Bengaluru: ಅ.26 ರಿಂದ 5 ಮೆಮು ರೈಲುಗಳ ಸಂಚಾರ ರದ್ದು: ಸಂಪೂರ್ಣ ಮಾಹಿತಿ ಇಲ್ಲಿದೆ...
ಬೆಂಗಳೂರು ಅಕ್ಟೋಬರ್ 23: ಬೆಂಗಳೂರು ಕಂಟೋನ್ಮೆಂಟ್ ರೈಲು ನಿಲ್ದಾಣದ ಪುನರಾಭಿವೃದ್ಧಿಯನ್ನು ಗಮನದಲ್ಲಿಟ್ಟುಕೊಂಡು ಕೆಲ ರೈಲುಗಳ ಸಂಚಾರವನ್ನು ರದ್ದುಗೊಳಿಸಲಾಗಿದೆ. ಅಕ್ಟೋಬರ್ 26ರಿಂದ ನವೆಂಬರ್ 20 ರವರೆಗೆ ಈ ಕೆಳಗಿನ ರೈಲುಗಳನ್ನು ರದ್ದುಗೊಳಿಸಲಾಗಿದೆ. ರದ್ದಾದ ರೈಲುಗಳ ಸಂಪೂರ್ಣ ಮಾಹಿತಿ ಇಲ್ಲಿದೆ.
ರದ್ದಾದ ರೈಲುಗಳ ಪಟ್ಟಿ ಇಲ್ಲಿದೆ
ರೈಲು ಸಂಖ್ಯೆ 06531/32 ಕೆಎಸ್‌ಆರ್ ಬೆಂಗಳೂರು-ದೇವನಹಳ್ಳಿ-ಕೆಎಸ್‌ಆರ್ ಬೆಂಗಳೂರು ಮೆಮು ವಿಶೇಷ ರೈಲು ರದ್ದಾಗಿದೆ.
ರೈಲು ಸಂಖ್ಯೆ 06533/34 ದೇವನಹಳ್ಳಿ-ಯಲಹಂಕ-ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಮೂಲಕ ಹೋಗುವ ರೈಲು ರದ್ದಾಗಿದೆ.

ರೈಲು ಸಂಖ್ಯೆ 06535/36 ದೇವನಹಳ್ಳಿ-ಬೆಂಗಳೂರು ಕಂಟೋನ್ಮೆಂಟ್-ದೇವನಹಳ್ಳಿ ಮೆಮು ವಿಶೇಷ ರೈಲು ರದ್ದಾಗಿದೆ.
ರೈಲು ಸಂಖ್ಯೆ 06537/38 ದೇವನಹಳ್ಳಿ-ಬೆಂಗಳೂರು ಕಂಟೋನ್ಮೆಂಟ್-ದೇವನಹಳ್ಳಿ ಮೆಮು ವಿಶೇಷ ರೈಲು ರದ್ದಾಗಿದೆ.
ರೈಲು ಸಂಖ್ಯೆ 06539/40 ದೇವನಹಳ್ಳಿ-ಯಲಹಂಕ-ದೇವನಹಳ್ಳಿ ಮೆಮು ವಿಶೇಷ ರೈಲು ಸಂಚಾರ ರದ್ದು ಮಾಡಲಾಗಿದೆ.
ನೈಋತ್ಯ ರೈಲ್ವೆ ವಲಯದ ವ್ಯಾಪ್ತಿಯಲ್ಲಿರುವ ಬೆಂಗಳೂರಿನ ಪುರಾತನ ರೈಲು ನಿಲ್ದಾಣ ಕಂಟೋನ್ಮೆಂಟ್ ರೈಲು ನಿಲ್ದಾಣವಾಗಿದೆ. ಈ ನಿಲ್ದಾಣವನ್ನು ಅಭಿವೃದ್ಧಿ ಮಾಡಲಾಗುತ್ತಿದೆ. ಹೀಗಾಗಿ 5 ಮೆಮು ರೈಲುಗಳು ಅಕ್ಟೋಬರ್ 26 ರಿಂದ ನವೆಂಬರ್ 20 ರವರೆಗೆ ಸಂಚಾರ ರದ್ದುಗೊಳಿಸಲಾಗಿದೆ.
ಕಂಟೋನ್ಮೆಂಟ್ ರೈಲು ನಿಲ್ದಾಣದ ಅಭಿವೃದ್ಧಿಗಾಗಿ ಕಳೆದ ವರ್ಷ ಪ್ರಧಾನಿ ಮೋದಿ ಅವರು ಶಂಕುಸ್ಥಾಪನೆ ಮಾಡಿದ್ದರು. ಸದ್ಯ ಆರಂಭವಾಗಲಿರುವ ಕಾಮಗಾರಿಯಿಂದ ಕಂಟೋನ್ಮೆಂಟ್ ರೈಲು ನಿಲ್ದಾಣಕ್ಕೆ ಹೈಟೆಕ್ ಸ್ಪರ್ಶ ಸಿಗಲಿದೆ. ಪ್ರಯಾಣಿಕರು ಈ ಮಾರ್ಗದಲ್ಲಿ ಸಂಚಾರಿಸುವ ಮುನ್ನ ಸಹಕರಿಸಬೇಕು ಎಂದು ಭಾರತೀಯ ರೈಲ್ವೆ ಇಲಾಖೆ ತಿಳಿಸಿದೆ.












Click it and Unblock the Notifications