ಬೆಂಗಳೂರು 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಯೋಜನೆ ಸ್ಥಗಿತವಾಗುತ್ತಾ: ಎಂ.ಬಿ ಪಾಟೀಲ್ ಹೇಳಿದ್ದೇನು

Bengaluru 2nd International Airport: ಬೆಂಗಳೂರು ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಪ್ರಸ್ತಾವನೆ ಪ್ರಾಥಮಿಕ ಹಂತದಲ್ಲೇ ಇದ್ದು ಇದೀಗ ಈ ವಿಷಯವಾಗಿ ಸಚಿವ ಎಂ.ಬಿ ಪಾಟೀಲ್ ಅವರು ಮೌನ ಮುರಿದಿದ್ದಾರೆ. ಅಲ್ಲದೇ ಬೆಂಗಳೂರಿನ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಯಾರೇ ಅಡ್ಡಿಪಡಿಸಿದರೂ ಅಥವಾ ಯಾವುದೇ ಅಡ್ಡಿ ಎದುರಾದರೂ ಇದರಿಂದ ನಾವು ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದು ಹೇಳಿದ್ದಾರೆ. ಅಲ್ಲದೇ ಇದೇ ಸಂದರ್ಭದಲ್ಲಿ ಬೆಂಗಳೂರಿನ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣದ ಬಗ್ಗೆ ಎಂ.ಬಿ ಪಾಟೀಲ್ ಅವರು ಮಹತ್ವದ ಮಾಹಿತಿ ಹಂಚಿಕೊಂಡಿದ್ದಾರೆ.

ಕರ್ನಾಟಕದ ಬಹು ನಿರೀಕ್ಷಿತ ಯೋಜನೆಗಳಲ್ಲಿ ಒಂದಾಗಿರುವ ಬೆಂಗಳೂರಿನ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣಕ್ಕೆ ವಿಳಂಬಗಳು ಎದುರಾಗುತ್ತಲ್ಲೇ ಇವೆ. ಕೇಂದ್ರ ಸರ್ಕಾರವು ಈ ಯೋಜನೆಗೆ ನಿರೀಕ್ಷಿತ ಮಟ್ಟದಲ್ಲಿ ಬೆಂಬಲ ನೀಡುತ್ತಿಲ್ಲ ಎನ್ನುವ ಗಂಭೀರವಾದ ಆಕ್ಷೇಪಗಳು ವ್ಯಕ್ತವಾಗುತ್ತಿದೆ. ಇನ್ನು ಬೆಂಗಳೂರು ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ವಿಚಾರದಲ್ಲಿ ಏನು ನಡೆದಿದೆ ಎನ್ನುವ ಬಗ್ಗೆ ರಾಜ್ಯ ಸರ್ಕಾರವೂ ಸಹ ಸ್ಪಷ್ಟವಾದ ಮಾಹಿತಿಯನ್ನು ಹಂಚಿಕೊಳ್ಳುತ್ತಿಲ್ಲ. ಇದರ ನಡುವೆ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು 2033ಕ್ಕೆ ಪ್ರಾರಂಭವಾಗುವುದು ನಿಶ್ಚಿತ ಎಂದು ಎಂ.ಬಿ ಪಾಟೀಲ್ ಅವರು ಹೇಳಿದ್ದಾರೆ.

Bengaluru 2nd International Airport project stalled What did M B Patil say

ಇನ್ನು ಕೆಲವೇ ದಿನಗಳಲ್ಲಿ ಬೆಂಗಳೂರು ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಜಾಗವನ್ನು ಅಂತಿಮಗೊಳಿಸುವುದಾಗಿ ಅವರು ಹೇಳಿದ್ದಾರೆ. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೇಲೆ ಒತ್ತಡ ಹೆಚ್ಚಾಗುತ್ತಿರುವುದರಿಂದಾಗಿ ಈ ವಿಮಾನ ನಿಲ್ದಾಣಕ್ಕೆ ಪರ್ಯಾಯವಾಗಿ, ಬೆಂಗಳೂರಿನ 2 ನೇ ವಿಮಾನ ನಿಲ್ದಾಣ ನಿರ್ಮಾಣ ಮಾಡುವುದಕ್ಕೆ ಒಂದು ವರ್ಷದ ಮುಂಚೆಯೇ ಭಾರೀ ದೊಡ್ಡ ಮಟ್ಟದಲ್ಲಿ ಚರ್ಚೆ ನಡೆದಿತ್ತು.

ಅಲ್ಲದೇ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ವಿಚಾರವಾಗಿ ರಾಜ್ಯಸಭೆಯಲ್ಲೂ ಚರ್ಚೆ ನಡೆದಿತ್ತು. ಆದರೆ, ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣ ವಿಚಾರದಲ್ಲಿ ರಾಜ್ಯ ಸರ್ಕಾರ ಭೂಸ್ವಾಧೀನ ಸೇರಿದಂತೆ ಕೆಲವೊಂದು ವಿಚಾರಗಳ ಬಗ್ಗೆ ಮಾತನಾಡದೆ ಇರುವುದು ಅನುಮಾನಕ್ಕೆ ಕಾರಣವಾಗಿತ್ತು.

ಇದೀಗ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಂಬಂಧಿಸಿದಂತೆ ಸಚಿವ ಎಂ.ಬಿ ಪಾಟೀಲ್ ಅವರು ಟೈಮ್ಸ್‌ ಆಫ್‌ ಇಂಡಿಯಾದೊಂದಿಗೆ ಮಹತ್ವದ ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ಬೆಂಗಳೂರಿನ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಯೋಜನೆ ಜಾರಿಗೆ ಸಂಬಂಧಿಸಿದಂತೆ ಮಹತ್ವದ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ. ಇದು 2033 ರ ವೇಳೆಗೆ ಕಾರ್ಯನಿರ್ವಹಿಸಲಿದೆ.

ತಮಿಳುನಾಡಿನ ಹೊಸೂರಿನಲ್ಲಿ ವಿಮಾನ ನಿಲ್ದಾಣ ನಿರ್ಮಾಣ ಮಾಡುವ ವಿಚಾರವು ಕರ್ನಾಟಕ ಹಾಗೂ ಬೆಂಗಳೂರಿನ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೇಲೆ ಯಾವುದೇ ರೀತಿಯ ಪರಿಣಾಮ ಬೀರುವುದಿಲ್ಲ. ಮುಂದಿನ ದಿನಗಳಲ್ಲಿಯೂ ಏನೇ ಅಡ್ಡಿ ಎದುರಾದರೂ ನಾವು 2ನೇ ವಿಮಾನ ನಿಲ್ದಾಣದ ಯೋಜನೆಯಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ. ಬೆಂಗಳೂರಿನ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಖಂಡಿತವಾಗಿಯೂ ನಿರ್ಮಾಣ ಆಗಲಿದೆ. ತಮಿಳುನಾಡಿನ ವಿಮಾನ ನಿಲ್ದಾಣ ಮಾಡಲಿ ಅಥವಾ ಮಾಡದೆ ಇರಲಿ, ಇದರಿಂದ ನಮ್ಮ ಯೋಜನೆಯ ಮೇಲೆ ಯಾವುದೇ ಪರಿಣಾಮ ಆಗಲ್ಲ ಎಂದಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+