ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಕೋವಿಡ್ ಮಾರ್ಗಸೂಚಿ ಪ್ರಕಟ

|
Google Oneindia Kannada News

ಬೆಂಗಳೂರು, ಡಿಸೆಂಬರ್‌ 23: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ (ಕೆಐಎ) ಶುಕ್ರವಾರ ಭಾರತ ಸರ್ಕಾರದ ಕೋವಿಡ್ ಸಂಬಂಧಿತ ನಿರ್ದೇಶನಗಳಿಗೆ ಅನುಗುಣವಾಗಿ ಅಂತಾರಾಷ್ಟ್ರೀಯ ಆಗಮನಕ್ಕಾಗಿ ಹೊಸ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ.

ಚೀನಾ ಸೇರಿದಂತೆ ಜಗತ್ತಿನ ಅನೇಕ ದೇಶಗಳಲ್ಲಿ ಕೋವಿಡ್ 19 ಪ್ರಕರಣಗಳ ಹೆಚ್ಚಳದ ನಂತರ ಈ ಮಾರ್ಗಸೂಚಿಗಳನ್ನು ನೀಡಲಾಗಿದೆ. ಪರಿಷ್ಕೃತ ಮಾರ್ಗಸೂಚಿಗಳು, ಶನಿವಾರ ಬೆಳಿಗ್ಗೆ 10 ರಿಂದ ಜಾರಿಗೆ ಬರುತ್ತವೆ. ಶೇ. 2ರಷ್ಟು ಪ್ರಯಾಣಿಕರು ರ‍್ಯಾಂಡಮ್‌ ಪರೀಕ್ಷೆಗೆ ಒಳಗಾಗುತ್ತಾರೆ. ಅವರ ಸ್ವ್ಯಾಬ್ ಮಾದರಿಗಳನ್ನು ಪಡೆಯಲಾಗುತ್ತದೆ. ಬಳಿಕ ವಿಮಾನ ನಿಲ್ದಾಣದಿಂದ ನಿರ್ಗಮಿಸುತ್ತಾರೆ. ಅಂತರರಾಷ್ಟ್ರೀಯ ಪ್ರಯಾಣಿಕರು ಥರ್ಮಲ್ ಸ್ಕ್ರೀನಿಂಗ್‌ಗೆ ಒಳಗಾಗುತ್ತಾರೆ ಮತ್ತು ರೋಗಲಕ್ಷಣದ ಪ್ರಯಾಣಿಕರನ್ನು ಪ್ರತ್ಯೇಕಿಸಲಾಗುತ್ತದೆ ಎಂದು ಪ್ರಕಟಣೆ ತಿಳಿಸಿದೆ.

ಒಂದೇ ದಿನ ಚೀನಾದಲ್ಲಿ 3.7 ಕೋಟಿ ಜನರಿಗೆ ಕೋವಿಡ್‌ ಸೋಂಕುಒಂದೇ ದಿನ ಚೀನಾದಲ್ಲಿ 3.7 ಕೋಟಿ ಜನರಿಗೆ ಕೋವಿಡ್‌ ಸೋಂಕು

12 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಆಗಮನದ ಪರೀಕ್ಷೆಯಿಂದ ವಿನಾಯಿತಿ ನೀಡಲಾಗುತ್ತದೆ. ಆದರೆ ರೋಗಲಕ್ಷಣಗಳು ಕಂಡುಬಂದರೆ ಅವರು ಪರೀಕ್ಷೆಗೆ ಒಳಗಾಗುತ್ತಾರೆ ಎಂದು ಪರಿಷ್ಕೃತ ಮಾರ್ಗಸೂಚಿಗಳು ತಿಳಿಸಿವೆ. ರೋಗಲಕ್ಷಣಗಳಿಲ್ಲದ ಪ್ರಯಾಣಿಕರು ತಮ್ಮ ಆರೋಗ್ಯವನ್ನು ಸ್ವಯಂ ನಿಗಾ ವಹಿಸುವಂತೆ ಸೂಚಿಸಲಾಗಿದೆ.

bengaluru Airport issues Covid guidelines for international arrivals

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ಮೇಲೆ ಸರ್ಕಾರ ನಿಗಾ ಇಡಲಿದೆ ಎಂದು ರಾಜ್ಯ ಆರೋಗ್ಯ ಸಚಿವ ಕೆ ಸುಧಾಕರ್ ಬುಧವಾರ ಹೇಳಿದ್ದರು. ದೇಶೀಯ ಪ್ರಯಾಣಕ್ಕೆ ಸಂಬಂಧಿಸಿದಂತೆ ಯಾವುದೇ ನಿರ್ದಿಷ್ಟ ಕೋವಿಡ್ ಸಂಬಂಧಿತ ಅವಶ್ಯಕತೆಗಳು ಅಥವಾ ನಿರ್ಬಂಧಗಳನ್ನು ಘೋಷಿಸಲಾಗಿಲ್ಲ.

ವಿವಿಧೆಡೆ ಕೋವಿಡ್‌ ಪ್ರಕರಣಗಳಲ್ಲಿ ಹೆಚ್ಚಳ ಕಂಡು ಬಂದ ಹಿನ್ನೆಲೆಯಲ್ಲಿ ಬೆಂಗಳೂರು ವಿಶ್ವವಿದ್ಯಾಲಯವು ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಗೆ ಫೇಸ್ ಮಾಸ್ಕ್ ಮತ್ತು ಬೂಸ್ಟರ್ ಡೋಸ್ ಹಾಕಿಸಿಕೊಳ್ಳುವುದನ್ನು ಕಡ್ಡಾಯಗೊಳಿಸಿದೆ. ವಿಶ್ವವಿದ್ಯಾನಿಲಯವು ಸುತ್ತೋಲೆಯಲ್ಲಿ, ಕೋವಿಡ್ -19 ಹರಡುವುದನ್ನು ತಡೆಯಲು ಮಾಸ್ಕ್‌ಗಳನ್ನು ಕಡ್ಡಾಯಗೊಳಿಸುವ ಆರೋಗ್ಯ ಇಲಾಖೆಯ ನಿರ್ದೇಶನವನ್ನು ಉಲ್ಲೇಖಿಸಿದೆ. ಆದರೆ, ಸಾರ್ವಜನಿಕ ಶಿಕ್ಷಣ ಇಲಾಖೆ ಇದುವರೆಗೆ ಯಾವುದೇ ಮಾರ್ಗಸೂಚಿ ಹೊರಡಿಸಿಲ್ಲ. ಈ ಸಂಬಂಧ ಸೋಮವಾರ ಸುತ್ತೋಲೆ ಬರುವ ನಿರೀಕ್ಷೆಯಿದೆ.

English summary
The Kempegowda International Airport (KIA) on Friday released new guidelines for international arrivals in line with the Government of India's Covid-related directives.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X