Bengaluru 2nd Airport: ವಿಮಾನ ನಿಲ್ದಾಣ: 2 ಜಾಗ ಅಂತಿಮ ಎಂದ ಸಚಿವ ಎಂ.ಬಿ ಪಾಟೀಲ್!

Bengaluru 2nd Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಸಂಬಂಧಿಸಿದಂತೆ ಮತ್ತೊಂದು ಬಿಗ್‌ ಹಾಗೂ ಹೊಸ ಅಪ್ಡೇಟ್‌ ಬಂದಿದೆ. ಬೆಂಗಳೂರು ಹಾಗೂ ರಾಜ್ಯದ ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಎರಡು ಜಾಗಗಳನ್ನು ಅಂತಿಮ ಮಾಡಲಾಗಿದೆ. ಇದೇ ಜಾಗಗಳನ್ನು ನಾವು ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರಕ್ಕೆ ಫೆಬ್ರವರಿಯಲ್ಲೇ ಕಳುಹಿಸಲಿದ್ದೇವೆ ಎಂದು ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ ಹೇಳಿದ್ದಾರೆ. ಈ ಮೂಲಕ ಬೆಂಗಳೂರು ವಿಮಾನ ನಿಲ್ದಾಣದ ವಿಷಯ ಕೊನೆಗೂ ಮೊದಲ ಹಂತವನ್ನು ದಾಟಿದೆ. ಕಳೆದ ಆರು ತಿಂಗಳಿನಿಂದಲೂ ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಬಗ್ಗೆ ಜೋರು ಚರ್ಚೆಗಳು ನಡೆದಿದ್ದವು. ಆದರೆ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಕರ್ನಾಟಕ ಸರ್ಕಾರ ಜಾಗಗಳನ್ನು ಶಾರ್ಟ್‌ ಲಿಸ್ಟ್‌ ಮಾಡಿರಲಿಲ್ಲ. ಇದೀಗ ಕೊನೆಗೂ ಎರಡು ಜಾಗಗಳನ್ನು ಶಾರ್ಟ್‌ ಲಿಸ್ಟ್‌ ಮಾಡಿದೆ. ಎಲ್ಲೆಲ್ಲಿ ಎನ್ನುವ ವಿವರ ಇಲ್ಲಿದೆ.

ಬೆಂಗಳೂರಿನ ಎರಡನೇ ವಿಮಾನ ನಿಲ್ದಾಣದ ಕನಸು ಕೊನೆಗೂ ಈಡೇರುವುದಕ್ಕೆ ಮೊದಲ ಹಂತವನ್ನು ತಲುಪಿದೆ. ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಮೇಲೆ ಒತ್ತಡ ಹೆಚ್ಚಳವಾಗಲಿದೆ ಎಂದು ಅಂದಾಜಿಸಲಾಗಿದೆ. ಹೀಗಾಗಿ, ಮುಂದಿನ ದಿನಗಳಲ್ಲಿ ಮತ್ತೊಂದು ವಿಮಾನ ನಿಲ್ದಾಣದ ಅವಶ್ಯಕತೆ ಇದೆ. ಹೀಗಾಗಿ, ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಬೇಡಿಕೆ ಹೆಚ್ಚಾಗಿದೆ.

