Bengaluru 2nd Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣ: ಸರ್ಕಾರದಿಂದ ಬಿಗ್‌ ಅಪ್ಡೇಟ್‌!

Bengaluru 2nd Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣ ನಿರ್ಮಾಣದ ಸಂಬಂಧ ಸರ್ಕಾರದ ಮಟ್ಟದಲ್ಲಿ ಮಹತ್ವದ ಬೆಳವಣಿಗೆಗಳು ನಡೆದಿವೆ. ಬೆಂಗಳೂರಿನ ಎರಡನೇ ವಿಮಾನ ನಿಲ್ದಾಣ ನಿರ್ಮಾಣ ಮಾಡುವುದಕ್ಕೆ ರಾಜ್ಯ ಸರ್ಕಾರ ಮುಂದಾಗಿದೆ. ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಮೇಲೆ ಒತ್ತಡ ಹೆಚ್ಚಳವಾಗುತ್ತಿದ್ದು. ಮುಂದಿನ ದಿನಗಳಲ್ಲಿ ಇನ್ನಷ್ಟು ಹೆಚ್ಚಳವಾಗಲಿದೆ ಎಂದು ಅಂದಾಜಿಸಲಾಗಿದೆ. ಆದರೆ ಕರ್ನಾಟಕ ಸರ್ಕಾರ ಯೋಜನೆಯ ನಡುವೆಯೇ ತಮಿಳುನಾಡು ಸರ್ಕಾರವೂ ಕರ್ನಾಟಕ ಸರ್ಕಾರಕ್ಕೆ ಟಕ್ಕರ್‌ ಕೊಡುತ್ತಿದೆ. ಇದರ ಬೆನ್ನಲ್ಲೇ ರಾಜ್ಯ ಸರ್ಕಾರ ಸಹ ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಬಗ್ಗೆ ಅಲರ್ಟ್‌ ಆಗಿದೆ. ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಬಗ್ಗೆ ರಾಜ್ಯ ಸರ್ಕಾರದಿಂದ ಬಿಗ್‌ಅಪ್‌ಡೇಟ್‌ವೊಂದು ಬಂದಿದೆ.

ಬೆಂಗಳೂರು ಎರಡನೇ ವಿಮಾನ ನಿಲ್ದಾಣ ನಿರ್ಮಾಣದ ಬಗ್ಗೆ ರಾಜ್ಯ ಸರ್ಕಾರ ಸೈಲೆಂಟ್‌ ಆಗಿದೆ ಎನ್ನುವ ಆರೋಪಗಳ ನಡುವೆಯೇ ಬೆಂಗಳೂರು ಎರಡನೇ ವಿಮಾನ ನಿಲ್ದಾಣ ನಿರ್ಮಾಣದ ಬಗ್ಗೆ ಬಿಗ್‌ ಅಪ್‌ಡೇಟ್‌ವೊಂದು ಬಂದಿದೆ. ಬೆಂಗಳೂರು ವಿಮಾನ ನಿಲ್ದಾಣಕ್ಕೆ 4ರಿಂದ 5 ಜಾಗಗಳನ್ನು ಅಂತಿಮ ಮಾಡಲಾಗಿದೆ ಎಂದು ಹೇಳಲಾಗುತ್ತಿದೆ.

ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಗೃಹ ಸಚಿವ ಜಿ ಪರಮೇಶ್ವರ್ ಅವರು ಮಾಹಿತಿ ಹಂಚಿಕೊಂಡಿದ್ದಾರೆ. ತುಮಕೂರಿನಲ್ಲೇ ಬೆಂಗಳೂರು ಎರಡನೇ ವಿಮಾನ ನಿಲ್ದಾಣ ನಿರ್ಮಾಣವಾಗಲಿದ್ದು. ಇದಕ್ಕೆ ಪಕ್ಷಾತೀತ ಬೆಂಬಲ ವ್ಯಕ್ತವಾಗಿದೆ. ಅಲ್ಲದೆ ತುಮಕೂರಿನಲ್ಲಿ ಬೆಂಗಳೂರಿನ ಎರಡನೇ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಜಾಗ ಸಹ ನಿಗದಿ ಮಾಡಲಾಗಿದೆ ಅಂತ ಅವರು ಹೇಳಿದ್ದಾರೆ. ಅದರ ವಿವರ ಇಲ್ಲಿದೆ.

