Vande Bharat Express: ಬೆಳಗಾವಿ - ಬೆಂಗಳೂರು ವಂದೇ ಭಾರತ್ ರೈಲು ಸಂಚಾರದ ವೇಳಾಪಟ್ಟಿಯ ಸಂಪೂರ್ಣ ವಿವರ ಇಲ್ಲಿದೆ!
Vande Bharat Express: ಕರ್ನಾಟಕದ ಬಹು ನಿರೀಕ್ಷಿತ ವಂದೇ ಭಾರತ್ ರೈಲು ಸಂಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರವು ಮಹತ್ವದ ಅಪ್ಡೇಟ್ಸ್ ಕೊಟ್ಟಿದೆ. ಬೆಂಗಳೂರು ಹಾಗೂ ಬೆಳಗಾವಿ ನಗರಗಳ ನಡುವೆ ವಂದೇ ಭಾರತ್ ರೈಲು ಸೇವೆ ಕೊಡಬೇಕು ಎಂದು ಈ ಭಾಗದ ಜನರು ಬಹುದಿನಗಳಿಂದ ಕಾಯುತ್ತಿದ್ದರು. ಇದೀಗ ಕೊನೆಗೂ ಜನರ ನಿರೀಕ್ಷೆ ಅಂತ್ಯವಾಗುವ ಸಮಯ ಬಂದಿದೆ. ಬೆಂಗಳೂರು ಹಾಗೂ ಬೆಳಗಾವಿ ಭಾಗದ ಜನರ ಆಸೆ ಇದೀಗ ಈಡೇರುತ್ತಿದೆ. ಬೆಂಗಳೂರು ಮತ್ತು ಬೆಳಗಾವಿ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನ ಸಂಪೂರ್ಣ ವಿವರ ಹಾಗೂ ವೇಳಾಪಟ್ಟಿ ವಿವರ ಇಲ್ಲಿದೆ.
ಬೆಂಗಳೂರು ಹಾಗೂ ಬೆಳಗಾವಿ ಭಾಗದ ಜನರ ಬಹುದಿನಗಳ ಬೇಡಿಕೆ ಈಡೇರುತ್ತಿದೆ. ಬೆಳಗಾವಿ ಹಾಗೂ ಬೆಂಗಳೂರು ವಂದೇ ಭಾರತ್ ವೇಳಾಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಇದೇ ಆಗಸ್ಟ್ 10ರಂದು (ಭಾನುವಾರ) ಬೆಳಗಾವಿ-ಬೆಂಗಳೂರು ವಂದೇ ಭಾರತ್ ರೈಲಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರಿನಿಂದ ಹಸಿರು ನಿಶಾನೆ ತೋರಿಸಲಿದ್ದಾರೆ ಎಂದು ಸಂಸದ ಪ್ರಹ್ಲಾದ ಜೋಶಿ ಅವರು ಹೇಳಿದ್ದಾರೆ. ಈ ಸಂಬಂಧ ಅವರು ಸೋಷಿಯಲ್ ಮೀಡಿಯಾ ಎಕ್ಸ್‌ನಲ್ಲಿ ಟ್ವೀಟ್ ಮಾಡಿದ್ದಾರೆ.

ಇನ್ನು ಬೆಳಗಾವಿ ಹಾಗೂ ಬೆಂಗಳೂರು ನಡುವೆ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಸಂಚಾರಕ್ಕೆ ಚಾಲನೆ ಕೊಡಬೇಕು ಎಂದು ಬೆಳಗಾವಿ ಲೋಕಸಭಾ ಕ್ಷೇತ್ರದ ಸಂಸದ ಜಗದೀಶ್ ಶೆಟ್ಟರ್ ಅವರು ಸಹ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಚರ್ಚಿಸಿದ್ದರು. ಅಲ್ಲದೇ ಈ ವಿಚಾರವಾಗಿ ಮನವಿಯನ್ನೂ ಮಾಡಿದ್ದರು. ಆಗಸ್ಟ್ 10 ರಂದು ಮಧ್ಯಾಹ್ನ 1 ಗಂಟೆಯ ಸುಮಾರು ಹೊಸ ವಂದೇ ಭಾರತ ರೈಲು ಬೆಂಗಳೂರಿನಿಂದ-ಬೆಳಗಾವಿಗೆ ಉದ್ಘಾಟನಾರ್ಥವಾಗಿ ಸಂಚಾರ ಪ್ರಾರಂಭಿಸಲಿದೆ. ಆಗಸ್ಟ್ 11ರಿಂದ ಬುಕಿಂಗ್ ಪ್ರಾರಂಭವಾಗಲಿದೆ.
