Get Updates
Get notified of breaking news, exclusive insights, and must-see stories!

ಬೆಂಗಳೂರು ಪದವೀಧರ-ಶಿಕ್ಷಕರ ಕ್ಷೇತ್ರದಲ್ಲಿ 46000 ಮತದಾರರು ಇದ್ದಾರೆ: ಕರಡು ಪಟ್ಟಿಯ ಮಾಹಿತಿ

ಬೆಂಗಳೂರು, ನವೆಂಬರ್ 23: ಕರ್ನಾಟಕ ವಿಧಾನ ಪರಿಷತ್ತಿನ ಬೆಂಗಳೂರು ಪದವೀಧರರ ಕ್ಷೇತ್ರ, ಬೆಂಗಳೂರು ಶಿಕ್ಷಕರ ಕ್ಷೇತ್ರ ಚುನಾವಣೆಯ ಕರಡು ಮತದಾರರ ಪಟ್ಟಿಯನ್ನು ಚುನಾವಣಾ ವಿಭಾಗದ ವಿಶೇಷ ಆಯುಕ್ತರಾದ ಆರ್. ರಾಮಚಂದ್ರನ್ ಅವರು ಗುರುವಾರ ಪ್ರಕಟಿಸಿದ್ದಾರೆ.

ಭಾರತ ಚುನಾವಣಾ ಆಯೋಗದ ನಿರ್ದೇಶನ ಮೇರೆಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ವ್ಯಾಪ್ತಿಯಲ್ಲಿ ಮತದಾರರ ಕರಡು ಪಟ್ಟಿ ಬಿಡುಗಡೆ ಆಗಿದೆ. ಬಿಬಿಎಂಪಿ ವ್ಯಾಪ್ತಿಯ 28 ವಿಧಾನಸಭಾ ಕ್ಷೇತ್ರಗಳ ಪೈಕಿ ಪದವೀಧರರ ಕ್ಷೇತ್ರ ಚುನಾವಣೆಗೆ ಒಟ್ಟು 39,858 ಮತದಾರರು ನೋಂದಣಿ ಮಾಡಿಕೊಂಡಿದ್ದಾರೆ. ಬೆಂಗಳೂರು ಶಿಕ್ಷಕರ ಕ್ಷೇತ್ರ ಚುನಾವಣೆಗೆ 6343 ಮತದಾರರು ಇದ್ದಾರೆ ಎಂದರು.

Bengaluru 46000 voters in Graduate-Teachers Constituency: Shows Draft Voter list

ಸದ್ಯ ಪ್ರಕಟವಾಗಿರುವ ಕರಡು ಮತದಾರರ ಪಟ್ಟಿಯಲ್ಲ ಹಕ್ಕು ಮತ್ತು ಆಕ್ಷೇಪಣೆಗಳು ಇದ್ದಲ್ಲಿ ಸಾರ್ವಜನಿಕರು ಇಂದಿನಿಂದ ಡಿಸೆಂಬರ್ 09 ಒಳಗೆ ಮದದಾನ ನೋಂದಣಾಧಿಕಾರಿಗಳಿಗೆ ಸಲ್ಲಿಸಬೇಕು. ಅದೇ ತಿಂಗಳು ಡಿ.25 ರಂದು ಬರುವಂತಹ ಹಕ್ಕು ಆಕ್ಷೇಪಣೆಗಳನ್ನು ಪರಿಶೀಲಿಸಲಾಗುವುದು.

ಬಳಿಕ ಆಕ್ಷೇಣೆ ಕುರಿತು ಸೂಕ್ತ ನಿರ್ಣಯಗಳನ್ನು ಕೈಗೊಳ್ಳಲಾಗುವುದು. ಇದಲ್ಲದೆ ಸಾಕಷ್ಟು ಪದವಿಧಾರರು ಮತ್ತು ಶಿಕ್ಷಕರನ್ನು ಸೇರ್ಪಡೆ ಮಾಡಿಕೊಳ್ಳಲು ವಿಶೇಷ ಅಭಿಯಾನಗಳನ್ನು ಹಮ್ಮಿಕೊಳ್ಳಲಾಗಿದೆ. ಡಿಸೆಂಬರ್ 30ರಂದು ಅಂತಿಮ ಮತದಾರರ ಪಟ್ಟಿ ಪ್ರಕಟಿಸಲಾಗುವುದು ಎಂದು ಅವರು ಮಾಹಿತಿ ನೀಡಿದರು.

