ಬಗ್ಗೆ ಚರ್ಚಿಸಲಾಗಿದೆ ಎಂದು ಸರ್ಕಾರ ತಿಳಿಸಿದೆ.
ವಿಮಾನ ನಿಲ್ದಾಣ ನಿರ್ಮಾಣವಾಗಲಿದೆ ಎನ್ನುವ ವಿಷಯ ಪ್ರಸ್ತಾವವಾಗುತ್ತಿದ್ದಂತೆಯೇ ಕರ್ನಾಟಕದ ವಿವಿಧ ಭಾಗದ ರಾಜಕಾರಣಿಗಳು ಲಾಭಿ ಶುರು ಮಾಡಿಕೊಂಡಿದ್ದರು. ವಿಮಾನ ನಿಲ್ದಾಣವನ್ನು ತುಮಕೂರಿನಲ್ಲೇ ಪ್ರಾರಂಭಿಸಬೇಕು ಎನ್ನುವ ಆಗ್ರಹ ಜೋರಾಗಿತ್ತು. ಬೆಂಗಳೂರು ಅಥವಾ ದಕ್ಷಿಣ ಕರ್ನಾಟಕದ ಕೆಲವು ನಿರ್ದಿಷ್ಟ ಜಿಲ್ಲೆಗಳಲ್ಲಿ ವಿಮಾನ ನಿಲ್ದಾಣ ನಿರ್ಮಾಣ ಮಾಡುವುದರಿಂದ ಕರ್ನಾಟಕಕ್ಕಿಂತ ತಮಿಳುನಾಡು ಹಾಗೂ ಆಂಧ್ರಪ್ರದೇಶ ರಾಜ್ಯಗಳಿಗೆ ಹೆಚ್ಚು ಅನುಕೂಲ ಆಗಲಿದೆ. ಹೀಗಾಗಿ, ಎರಡನೇ ವಿಮಾನ ನಿಲ್ದಾಣವನ್ನು ಉತ್ತರ ಕರ್ನಾಟಕ ಭಾಗದಲ್ಲಿ ನಿರ್ಮಾಣ ಮಾಡಬೇಕು. ಆಗ ಕನ್ನಡಿಗರಿಗೆ ಹಾಗೂ ಕರ್ನಾಟಕದ ಸರ್ವತೋಮುಖ ಅಭಿವೃದ್ಧಿಗೆ ಸಹಕಾರಿಯಾಗಲಿದೆ ಎನ್ನುವ ಅಭಿಪ್ರಾಯವೂ ಕೇಳಿ ಬಂದಿತ್ತು. ಈ ಗೊಂದಲಗಳ ನಡುವೆಯೇ ಇದೀಗ ಎರಡನೇ ವಿಮಾನ ನಿಲ್ದಾಣ ನಿರ್ಮಾಣದ ಬಗ್ಗೆ ಬಿಗ್ ಅಪ್‌ಡೇಟ್ ಬಂದಿದೆ.

ವಿಮಾನ ನಿಲ್ದಾಣ ನಿರ್ಮಾಣ ವಿಚಾರದಲ್ಲಿ ರಾಜಿಯಾಗುವುದಿಲ್ಲ. ಈ ಯೋಜನಗೆ ಅರ್ಹತೆಯೇ ಮುಖ್ಯ ಮಾನದಂಡವಾಗಲಿದೆ. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರವು ಬೆಂಗಳೂರಿನ ಎರಡನೇ ವಿಮಾನ ನಿಲ್ದಾಣ ಎಲ್ಲಿ ನಿರ್ಮಾಣವಾಗಬೇಕು ಎನ್ನುವುದನ್ನು ಸಾಧ್ಯವಾಷ್ಟು ಬೇಗ ತೀರ್ಮಾನಿಸಲಿದೆ. ಪ್ರಸ್ತಾವನೆಯನ್ನು ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರಕ್ಕೆ ತಿಳಿಸಲಿದೆ ಎಂದು ಎಂ.ಬಿ ಪಾಟೀಲ್ ಅವರು ಮಾಹಿತಿ ನೀಡಿದ್ದಾರೆ.