ಬೆಳಗಾವಿ-ಬೆಂಗಳೂರು ವಂದೇ ಭಾರತ್ ರೈಲು ಸಂಚಾರದ ವೇಳಾಪಟ್ಟಿ ವಿವರ ಇಲ್ಲಿದೆ
1. ಹೊಸ ಬೆಳಗಾವಿ-ಬೆಂಗಳೂರು ವಂದೇ ಭಾರತ್ ರೈಲು ವಾರದಲ್ಲಿ 6 ದಿನ ಬೆಳಗಾವಿಯಿಂದ (BGM) ಬೆಳಿಗ್ಗೆ 5.20ಕ್ಕೆ ಹೊರಟು ಅದೇ ದಿನ ಬೆಂಗಳೂರಿಗೆ (SBC KSR) ಮಧ್ಯಾಹ್ನ 1.50ಕ್ಕೆ ಬಂದು ತಲುಪಲಿದೆ.
2. ವಾರದಲ್ಲಿ ಆರು ದಿನ ಬೆಂಗಳೂರಿನಿಂದ ವಾಪಸ್ ಬರಲಿದ್ದು. ಅದೇ ದಿನ ಮಧ್ಯಾಹ್ನ 2.20ಕ್ಕೆ ಹೊರಟು ರಾತ್ರಿ 10.40ಕ್ಕೆ ಬೆಳಗಾವಿಯನ್ನು ತಲುಪಲಿದೆ.
ಬೆಂಗಳೂರು - ಬೆಳಗಾವಿ ವಂದೇ ಭಾರತ್ ನಿಲುಗಡೆಗೆ ಅವಕಾವಿರುವ ನಿಲ್ದಾಣಗಳು: ಇನ್ನು ಬೆಂಗಳೂರು ಹಾಗೂ ಬೆಳಗಾವಿ ನಡುವೆ ಸಂಚರಿಸಲಿರುವ ವಂದೇ ಭಾರತ್ ರೈಲು ಬೆಂಗಳೂರು & ಬೆಳಗಾವಿ, ಧಾರವಾಡ, ಹುಬ್ಬಳ್ಳಿ, ಹಾವೇರಿ, ದಾವಣಗೆರೆ ಹಾಗೂ ತುಮಕೂರು ನಿಲ್ದಾಣಗಳಲ್ಲಿ ನಿಲುಗಡೆ ಹೊಂದಿದೆ. ಈ ಮೂಲಕ ಈ ನಗರಗಳ ರೈಲು ಪ್ರಯಾಣಿಕರಿಗೂ ಅನುಕೂಲವಾಗಲಿದೆ. ಅಲ್ಲದೇ ಉತ್ತರ ಕರ್ನಾಟಕ ಹಾಗೂ ದಕ್ಷಿಣ ಕರ್ನಾಟಕದ ನಡುವೆ ಸಂಚರಿಸುವುದರಿಂದ ಈ ಭಾಗಗಳಿಂದ ಬೆಂಗಳೂರಿಗೆ ಬರುವವರಿಗೆ ಹಾಗೂ ಬೆಂಗಳೂರಿನಿಂದ ವಿವಿಧ ನಗರಗಳಿಗೆ ಹೋಗುವವರಿಗೆ ಲಾಭವಾಗಲಿದೆ.