Bengaluru 2nd Airport Important Discussion on Construction of Airport in Tumkur

ವಿಮಾನ ನಿಲ್ದಾಣ ನಿರ್ಮಾಣಕ್ಕೆ ನೆಲಮಂಗಲ - ತುಮಕೂರು ಸೇರಿದಂತೆ ನಾಲ್ಕರಿಂದ ಐದು ಜಾಗಗಳನ್ನು ಗುರುತಿಸಲಾಗಿದೆ. ಆದರೆ ಯಾವುದೇ ಜಾಗವನ್ನು ಸಹ ಸರ್ಕಾರ ಅಂತಿಮ ಮಾಡಿಲ್ಲ. ಈ ನಡುವೆ ಬಿಡದಿ ಹಾಗೂ ತುಮಕೂರಿನಲ್ಲಿ ವಿಮಾನ ನಿಲ್ದಾಣದ ಬಗ್ಗೆ ಸರ್ಕಾರದಲ್ಲಿ ಮಹತ್ವದ ಚರ್ಚೆಗಳು ನಡೆದಿವೆ ಎಂದು ಹೇಳಲಾಗುತ್ತಿದೆ.

ಇದೀಗ ಬೆಂಗಳೂರು ಎರಡನೇ ವಿಮಾನ ನಿಲ್ದಾಣವನ್ನು ತುಮಕೂರಿನಲ್ಲೇ ನಿರ್ಮಿಸುವುದಕ್ಕೆ ಐಟಿಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಪತ್ರ ಬರೆದಿರುವುದಾಗಿ ಗೃಹ ಸಚಿವ ಜಿ ಪರಮೇಶ್ವರ್ ಅವರು ಹೇಳಿದ್ದಾರೆ. ತುಮಕೂರಿನಲ್ಲಿ ಜಾಗ ನಿಗದಿ ಮಾಡಿರುವುದಾಗಿಯೂ ಅವರು ಹೇಳಿದ್ದಾರೆ.

ಬೆಂಗಳೂರಿನ / ರಾಜ್ಯದ ಎರಡನೇ ಅಂತರಾಷ್ಟ್ರೀಯ ವಿಮಾನ ನಿಲ್ದಾಣವನ್ನು ತುಮಕೂರಿನಲ್ಲಿ ನಿರ್ಮಿಸಬೇಕು. ಇಲ್ಲವೇ ತುಮಕೂರಿನ ಸುತ್ತಮುತ್ತ ಯಾವುದಾರೂ ಪ್ರದೇಶದಲ್ಲಿ ನಿರ್ಮಿಸಬೇಕು ಎಂದು ಒತ್ತಾಯಿಸಲಾಗಿದೆ. ಇನ್ನು ಎರಡನೇ ವಿಮಾನ ನಿಲ್ದಾಣ ನಿರ್ಮಾಣ ಮಾಡುವುದಕ್ಕೆ ಈಗಾಗಲೇ ಜಾಗ ಸಹ ನಿಗದಿ ಮಾಡಲಾಗಿದೆ. ತುಮಕೂರಿನ ವಸಂತ ನರಸಾಪುರ ಕೈಗಾರಿಕಾ ಪ್ರದೇಶ ವ್ಯಾಪ್ತಿ ಹಾಗೂ ರಾಷ್ಟ್ರೀಯ ಹೆದ್ದಾರಿ 48ರ ಸಮೀಪದಲ್ಲಿರುವ 3,000 ಸಾವಿರ ಎಕರೆ ಮತ್ತು ಶಿರಾ ತಾಲ್ಲೂಕಿನ ಸೀಬಿ ದೇವಸ್ಥಾನ ಮಾರ್ಗದಲ್ಲಿ 5000 ಎಕರೆ ಜಾಗವನ್ನು ಈಗಾಗಲೇ ಗುರುತಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಇನ್ನು ತುಮಕೂರಿನಲ್ಲೇ ಎರಡನೇ ವಿಮಾನ ನಿಲ್ದಾಣ ನಿರ್ಮಾಣ ಮಾಡಬೇಕು ಎನ್ನುವುದಕ್ಕೆ ಸಂಬಂಧಿಸಿದಂತೆ ತುಮಕೂರಿನ ಎಲ್ಲಾ ಶಾಸಕರು ಹಾಗೂ ಸಂಸದರು ಪಕ್ಷಾತೀತವಾಗಿ ಸರ್ಕಾರ ಮೇಲೆ ಒತ್ತಾಡ ಹೇರುವುದಕ್ಕೆ ಮುಂದಾಗಿರುವುದಾಗಿಯೂ ಹೇಳಲಾಗಿದೆ. ಅಲ್ಲದೆ ಕೇಂದ್ರ ಸಚಿವ ವಿ ಸೋಮಣ್ಣ ಅವರು ತುಮಕೂರಿನಲ್ಲಿ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಒತ್ತಾಯಿಸಿದ್ದಾರೆ.

