Bengaluru Accident: ಬೆಂಗಳೂರಲ್ಲಿ ಭೀಕರ ಅಪಘಾತ; ಎರಡು ಸ್ಕೂಟರ್‌ಗೆ ಆಂಬುಲೆನ್ಸ್ ಡಿಕ್ಕಿ, ದಂಪತಿ ಸಾವು
ಬೆಂಗಳೂರಿನಲ್ಲಿ ಭೀಕರ ಅಪಘಾತ ಸಂಭವಿಸಿದೆ. ಆಂಬುಲೆನ್ಸ್ ಚಾಲಕನೊಬ್ಬ ಅತಿ ವೇಗವಾಗಿ ವಾಹನ ಚಲಾಯಿಸಿ, ಎರಡು ಬೈಕ್‌ಗಳಿಗೆ ಡಿಕ್ಕಿ ಹೊಡೆದಿರುವ ಘಟನೆ ಬೆಳಕಿಗೆ ಬಂದಿದೆ. ಈ ಪೈಕಿ ಒಂದು ಬೈಕ್‌ನಲ್ಲಿ ತೆರಳುತ್ತಿದ್ದ ದಂಪತಿ ಸಾವನ್ನಪ್ಪಿದ್ದಾರೆ. ಈ ಘಟನೆ ಬಳಿಕ ಆಂಬುಲೆನ್ಸ್ ಚಾಲಕ ಅಲ್ಲಿಂದ ಎಸ್ಕೇಪ್ ಆಗಿದ್ದಾನೆ. ವಿಲ್ಸನ್ ಗಾರ್ಡನ್‌ನ ಕೆಎಚ್ ಜಂಕ್ಷನ್‌ನಲ್ಲಿ ಶನಿವಾರ ತಡರಾತ್ರಿ ಅತಿ ವೇಗವಾಗಿ ಚಾಲನೆ ಮಾಡಿ ಬಂದ ಆಂಬ್ಯುಲೆನ್ಸ್ ಎರಡು ಸ್ಕೂಟರ್‌ಗಳಿಗೆ ಡಿಕ್ಕಿ ಹೊಡೆದ್ದು, ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಪ್ರತ್ಯಕ್ಷದರ್ಶಿಗಳ ಪ್ರಕಾರ ಆಂಬ್ಯುಲೆನ್ಸ್ ಶಾಂತಿನಗರ ಕಡೆಯಿಂದ ಲಾಲ್‌ಬಾಗ್ ಕಡೆಗೆ ವೇಗವಾಗಿ ಬರುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಇಸ್ಮಾಯಿಲ್ ನಾಥನ್ ಮತ್ತು ಅವರ ಪತ್ನಿ ಸಮೀನಾ ಬಾನು ಅವರು ಸಂಚರಿಸುತ್ತಿದ್ದ ಸುಜುಕಿ ಆಕ್ಸೆಸ್ ಸ್ಕೂಟರ್‌ಗೆ ಡಿಕ್ಕಿ ಹೊಡೆದಿತ್ತು. ಬಳಿಕ ಆಂಬ್ಯುಲೆನ್ಸ್ ಚಾಲಕನ ನಿಯಂತ್ರಣ ತಪ್ಪಿ ಮತ್ತೊಂದು ಬೈಕ್‌ಗೆ ಡಿಕ್ಕಿ ಹೊಡೆದಿದೆ. ಸರಣಿಯಾಗಿ ಸಂಭವಿಸಿದ ಈ ಅಪಘಾತದಲ್ಲಿ ಎರಡೂ ಬೈಕ್‌ನಲ್ಲಿದ್ದವರು ನೆಲಕ್ಕೆ ಬಿದ್ದಿದ್ದಾರೆ.