Bengaluru 2nd Airport Minister MB Patil Says 2 Sites are Final

ಈ ಸಂಬಂಧ ಮಾತನಾಡಿರುವ ಸಚಿವ ಎಂ. ಬಿ ಪಾಟೀಲ್ ಅವರು, ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಸಿದ್ಧತೆ ಮಾಡಿಕೊಳ್ಳಲಾಗಿದ್ದು. ಎರಡು ಜಾಗಗಳನ್ನು ಶಾರ್ಟ್‌ ಲಿಸ್ಟ್‌ ಮಾಡಲಾಗಿದೆ. ಇದೇ ಜಾಗಗಳನ್ನು ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಲಿದ್ದೇವೆ ಎಂದಿದ್ದಾರೆ. ಮುಂದುವರಿದು ದೇವನಹಳ್ಳಿಯಲ್ಲಿರುವ ಬೆಂಗಳೂರು ಅಂತರರಾಷ್ಟ್ರೀಯ ಕೆಂಪೇಗೌಡ ವಿಮಾನ ನಿಲ್ದಾಣದಿಂದ 150 ಕಿ.ಮೀ. ವ್ಯಾಪ್ತಿಯಲ್ಲಿ 2033ರವರೆಗೆ ಯಾವುದೇ ಹೊಸ ವಿಮಾನ ನಿಲ್ದಾಣ ನಿರ್ಮಾಣ ಮಾಡಲು ಸಾಧ್ಯವಿಲ್ಲ.

ಈ ಸಂಬಂಧ ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಲಿ. ಹಾಗೂ ಕೇಂದ್ರ ಸರ್ಕಾರದ ನಡುವೆ ಒಪ್ಪಂದ ಆಗಿದೆ. ಆದರೆ ಹೊಸ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಅನುಮತಿ, ಭೂಸ್ವಾಧೀನ ಹಾಗೂ ವಿಮಾನ ನಿಲ್ದಾಣ ಕಾಮಗಾರಿ ಸೇರಿದಂತೆ ವಿವಿಧ ಕೆಲಸಗಳಿಗೆ ಸಾಕಷ್ಟು ಸಮಯ ಬೇಕಾಗುತ್ತದೆ. ಈಗ ಆ ಪ್ರಕ್ರಿಯೆಗಳನ್ನು ಶುರು ಮಾಡಿಕೊಂಡರೆ 2033ರ ವೇಳೆಗೆ ವಿಮಾನ ನಿಲ್ದಾಣದ ಕಾರ್ಯಾಚರಣೆ ಪ್ರಾರಂಭಿಸಬಹುದು. ಹೀಗಾಗಿ, ಕರ್ನಾಟಕ ಸರ್ಕಾರ ಈ ನಿಟ್ಟಿನಲ್ಲಿ ಕಾರ್ಯಪ್ರವೃತ್ತವಾಗಿದ್ದು. ಜಾಗ ಗುರುತಿಸುವ ಕೆಲಸವನ್ನು ಮಾಡಲಾಗಿದೆ ಎಂದಿದ್ದಾರೆ.

ಏಳು ಪ್ರಾಥಮಿಕ ಸ್ಥಳ: ಬೆಂಗಳೂರು ವಿಮಾನ ನಿಲ್ದಾಣ ನಿರ್ಮಾಣಕ್ಕೆ ಒಟ್ಟು ಏಳು ಜಾಗಗಳನ್ನು ಮೊದಲು ಶಾರ್ಟ್‌ ಲಿಸ್ಟ್‌ ಮಾಡಲಾಗಿತ್ತು. ಈ ಏಳು ಜಾಗಗಳನ್ನು ಬೆಂಗಳೂರಿನ ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಶಾರ್ಟ್‌ ಲಿಸ್ಟ್‌ ಮಾಡಲಾಗಿತ್ತು. ಅಂತಿಮವಾಗಿ ನೆಲಮಂಗಲ ಹಾಗೂ ಕನಕಪುರ ರಸ್ತೆಯ ಸಮೀಪದಲ್ಲಿನ ಜಾಗಗಳನ್ನು ಶಾರ್ಟ್‌ ಲಿಸ್ಟ್‌ ಮಾಡಲಾಗಿದೆ ಎಂದು ಹೇಳಲಾಗಿದೆ.

