Bengaluru 2nd Airport: ಬೆಂಗಳೂರು 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ವಿ.ಸೋಮಣ್ಣ ಗುರುತಿಸಿದ ಎರಡು ಸ್ಥಳಗಳು
Bengaluru 2nd Airport: ಬೆಂಗಳೂರಿನಲ್ಲಿ ಈಗಾಗಲೇ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಇದೆ. ಇದು ಎರಡು ಟರ್ಮಿನಲ್‌ಗಳನ್ನು ಹೊಂದಿದ್ದು, ಎರಡನೇಯದು ವಿಶ್ವದ ಅತ್ಯಂತ ಸುಂದರ ಟರ್ಮಿನಲ್ ಎಂಬ ಹೆಗ್ಗಳಿಕೆ ಪಡೆದುಕೊಂಡಿದೆ. ಇಷ್ಟೆಲ್ಲ ಸ್ಥಳವಕಾಶ ಇದ್ದರೂ ಕೂಡ ಇಲ್ಲಿ ಪ್ರಯಾಣಿಕರ ದಟ್ಟಣೆ ಮಾತ್ರ ಹೆಚ್ಚಾಗುತ್ತಲೇ ಇದೆ. ಈ ಹಿನ್ನೆಲೆ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಸರ್ಕಾರ ಮುಂದಾಗಿದೆ.
ಬೆಂಗಳೂರು ವಿಮಾನ ನಿಲ್ದಾಣಕ್ಕೆ ಈಗಾಗಲೇ ರಾಮನಗರ, ಬಿಡದಿ, ನೆಲಮಂಗಲ, ತುಮಕೂರಿನ ಬಳಿ ಸ್ಥಳ ಗುರುತು ಮಾಡಲಾಗಿತ್ತು. ಆದರೆ ಇನ್ನೂ ಸ್ಥಳ ನಿಗದಿ ಬಗ್ಗೆ ಫೈನಲ್ ಆಗಿಲ್ಲ. ಈಗಾಗಲೇ ನೆಲಮಂಗಲದಲ್ಲಿ ಸರ್ವೇ ಕಾರ್ಯ ನಡೆಸಲಾಗಿತ್ತು ಎಂದು ತಿಳಿದುಬಂದ ತಕ್ಷಣವೇ ಆ ಭಾಗದ ರೈತರು ಇದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ಅಷ್ಟೇ ಸಾಲದೆಂಬಂತೆ ಬಳಿಕ ಹೊಸೂರು ಬಳಿ ವಿಮಾನ ನಿಲ್ದಾಣ ನಿರ್ಮಾಣಕ್ಕೂ ಅಲ್ಲಿನ ಜನರು ವಿರೋಧ ವ್ಯಕ್ತಪಡಿಸಿದ್ದರು.

ಈ ಎಲ್ಲದರ ನಡುವೆ ತುಮಕೂರಿನಲ್ಲಿ ಬೆಂಗಳೂರಿನ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಮಾಡಿ. ಇದರಿಂದ ತುಂಬಾ ಜನರಿಗೆ ಉದ್ಯೋಗ ಸಿಕ್ಕಂತಾಗಲಿದೆ. ಅದರಲ್ಲೂ ಉತ್ತರ ಕರ್ನಾಟಕ ಭಾಗದವರಿಗೆ ಹೆಚ್ಚು ಸಹಾಯ ಆಗಲಿದೆ ಎಂದು ಜಿ.ಪರಮೇಶ್ವರ್ ಸೇರಿದಂತೆ ಹಲವರು ಸರ್ಕಾರಕ್ಕೆ ಮನವಿ ಮಾಡಿಕೊಳ್ಳುತ್ತಲೇ ಬಂದಿದ್ದಾರೆ. ಆದರೆ, ಸರ್ಕಾರ ಮಾತ್ರ ಇದಕ್ಕೆ ಯಾವುದೇ ಪ್ರತಿಕ್ರಿಯೇ ನೀಡದೇ ಹಿಂದೇಟು ಹಾಕುತ್ತಲೇ ಇದೆ.
ಬದಲಾಗಿ ಹೊಸೂರು ಇಲ್ಲ ನೆಲಮಂಗಲ ಬಳಿ ವಿಮಾನ ನಿಲ್ದಾಣ ನಿರ್ಮಾಣ ಮಾಡಲು ತುದಿಗಾಲಲ್ಲಿ ನಿಂತಿದೆ. ಆದರೆ ಈ ಭಾಗದ ಜನರು ಮಾತ್ರ ಇದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಇದರ ನಡುವೆಯೇ ಸಚಿವ ವಿ.ಸೋಮಣ್ಣ ಅವರು ವಿಮಾನ ನಿಲ್ದಾಣ ನರ್ಮಾಣದ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ಹಾಗಾದರೆ ಅವರು ಹೇಳಿದ ಪ್ರಮುಖ ಅಂಶಗಳೇನು ಎಂದು ಇಲ್ಲಿ ತಿಳಿಯಿರಿ.
ತುಮಕೂರು ಅಥವಾ ನೆಲಮಂಗಲ ಬಳಿ ಬೆಂಗಳೂರಿನ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣವಾಗಬೇಕು. ಈಗಾಗಲೇ ಈ ಬಗ್ಗೆ ಗೃಹ ಸಚಿವರಾದ ಡಾ.ಜಿ.ಪರಮೇಶ್ವರ್ ಅವರ ಜೊತೆ ನಾನು ಚರ್ಚೆ ಮಾಡಿದ್ದೇನೆ. ನೀವೇನಾದರೂ ಬೇರೆ ಕಡೆ ಮಾಡುವುದಕ್ಕೆ ಪ್ರಯತ್ನಿಸಿದರೆ, ನಮಗೆ ಎಚ್‌ಎಎಲ್ ವಿಮಾನ ನಿಲ್ದಾಣವೇ ಸಾಕು ಅಂತಾ ಹೇಳುತ್ತೇನೆ. ರಾಜ್ಯ ಸರ್ಕಾರಕ್ಕೆ ನಾನು ಟ್ರಂಪ್‌ಕಾರ್ಡ್ ಕೊಟ್ಟಿದ್ದೀನಿ ಅಂತಾ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ ಹೇಳಿದರು.
ಮೊದಲಿನಿಂದಲೂ ತುಮಕೂರಿನಲ್ಲಿ ಬೆಂಗಳೂರಿನ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಮಾಡಿ. ಇದರಿಂದ ತುಂಬಾ ಜನರಿಗೆ ಉದ್ಯೋಗ ಸಿಕ್ಕಂತಾಗಲಿದೆ. ಅದರಲ್ಲೂ ಉತ್ತರ ಕರ್ನಾಟಕ ಭಾಗದವರಿಗೆ ಹೆಚ್ಚು ಸಹಾಯ ಆಗಲಿದೆ ಎಂದು ಜಿ.ಪರಮೇಶ್ವರ್ ಸೇರಿದಂತೆ ಹಲವರು ಸರ್ಕಾರಕ್ಕೆ ಮನವಿ ಮಾಡಿಕೊಳ್ಳುತ್ತಲೇ ಬಂದಿದ್ದಾರೆ.












Click it and Unblock the Notifications