ಬೆಂಗಳೂರಿಗೆ ಹತ್ತಿರದಲ್ಲಿ ಇರಲಿದೆ
ಎರಡನೇ ವಿಮಾನ ನಿಲ್ದಾಣವು ಎಲ್ಲಿ ಇರಲಿದೆ ಎನ್ನುವುದು ಸಾಕಷ್ಟು ಕುತೂಹಲ ಹಾಗೂ ಗೊಂದಲಗಳಿಗೆ ಕಾರಣವಾಗಿತ್ತು. ಬೆಂಗಳೂರಿನಿಂದ ದೂರುವಿದ್ದರೆ ಏನು ಎನ್ನುವ ಲೆಕ್ಕಾಚಾರಗಳು ಜೋರಾಗಿತ್ತು. ಇದೀಗ ಬೆಂಗಳೂರಿನ ಹೊಸ ವಿಮಾನ ನಿಲ್ದಾಣವನ್ನು ಬೆಂಗಳೂರಿಗೆ ಹತ್ತಿರದಲ್ಲೇ ನಿರ್ಮಿಸಲು ಉದ್ದೇಶಿಸಲಾಗಿದೆ. ಇದರಲ್ಲಿ ಯಾವುದೇ ವ್ಯತ್ಯಾಸವಿರುವುದಿಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿದೆ. ಹೊಸ ವಿಮಾನ ನಿಲ್ದಾಣವು ಬೆಂಗಳೂರು ನಗರಕ್ಕೆ ಹತ್ತಿರದಲ್ಲಿದ್ದರೆ, ಜನರು ಬರುತ್ತಾರೆ ಎಂದು ಸಚಿವ ಎಂ.ಬಿ ಪಾಟೀಲ್ ತಿಳಿಸಿದ್ದಾರೆ.
ತುಮಕೂರು, ವಿಜಯಪುರ, ಹುಬ್ಬಳ್ಳಿ ಹಾಗೂ ಬೆಳಗಾವಿ ಜಿಲ್ಲೆಗಳ ವಿಮಾನ ನಿಲ್ದಾಣಗಳು ವಿಭಿನ್ನವಾಗಿವೆ. ಈ ವಿಮಾನ ನಿಲ್ದಾಣವು ಬೆಂಗಳೂರಿಗೆ ಸಂಬಂಧಿಸಿದೆ. ಅಲ್ಲದೆ ಇದು ಬೆಂಗಳೂರು ಹಾಗೂ ಕರ್ನಾಟಕದ ಸರ್ವತೋಮುಖ ಅಭಿವೃದ್ಧಿಗೂ ಸಂಬಂಧಿಸಿದ್ದು ಎಂದಿದ್ದಾರೆ.
ನಾಲ್ಕೈದು ಜಾಗಗಳ ಬಗ್ಗೆ ಚರ್ಚೆ: ಬೆಂಗಳೂರಿನ ಎರಡನೇ ವಿಮಾನ ನಿಲ್ದಾಣಕ್ಕೆ ಸಂಬಂಧಿಸಿದಂತೆ ನಾಲ್ಕೈದು ಜಾಗಗಳನ್ನು ಗುರುತಿಸಿರುವುದಾಗಿ ಸರ್ಕಾರ ಹೇಳಿದೆ. ಅದರಲ್ಲಿ ದಾಬಸ್‌ಪೇಟೆ, ನೆಲಮಂಗಲ, ಬಿಡದಿ ಹಾಗೂ ಹಾರೋಹಳ್ಳಿ ಸ್ಥಳಗಳು ಈ ಹಿಂದೆ ಚರ್ಚಿಸಲಾಗಿರುವ ಸ್ಥಳಗಳಾಗಿವೆೆ ಎಂದು ಎಂ.ಬಿ ಪಾಟೀಲ್ ಅವರು ಹೇಳಿದ್ದಾರೆ. ಈ ಮೂಲಕ ಬೆಂಗಳೂರಿನ ಸಮೀಪದಲ್ಲೇ ಎರಡನೇ ವಿಮಾನ ನಿಲ್ದಾಣ ನಿರ್ಮಾಣವಾಗಲಿದೆ ಎಂದು ಹೇಳಲಾಗಿದೆ.
ಉದ್ದೇಶಿತ ಯೋಜನೆಗೆ ಸಂಬಂಧಿಸಿದಂತೆ ಎಲ್ಲಾ ಸಾಧಕ - ಬಾಧಕಗಳನ್ನು ಪರಿಗಣಿಸಿ ಬೆಂಗಳೂರಿನ ಹಿತಾಸಕ್ತಿಗಾಗಿ ಅನುಗುಣವಾಗಿ ತೀರ್ಮಾನ ತೆಗೆದುಕೊಳ್ಳಲಾಗುವುದು. ಉದ್ದೇಶಿತ ಪ್ರಸ್ತಾವನೆಯನ್ನು ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರಕ್ಕೆ ಕಳುಹಿಸಲಿದ್ದೇವೆ. ನಾಲ್ಕೈದು ಸ್ಥಳಗಳ ಬಗ್ಗೆ ಚರ್ಚೆಯಾಗಿದೆ. ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಚರ್ಚೆ ಮಾಡಿ ಅಂತಿಮ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಎಂ.ಬಿ ಪಾಟೀಲ್ ಹೇಳಿದ್ದಾರೆ.












Click it and Unblock the Notifications