ಪ್ರಹ್ಲಾದ ಜೋಶಿ ಟ್ವೀಟ್: ಇನ್ನು ಈ ವಿಚಾರವಾಗಿ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರು ಸಹ ಟ್ವೀಟ್ ಮಾಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರು ಇದೇ ಭಾನುವಾರ ಕರ್ನಾಟಕ ಪ್ರವಾಸದಂದು ಮೂರು ವಂದೇ ಭಾರತ್ ರೈಲಿಗೆ ಹಸಿರು ನಿಶಾನೆ ತೋರಲಿದ್ದಾರೆ. ಬೆಂಗಳೂರು - ಬೆಳಗಾವಿ, ನಾಗ್ಪುರದ ಅಜ್ನಿ- ಪೂಣಾ ಹಾಗೂ ಅಮೃತಸರ- ಶ್ರೀ ಮಾತಾ ವೈಷ್ಣವೊ ದೇವಿ ಕಟ್ರಾ ಮಧ್ಯೆ ನೂತನ ವಂದೇ ಭಾರತ್ ರೈಲು ಸಂಚರಿಸಲಿದೆ.
ಪ್ರಧಾನಿ ಶ್ರೀ @narendramodi ನರೇಂದ್ರ ಮೋದಿಯವರು ಇದೇ ಭಾನುವಾರ ಕರ್ನಾಟಕ ಪ್ರವಾಸದಂದು ಮೂರು ವಂದೇ ಭಾರತ್ ರೈಲಿಗೆ ಹಸಿರು ನಿಶಾನೆ ತೋರಲಿದ್ದಾರೆ. ಬೆಂಗಳೂರು - ಬೆಳಗಾವಿ, ನಾಗ್ಪುರದ ಅಜ್ನಿ- ಪೂಣಾ ಹಾಗೂ ಅಮೃತಸರ- ಶ್ರೀ ಮಾತಾ ವೈಷ್ಣವೊ ದೇವಿ ಕಟ್ರಾ ಮಧ್ಯೆ ನೂತನ ವಂದೇ ಭಾರತ್ ರೈಲು ಸಂಚರಿಸಲಿದೆ.
— Pralhad Joshi (@JoshiPralhad) August 5, 2025
ಈ ಹಿಂದೆ ನಾನು ಸಲ್ಲಿಸಿದ ಕೋರಿಕೆಯ…
ಈ ಹಿಂದೆ ನಾನು ಸಲ್ಲಿಸಿದ ಕೋರಿಕೆಯ ಮೇರೆಗೆ ಬೆಂಗಳೂರು - ಬೆಳಗಾವಿ ವಂದೇ ಭಾರತ್ ರೈಲಿಗೆ ಅನುಮೋದನೆ ನೀಡಲಾಗಿತ್ತು. ಬೆಳಗಾವಿಯಿಂದ ಬೆಳಗ್ಗೆ 5.20 ನಿಮಿಷಕ್ಕೆ ಹೊರಟು ಬೆಂಗಳೂರಿಗೆ ಮಧ್ಯಾಹ್ನ 1.50 ನಿಮಿಷಕ್ಕೆ ಆಗಮಿಸಲಿದೆ. ಹಾಗೂ, ಬೆಂಗಳೂರಿನಿಂದ ವಾಪಸ್ಸು ಮಧ್ಯಾಹ್ನ 2.20 ನಿಮಿಷಕ್ಕೆ ಹೊರಟು ರಾತ್ರಿ 10.40 ನಿಮಿಷಕ್ಕೆ ಬೆಳಗಾವಿಗೆ ತಲುಪಲಿದೆ. ಈ ಮೂಲಕ ಬೆಂಗಳೂರು, ತುಮಕೂರು, ದಾವಣಗೆರೆ, ಹಾವೇರಿ, ಹುಬ್ಬಳ್ಳಿ, ಧಾರವಾಡ ಹಾಗೂ ಬೆಳಗಾವಿಯ ನಡುವೆ ಸಂಪರ್ಕ ಹೆಚ್ಚಿಸಲಿದೆ ಎಂದು ಅವರು ಹೇಳಿದ್ದಾರೆ.












Click it and Unblock the Notifications