• search
  • Live TV
ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಬೆಂಗಳೂರು: ಹೈಸ್ಕೂಲ್ ವಿದ್ಯಾರ್ಥಿಗಳಿಂದ ಅತ್ಯಾಚಾರ

|

ಬೆಂಗಳೂರು, ಮೇ. 4: ಬೆಂಗಳೂರಿನಲ್ಲಿ ಮತ್ತೆ ಅತ್ಯಾಚಾರ ಪ್ರಕರಣಗಳು ಬೆಳಕಿಗೆ ಬರುತ್ತಿದೆ. ಆದರೆ ಈ ಬಾರಿ ರೇಪ್ ಮಾಡಿರುವವರು ಪ್ರೌಢಶಾಲಾ ವಿದ್ಯಾರ್ಥಿಗಳು ಎನ್ನುವುದು ದುರಂತ.

ಬೆಂಗಳೂರಿನ ಬನ್ನೇರುಘಟ್ಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 6 ವರ್ಷದ ಬಾಲಕಿ ಮೇಲೆ ಇಬ್ಬರು ಹೈಸ್ಕೂಲ್ ವಿದ್ಯಾರ್ಥಿಗಳು ಅತ್ಯಾಚಾರ ನಡೆಸಿದ್ದಾರೆ. ಬೇಸಿಗೆ ರಜೆ ಕಳೆಯಲು ಬಾಲಕಿ ಎಚ್ ಎಸ್ಆರ್ ಲೇಔಟ್ ನಲ್ಲಿರುವ ತನ್ನ ಅಜ್ಜಿ ಮನೆಗೆ ಬಂದಿದ್ದಳು. ಶನಿವಾರ ಮಧ್ಯಾಹ್ನ ಬಾಲಕಿ ಆಟವಾಡುತ್ತಿದ್ದ ವೇಳೆ ಇಬ್ಬರು ವಿದ್ಯಾರ್ಥಿಗಳು ಆಕೆಯನ್ನು ನಿರ್ಜನ ಪ್ರದೇಶಕ್ಕೆ ಎಳೆದೊಯ್ದು ಅತ್ಯಾಚಾರ ನಡೆಸಿದ್ದಾರೆ.[ವಿಬ್ ಗಯಾರ್ ಅತ್ಯಾಚಾರ ಪ್ರಕರಣ : ವರದಿ ಕೇಳಿದ ಕೇಂದ್ರ]

ಬಾಲಕಿಯನ್ನು ಹುಡುಕುತ್ತಾ ಬಂದ ಆಕೆಯ ಸಹೋದರ ಕೃತ್ಯವನ್ನು ಕಣ್ಣಾರೆ ಕಂಡು, ಅಲ್ಲಿಂದ ಓಡಿಹೋಗಿ ತನ್ನ ಪೋಷಕರಿಗೆ ವಿಷಯ ತಿಳಿಸಿದ್ದಾನೆ.

ಸ್ಥಳಕ್ಕಾಗಮಿಸಿದ ಪೊಲೀಸರು ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಿ ಪರಿಕ್ಷೆ ನಡೆಸಿದ್ದಾರೆ. ವೈದ್ಯರು ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ನಡೆದಿರುವುದನ್ನು ದೃಢಪಡಿಸಿದ್ದಾರೆ.[ಮೊಬೈಲ್ ಅಲುಗಾಡಿಸಿ, ಕಾಮಾಂಧರನ್ನು ಹಿಡಿದು ಕೊಡಿ]

ಪೋಕ್ಸೋ ಕಾಯಿದೆಯಡಿ ಪ್ರಕರಣ ದಾಖಲಿಸಿಕೊಂಡಿರುವ ಬನ್ನೇರುಘಟ್ಟ ಪೊಲೀಸರು ಒಬ್ಬ ವಿದ್ಯಾರ್ಥಿಯನ್ನು ಬಂಧಿಸಿದ್ದಾರೆ. ತಲೆ ಮರೆಸಿಕೊಂಡಿರುವ ಮತ್ತೊಬ್ಬ ಆರೋಪಿಗಾಗಿ ಶೋಧ ಮುಂದುವರಿಸಿದ್ದಾರೆ.

English summary
Bengaluru: A 6-year-old girl was allegedly raped by two high school boys at Bannerghatta. The incident took place Saturday when she was playing with her brother and the boys. The boys took the girl to an isolated place nearby and raped her.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X