ಚಾಲಕ ಎಸ್ಕೇಪ್
ನಂತರ ಆಂಬ್ಯುಲೆನ್ಸ್ ವೇಗವಾಗಿ ಹೋಗಿ ಫುಟ್‌ಪಾತ್‌ನಲ್ಲಿದ್ದ ಟ್ರಾಫಿಕ್ ಸಿಗ್ನಲ್ ಆಪರೇಟರ್ ಬಾಕ್ಸ್‌ಗೆ ಡಿಕ್ಕಿ ಹೊಡೆದ ನಂತರವೇ ನಿಂತಿತ್ತು. ಈ ಘಟನೆಯ ನಂತರ ಅಲ್ಲಿದ್ದ ಜನರು ಆಂಬ್ಯುಲೆನ್ಸ್ ಅನ್ನು ಉರುಳಿಸಿದ್ದಾರೆ. ಇಷ್ಟೆಲ್ಲ ಅವಾಂತರವಾದರೂ ಆಂಬುಲೆನ್ಸ್ ಚಾಲಕ ಗಂಭೀರವಾಗಿ ಗಾಯಗೊಂಡವರನ್ನು ಅಲ್ಲಿಯೇ ಬಿಟ್ಟು ಪರಾರಿಯಾಗಿದ್ದ. ಆತನನ್ನು ಭಾನುವಾರ ಬೆಳಿಗ್ಗೆ ಪೊಲೀಸರು ಪತ್ತೆ ಹಚ್ಚಿ ಬಂಧಿಸಿದ್ದಾರೆ.
ಅಪಘಾತದಲ್ಲಿ ಭೀಕರವಾಗಿ ಗಾಯಗೊಂಡಿದ್ದ ದಂಪತಿಯನ್ನು ಸ್ಥಳೀಯ ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ ಒಬ್ಬರು ಮೃತಪಟ್ಟಿದ್ದು, ತಲೆಗೆ ತೀವ್ರವಾಗಿ ಗಾಯಗಳಾಗಿದ್ದ ಬಾನು ಅವರು ಚಿಕಿತ್ಸೆ ಫಲಿಸದೆ ಭಾನುವಾರ ಮುಂಜಾನೆ ಮೃತಪಟ್ಟಿದ್ದಾರೆ. ಮತ್ತೊಂದು ಬೈಕ್‌ನಲ್ಲಿದ್ದ ಸವಾರರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಬೆಂಗಳೂರಿನಲ್ಲಿ ಟ್ರಾಫಿಕ್ ಸಿಗ್ನಲ್ ಬಳಿ ವೇಗವಾಗಿ ಬಂದ ಆಂಬ್ಯುಲೆನ್ಸ್ ನಿಯಂತ್ರಣ ತಪ್ಪಿ ಸಂಭವಿಸಿದ ಅಪಘಾತದಲ್ಲಿ ದಂಪತಿ ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಶನಿವಾರ ರಾತ್ರಿ 11 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದ ನಂತರ, ಆಂಬ್ಯುಲೆನ್ಸ್ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ವಿಲ್ಸನ್ ಗಾರ್ಡನ್ ಸಂಚಾರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಆಂಬ್ಯುಲೆನ್ಸ್ ಚಾಲಕನ ವಿರುದ್ಧ ನಿರ್ಲಕ್ಷ್ಯ, ಅತಿವೇಗ ಮತ್ತು ನಿರ್ಲಕ್ಷ್ಯದ ಚಾಲನೆಯಿಂದ ಸಾವು, ಮೋಟಾರು ವಾಹನ ಕಾಯ್ದೆಯ ಸೆಕ್ಷನ್‌ಗಳ ಅಡಿಯಲ್ಲಿ ಕೇಸ್ ದಾಖಲಿಸಿದ್ದಾರೆ. ಆಂಬ್ಯುಲೆನ್ಸ್ ಚಾಲಕನ ಅತಿವೇಗ ಮತ್ತು ಅಜಾಗರೂಕತೆಯೇ ಈ ಘಟನೆಗೆ ಕಾರಣ ಎಂದು ಪೊಲೀಸರು ತಿಳಿಸಿದ್ದಾರೆ. ಸದ್ಯ ತಲೆಮರೆಸಿಕೊಂಡಿದ್ದ ಚಾಲಕನನ್ನು ಬಂಧಿಸಲಾಗಿದೆ.












Click it and Unblock the Notifications