ಬೆಂಗಳೂರಿನಲ್ಲಿ ಎರಡನೇ ವಿಮಾನ ನಿಲ್ದಾಣ ನಿರ್ಮಾಣ ಮಾಡುವುದಕ್ಕೆ ಭರ್ಜರಿ ಸಿದ್ಧತೆ ನಡೆದಿದೆ. ಆದರೆ ಎಲ್ಲಿ ವಿಮಾನ ನಿಲ್ದಾಣ ನಿರ್ಮಾಣವಾಗಲಿದೆ ಎನ್ನುವುದನ್ನು ರಾಜ್ಯ ಸರ್ಕಾರ ಇನ್ನೂ ಅಂತಿಮ ಮಾಡಿಲ್ಲ. ಈ ನಡುವೆ ತಮಿಳುನಾಡು ಸರ್ಕಾರವು ಭರ್ಜರಿ ಸಿದ್ಧತೆ ಮಾಡಿಕೊಂಡಿದೆ.

ಈ ನಡುವೆ ರಾಜ್ಯದ ಎರಡನೇ ವಿಮಾನ ನಿಲ್ದಾಣವನ್ನು ತುಮಕೂರಿನಲ್ಲಿ ಮಾಡಬೇಕು ಎಂದು ಗೃಹ ಸಚಿವ ಡಾ ಜಿ.ಪರಮೇಶ್ವರ್‌ ಅವರು ಮತ್ತೊಮ್ಮೆ ಒತ್ತಾಯಿಸಿದ್ದಾರೆ. ತುಮಕೂರಿನಲ್ಲೇ ಯಾಕೆ ಎರಡನೇ ವಿಮಾನ ನಿಲ್ದಾಣ ನಿರ್ಮಾಣ ಮಾಡಬೇಕು ಎನ್ನುವುದಕ್ಕೆ ಕಾರಣವನ್ನೂ ಅವರು ಕೊಟ್ಟಿದ್ದಾರೆ. ತುಮಕೂರಿನಲ್ಲಿ ಎರಡನೇ ವಿಮಾನ ನಿಲ್ದಾಣವನ್ನು ನಿರ್ಮಾಣ ಮಾಡುವುದರಿಂದಾಗಿ ಅಂದಾಜು 20ಕ್ಕೂ ಹೆಚ್ಚು ಜಿಲ್ಲೆಗಳಿಗೆ ಅನುಕೂಲವಾಗಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+