Bengaluru 46000 voters in Graduate-Teachers Constituency: Shows Draft Voter list

ಅಂಚೆ ಮೂಲಕ ಮತದಾರರ ಗುರುತಿನ ಚೀಟಿ ಹಂಚಿಕೆ

ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಮತದಾರರ ಗುರುತಿನ ಚೀಟಿಗಳನ್ನು ಅಂಚೆ ಮೂಲಕ ವಿತರಿಸಲಾಗುತ್ತಿದೆ. ಅದರಂತೆ ಬೆಂಗಳೂರು ಕೇಂದ್ರದಲ್ಲಿ 44,000, ಬೆಂಗಳೂರು ಉತ್ತರದಲ್ಲಿ 52,000, ಬೆಂಗಳೂರು ದಕ್ಷಿಣದಲ್ಲಿ 42,350 ಹಾಗೂ ಬೆಂಗಳೂರು ನಗರದಲ್ಲಿ 97,000 ಮತದಾರರ ಗುರುತಿನ ಚೀಟಿಗಳನ್ನು ವಿತರಿಸುವ ಪ್ರಕ್ರಿಯೆ ನಡೆಯುತ್ತಿದೆ. ಮುಂದಿನ 15 ದಿನಗಳಲ್ಲಿ ಎಲ್ಲರಿಗೂ ಮತದಾರರ ಗುರುತಿನ ಚೀಟಿ ತಲುಪಲಿದೆ ಎಂದು ಹೇಳಿದರು.

ಲೋಕಸಭಾ ಚುನಾವಣೆಗೆ ತಯಾರಿ

ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಈಗಾಗಲೇ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದೆ. ಈ ಸಂಬಂಧ ನಗರದಲ್ಲಿ ವಿಶೇಷ ಅಭಿಯಾನಗಳನ್ನು ಹಮ್ಮಿಕೊಂಡು ನಮೂನೆ-6/7/8 ನೀಡಿ ನೋಂದಣಿ ಮಾಡಿಕೊಳ್ಳುವ ಪ್ರಕ್ರಿಯೆ ನಡೆಯುತ್ತಿದೆ. ಮೃತ ಪಟ್ಟಿರುರುವರನ್ನು ಮತದಾರರ ಪಟ್ಟಿಯಿಂದ ತೆಗೆಯುವ ಪ್ರಕ್ರಿಯೆ ಕೂಡಾ ನಡೆಯುತ್ತಿದ್ದು, ಜನವರಿ 5 ರಂದು ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗುವುದು ಎಂದರು.

ಯುವ ಮತದಾರರಲ್ಲಿ ಮನವಿ

ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯಲ್ಲಿ ಬರುವ 28 ವಿಧಾನಸಭಾ ಕ್ಷೇತ್ರಗಳಲ್ಲಿಯೂ 18 ವರ್ಷ ತುಂಬಿದ ಯುವ ಮತದಾರರು ಸ್ವಯಂಪ್ರೇರಿತವಾಗಿ ಮುಂದೆ ಬಂದು ಮತದಾರರ ಪಟ್ಟಿಯಲ್ಲಿ ನೋಂದಣಿ ಮಾಡಿಸಿಕೊಳ್ಳಬೇಕು. ಜೊತೆಗೆ ಇತರರನ್ನೂ ಮತದಾರರ ಪಟ್ಟಿಯಲ್ಲಿ ಸೇರ್ಪಡೆಯಾಗಲು ಪ್ರೇರಣೆ ನೀಡಬೇಕು. ಈ ಮೂಲಕ ಪ್ರಜಾಪ್ರಭುತ್ವದಲ್ಲಿ ಯುವ ಮತದಾರರ ಶಕ್ತಿಯನ್ನು ತೋರಿಸುವಂತೆ ಚುನಾವಣಾಧಿಕಾರಿಗಳು ಯುವಕರಲ್ಲಿ ಮನವಿ ಮಾಡಿದರು.

ಕರಡು ಮತದಾನ ಪಟ್ಟಿ ಪ್ರಕಟ ಕಾರ್ಯಕ್ರಮದಲ್ಲಿ ಬೆಂಗಳೂರು ಕೇಂದ್ರ/ದಕ್ಷಿಣ/ಉತ್ತರ/ನಗರದ ಅಪರ ಜಿಲ್ಲಾ ಚುನಾವಣಾಧಿಕಾರಿಗಳು, ಚುನಾವಣಾ ವಿಭಾಗದ ಸಹಾಯಕ ಆಯುಕ್ತರಾದ ಅಜಯ್ ಸೇರಿದಂತೆ ಇನ್ನಿತರ ಅಧಿಕಾರಿಗಳು ಪಾಲ್ಗೊಂಡಿದ್ದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+