Bomb Threat: ಬೆಂಗಳೂರಿನ 3 ಹೋಟೆಲ್‌ಗಳಿಗೆ ಬಾಂಬ್ ಬೆದರಿಕೆ ಇ-ಮೇಲ್, ಹೈ ಅಲರ್ಟ್

ಬೆಂಗಳೂರು, ಮೇ 23: ಬೆಂಗಳೂರಿನ ಪ್ರಮುಖ ಪ್ರದೇಶಗಳಲ್ಲಿರುವ ಮೂರು ಫೈವ್ ಸ್ಟಾರ್ ಹೋಟೆಲ್‌ಗಳಿಗೆ ಬಾಂಬ್ ಬೆದರಿಕೆಯ ಇ-ಮೇಲ್ ಬಂದಿವೆ. ಈ ಮೂಲಕ ಬೆಳ್ಳಂಬೆಳಗ್ಗೆ ಹೋಟೆಲ್ ಮಾಲೀಕರಿಗೆ, ಸಿಬ್ಬಂದಿ ಶಾಕ್ ನೀಡಲಾಗಿದೆ. ಇ-ಮೇಲ್ ಸ್ವೀಕರಿಸುತ್ತಿದ್ದಂತೆ ಸಿಬ್ಬಂದಿ ಅಲರ್ಟ್ ಆಗಿದ್ದಾರೆ.

ನಗರದ ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ ಪ್ರಮುಖ ಒಟೆರಾ ಹೋಟೆಲ್ ಸೇರಿದಂತೆ ಬೆಂಗಳೂರಿನ ಮೂರು ಹೋಟೆಲ್‌ಗಳಿಗೆ ಇಂದು ಮುಂಜಾನೆ ಬಾಂಬ್ ಬೆದರಿಕೆ ಇಮೇಲ್‌ಗಳು ಬಂದಿವೆ. ಬೆಳಗ್ಗೆ ಸುಮಾರು 2 ಗಂಟೆಗೆ ಇ ಮೇಲ್ ಗಳು ಬಂದಿವೆ ಎಂದು ತಿಳಿದು ಬಂದಿದೆ.

Bengaluru 3 Hotels Received Bomb Threat email Today

ಇ-ಮೇಲ್ ನೋಡುತ್ತಿದ್ದಂತೆ ಸ್ಥಳೀಯ ಪೊಲೀಸ್ ಇನ್ನಿತರ ಸರ್ಕಾರಿ ಅಧಿಕಾರಿಗಳಿಗೆ ಮಾಹಿತಿ ರವಾನಿಸಲಾಗಿದೆ. ಸ್ಥಳಕ್ಕೆ ಬಂದ ಪೊಲೀಸರು ಒಟೆರಾ ಹೋಟೆಲ್‌ನಲ್ಲಿ ಅತ್ಯಧಿಕ ಪೊಲೀಸ್ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ. ಸ್ಥಳಕ್ಕೆ ಬಾಂಬ್ ಸ್ಕ್ವಾಡ್ ಆಗಮಿಸಿ ಪರಿಶೀಲಿಸುತ್ತಿದೆ. ಅಧಿಕಾರಿಗಳು ಸಹ ಸ್ಥಳದಲ್ಲಿದ್ದು, ಕೂಲಂಕುಷವಾಗಿ ಪರಿಶೀಲನೆ ನಡೆಸಿದ್ದಾರೆ.

ಹೋಟೆಲ್‌ಗಳ ಮುಂದೆ ಆತಂಕದ ವಾತಾವರಣ

ಬಾಂಬ್ ಬೆದರಿಕೆ ಕುರಿತು ಮಾಹಿತಿ ಪಸರುತ್ತಿದ್ದಂತೆ ಹೋಟೆಲ್‌ಗಳ ಮುಂದೆ, ಕೆಲವು ಗಂಟೆಗಳ ಅನಿಶ್ಚಿತ ಮತ್ತು ಆತಂಕದ ವಾತಾವರಣ ಏರ್ಪಟ್ಟಿತ್ತು. ಪೊಲೀಸರು ಬಾಂಬ್ ಬೆದರಿಕೆಯನ್ನು ಸುಳ್ಳು ಎಂದು ಘೋಷಿಸಿದ್ದಾರೆ. ಹೋಟೆಲ್ ಸಿಬ್ಬಂದಿ ಮತ್ತು ಅತಿಥಿಗಳಿಗೆ ಅಗತ್ಯವಾದ ರಕ್ಷಣೆ, ಘಟನೆ ಬಗ್ಗೆ ಸೂಕ್ತ ಮಾಹಿತಿ ನೀಡಿದರು. ಜೊತೆಗೆ ಈ ಹೋಟೆಲ್‌ಗಳಲ್ಲಿ ಯಾವುದೇ ಸ್ಪೋಟಕ, ಬಾಂಬ್ ನಂತಹ ವಸ್ತುಗಳು ಪತ್ತೆ ಆಗಿಲ್ಲ ಎಂದು ಅಭಯ ನೀಡಿದರು.