ಇನ್ನು ಬೆಂಗಳೂರಿನ ಎರಡನೇ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಸೂಕ್ತ ಜಾಗವನ್ನು ಗುರುತಿಸಲಾಗುವುದು. ಅದು ಬೆಂಗಳೂರಿನಿಂದ ತುಂಬಾ ದೂರ ಇರಬಾರದು ಎಂದು ನೋಡಲಾಗುತ್ತಿದೆ ಎಂದು ಈ ಹಿಂದೆಯೇ ಎಂ.ಬಿ ಪಾಟೀಲ ಅವರು ಹೇಳಿದ್ದರು. ಅದರಂತೆ ಬೆಂಗಳೂರಿಂದ 50 ಕಿ.ಮೀಗೂ ಹೆಚ್ಚು ದೂರ ಇರದಂತೆ ಇದೀಗ ಸರ್ಕಾರ ನಿರ್ಧಾರ ಮಾಡಿದೆ.

ಉದ್ಯಮಿಗಳು, ಪ್ರವಾಸಿಗರು ಹಾಗೂ ಸಾರ್ವಜನಿಕರಿಗೆ ಅನುಕೂಲವಾಗುವ ಸ್ಥಳದಲ್ಲೇ ವಿಮಾನ ನಿಲ್ದಾಣ ನಿರ್ಮಿಸಬೇಕು ಎಂದು ಸರ್ಕಾರ ತೀರ್ಮಾನಿಸಿದೆ. ಅಲ್ಲದೆ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಹೂಡಿಕೆ ಮಾಡುವ ಕಂಪನಿಗೆ ಸಹ ಅನುಕೂಲವಾಗಬೇಕು ಎಂದು ಅವರು ಹೇಳಿದ್ದಾರೆ.

ಬೆಂಗಳೂರಲ್ಲಿ ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಿಸುವ ಬಗ್ಗೆ ನಮ್ಮಲ್ಲಿ ಯಾವುದೇ ಗೊಂದಲಗಳು ಇಲ್ಲ. ನಾವು ನಾಲ್ಕು ಸಂಭವನೀಯ ಸ್ಥಳಗಳನ್ನು ಗುರುತಿಸಿಲಾಗಿತ್ತು. ಇದೀಗ ಎರಡನ್ನು ಅಂತಿಮಗೊಳಿಸಿದ್ದೇವೆ. ಯಾವುದೇ ಸ್ಥಳವನ್ನು ಆಯ್ಕೆ ಮಾಡಿದರೂ, ರಾಜ್ಯದ ಜನತೆ ಮತ್ತು ವಾಣಿಜ್ಯ ವ್ಯವಹಾರದ ಹಿತಾಸಕ್ತಿಗಳನ್ನು ಗಮನದಲ್ಲಿರಿಸಿಕೊಂಡು ನಿರ್ಣಯ ಕೈಗೊಳ್ಳುತ್ತೇವೆ. ಇದರಲ್ಲಿ ಯಾವುದೇ ರಾಜಕೀಯ ಧೋರಣೆ ಇರದು, ಎಲ್ಲವೂ ಪಾರದರ್ಶಕವಾಗಿ ಇರಲಿದೆ ಎಂದು ಎಂ.ಬಿ ಪಾಟೀಲ ಅವರು ಹೇಳಿದ್ದಾರೆ.

ಬೆಂಗಳೂರು ವಿಮಾನ ನಿಲ್ದಾಣಕ್ಕೆ ಮೂರು ಜಾಗಗಳನ್ನು ಅಂತಿಮ ಮಾಡಿರುವುದಾಗಿ ಉಪ ಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ ಶಿವಕುಮಾರ್‌ ಅವರು ಹೇಳಿದ್ದರು. ಇದೀಗ ಎಂ.ಬಿ ಪಾಟೀಲ್‌ ಅವರು ಎರಡು ಜಾಗಗಳನ್ನು ಅಂತಿಮ ಮಾಡಿರುವುದಾಗಿ ಹೇಳಿದ್ದಾರೆ. ಈ ನಿಟ್ಟಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಇನ್ನೊಂದು ಸುತ್ತಿನ ಸಭೆ ನಡೆಯುವ ಸಾಧ್ಯತೆಯೂ ಇದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+