Bengaluru 3 Hotels Received Bomb Threat email Today

ನಂತರ ಹೋಟೆಲ್‌ನಲ್ಲಿ ತಂಗಿದ್ದವರು, ಹೋಟೆಲ್ ಸಿಬ್ಬಂದಿ ಮತ್ತು ಮಾಲೀಕರು ನಿಟ್ಟುಸಿರು ಬಿಟ್ಟಿದ್ದಾರೆ. ಅಲ್ಲದೇ ಈ ಹಿಂದೆ ದಿ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಇಟ್ಟು ಸ್ಪೋಟಿಸಲಾಗಿತ್ತು. ಅದಾದ ಬಳಿಕ ಇಂತಹ ಹುಸಿ ಬಾಂಬ್ ಬೆದರಿಕೆಗಳೇ ಆದರೂ ಜನರ ಭಯಪಡುತ್ತಿದ್ದಾರೆ.

ಹುಸಿ ಬಾಂಬ್ ಬೆದರಿಕೆಗಳ ಸರಣಿಗೆ ಸೇರ್ಪಡೆ

ಈ ಘಟನೆಯು ಈ ಹಿಂದೆ ದೇಶದಲ್ಲಿ ಎಲ್ಲೆಲ್ಲಿ ಬಾಂಬ್ ಬೆದರಿಕೆ ಇಮೇಲ್‌ ಕಳುಹಿಸಲಾಗಿತ್ತೋ, ಆ ಸರಣಿಗಳ ಮುಂದುವರಿ ಭಾಗ ಎನ್ನಲಾಗುತ್ತಿದೆ. ಇಂದಿನ ಬಾಂಬ್ ಬೆದರಿಕೆ ಬೆಂಗಳೂರಿನ ನಾಗರಿಕರಲ್ಲಿ ಸಾಕಷ್ಟು ಕೋಲಾಹಲ ಉಂಟಾಗಲು ಕಾರಣವಾಗಿದೆ.

ಇತ್ತೀಚೆಗೆ ದೆಹಲಿಯಲ್ಲಿ, ಅಹಮದಾಬಾದ್ ಮತ್ತು ಬೆಂಗಳೂರು ಶಾಲೆಗಳಿಗೆ ಇತ್ತೀಚೆಗೆ ಬಾಂಬ್ ಬೆದರಿಕೆ ಇಮೇಲ್‌ಗಳು ಬಂದಿದ್ದವು. ಸೂಕ್ತ ಪರಿಶೀಲನೆ ಬಳಿಕ ಹುಸಿ ಬಾಂಬ್ ಬೆದರಿಕೆ ಎಂದು ತಿಳಿದು ಬಂದವು. ಅಹಮದಾಬಾದ್ ಶಾಲೆಯ ಬಾಂಬ್ ಬೆದರಿಕೆಗೂ ರಷ್ಯಾಕ್ಕೂ ನಂಟು ಇರುವುದನ್ನು ಪೊಲೀಸರು ಪತ್ತೆ ಮಾಡಿದ್ದಾರೆ.

Bengaluru 3 Hotels Received Bomb Threat email Today

ಬೆಂಗಳೂರಿನ ಶಾಲೆಗೆ ಮೇ 14 ಸ್ಪೋಟದ ಬೆದರಿಕೆ

ಬೆಂಗಳೂರಿನ ಜೈನ್ ಹೆರಿಟೇಜ್ ಶಾಲೆಗೆ ಮೇ 14 ರಂದು ಇಮೇಲ್ ಮೂಲಕ ಮಧ್ಯರಾತ್ರಿ ಬಾಂಬ್ ಬೆದರಿಕೆ ಬಂದಿತ್ತು. ಕೂಡಲೇ ಸ್ಪಂದಿಸಿದ ಶಾಲಾ ಅಧಿಕಾರಿಗಳು ಕಗ್ಗಲಿಪುರ ಪೊಲೀಸರನ್ನು ಸಂಪರ್ಕಿಸಲಾಯಿತು. ಸದ್ಯ ಪ್ರದೇಶವನ್ನು ಸುರಕ್ಷಿತವಾಗಿರಿಸಲಾಗಿದೆ. ಬಾಂಬ್ ನಿಷ್ಕ್ರಿಯ ದಳ ಮತ್ತು ಶ್ವಾನದಳದಿಂದ ಸಂಪೂರ್ಣ ತಪಾಸಣೆ ನಡೆಸಲಾಯಿತು. ಆ ಪ್ರಕರಣದ ಬಗ್ಗೆ ತನಿಖೆ ಮುಂದುವರಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+